ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಹೊಸ ಮಾರ್ಗಸೂಚಿಯನ್ನು ರಾಜ್ಯ ಸರಕಾರ ಬಿಡುಗಡೆಗೊಳಿಸಿದೆ. ರಾಜ್ಯಾದ್ಯಂತ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ಆದೇಶಿಸಿದೆ. ಈ ಮೂಲಕ ಹೊಸ ಮಾರ್ಗಸೂಚಿಯಲ್ಲಿ 14 ದಿನಗಳ ವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ಆದೇಶಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿದ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು, ನಾಳೆಯಿಂದ ಮೇ.4 ರವರೆಗೆ ಜಾರಿಗೆ ಬರುವಂತೆ 14 ದಿನಗಳ ಕಾಲ ರಾಜ್ಯಾದ್ಯಂತ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಬಾರ್ ಮತ್ತು ರೆಸ್ಟೋರೆಂಟ್ ಬಂದ್ ಮಾಡಲಾಗಿದೆ. ಪಾರ್ಸಲ್ ಗೆ ಅವಕಾಶ ನೀಡಲಾಗಿದೆ ಎಂದರು. ಮದುವೆಗೆ 50 ಜನರಿಗೆ, ಅಂತ್ಯಕ್ರಿಯೆಗೆ 20 ಜನರಿಗೆ ಮಾತ್ರವೇ ಅವಕಾಶ ನೀಡಲಾಗಿದೆ. ಸಿನಿಮಾ ಹಾಲ್, ಸ್ವಿಮ್ಮಿಂಗ್ ಫೂಲ್, ಮಾರ್ಕೆಟ್ ಬಂದ್ ಮಾಡಲಾಗುತ್ತಿದೆ. ಶಾಲಾ-ಕಾಲೇಜು ಮುಚ್ಚಲಾಗುತ್ತಿದೆ. ರಾತ್ರಿ ಪಾಳಿಯಲ್ಲಿ ಕಾರ್ಖಾನೆಗಳಲ್ಲಿ ಕೆಲಸ ಮಾಡಲು ಅವಕಾಶ ನೀಡಲಾಗಿದೆ ಎಂದರು. ರಾತ್ರಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದ್ದು ಎಲ್ಲಾ ಧಾರ್ಮಿಕ ಕ್ಷೇತ್ರಗಳು ಬಂದ್ ಮಾಡಲಾಗುತ್ತಿದೆ. ಸಲೂನ್, ಬ್ಯೂಟಿ ಪಾರ್ಲರ್ ಗೆ ಅವಕಾಶ ನೀಡಲಾಗಿದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…