ಪಾಸಿಟಿವ್‌ ಸುದ್ದಿ | ಕೊರೋನಾ ನಿರ್ವಹಣೆಗೆ ಸಂಸದರ ಪ್ರದೇಶಾಭಿವೃದ್ಧಿ ಅನುದಾನ‌ ಸಂಪೂರ್ಣ ಬಳಕೆ | ದ.ಕ. ಜಿಲ್ಲೆಗೆ 100 ವೆಂಟಿಲೇಟರ್ | ಸಂಸದ ನಳಿನ್‌ ಕುಮಾರ್‌ ಕಟೀಲು ಎಲರ್ಟ್‌ |

May 10, 2021
9:17 PM

ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್‌ ಕುಮಾರ್‌ ಕಟೀಲು ಕೊರೋನಾ ನಿರ್ವಹಣೆಯ ಕಡೆಗೆ ಎಲರ್ಟ್‌ ಆಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎರಡು ವಾರಗಳ ಹಿಂದೆ ಸಂಸದರ ಪ್ರದೇಶಾಭಿವೃದ್ಧಿ  ಅನುದಾನವನ್ನು  ಆಯಾ ಕ್ಷೇತ್ರದಲ್ಲಿ  ಕೋವಿಡ್‌ ನಿರ್ವಹಣೆಗೆ ಬಳಕೆ ಮಾಡಬಹುದು  ಎಂಬ ಸೂಚನೆಯನ್ನು  ಪಾಲಿಸಿದ್ದಾರೆ. ಇದೀಗ ದ.ಕ ಜಿಲ್ಲೆಯ ಕೊವೀಡ್ ನಿರ್ವಹಣೆಗೆ ನಳಿನ್ ಕುಮಾರ್ ಕಟೀಲ್ ರವರಿಂದ ರೂ. 2.50 ಕೋಟಿ  ಅನುದಾನವನ್ನು ಬಳಕೆ ಮಾಡಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

Advertisement

ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಈ ಸಾಲಿನಲ್ಲಿ ಬಂದಂತಹ ಸಂಸದರ ಪ್ರದೇಶಾಭಿವೃದ್ಧಿ ಸಂಪೂರ್ಣ ಅನುದಾನ  ಎರಡೂವರೆ ಕೋಟಿ ರೂಪಾಯಿಗಳನ್ನು  ಕೋವಿಡ್ 19 ನಿರ್ವಹಣೆಗೆ  ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ  ನೀಡಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ 19 ಸಾಂಕ್ರಮಿಕ ರೋಗವನ್ನು ಎದುರಿಸಲು ಬೇಕಾದ ವೈದ್ಯಕೀಯ ಪರಿಕರಗಳು ಇತ್ಯಾದಿಗಳನ್ನು ಅಳವಡಿಸಲು ಈ ಅನುದಾನ ಉಪಯೋಗಿಸಿಕೊಳ್ಳಲು ಅವರು ಸೂಚಿಸಿದ್ದಾರೆ ಎಂದು ಸಂಸದರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

ಇದೇ ವೇಳೆ  ಮುಖ್ಯಮಂತ್ರಿಗಳಾದ  ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಅಳವಡಿಸಲು 100 ಹೆಚ್ಚುವರಿ ವೆಂಟಿಲೇಟರ್ ಗಳನ್ನು ರಾಜ್ಯ ಸರ್ಕಾರದ ವತಿಯಿಂದ ನೀಡಬೇಕೆಂದು ಸಂಸದ ನಳಿನ್‌ ಕುಮಾರ್‌ ಕಟೀಲು ಮನವಿ ಮಾಡಿದ್ದು, ಮುಖ್ಯಮಂತ್ರಿಗಳು ಕೂಡಲೇ ಸ್ಪಂದಿಸಿ ಜಿಲ್ಲೆಗೆ 100 ವೆಂಟಿಲೇಟರ್ ಗಳನ್ನ ನೀಡಲು  ಒಪ್ಪಿಗೆ ಸೂಚಿಸುತ್ತಾರೆ. ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ಎದುರಿಸುವ ನಿಟ್ಟಿನಲ್ಲಿ ಸ್ಪಂದಿಸಿದ ಮಾನ್ಯ ಮುಖ್ಯಮಂತ್ರಿಯವರಿಗೆ ನಳಿನ್ ಕುಮಾರ್ ಕಟೀಲ್ ಅವರು ಕೃತಜ್ಞತೆ ಸಲ್ಲಿಸಿರುತ್ತಾರೆ ಎಂದೂ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

ಮಿರರ್‌ ಫೋಕಸ್‌ :
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಸುಳ್ಯದಲ್ಲಿ  ಕಳೆದ ಕೆಲವು ದಿನಗಳಿಂದ ಕೊರೋನಾ ಪಾಸಿಟಿವ್‌ ಸಂಖ್ಯೆ ಹೆಚ್ಚಾಗುತ್ತಿದ್ದು ಈ ಬಗ್ಗೆ ಯಾವುದೇ ಜನಪ್ರತಿನಿಧಿಗಳು ತುರ್ತು ಕ್ರಮಗಳ ಬಗ್ಗೆ ಸೂಚನೆ, ಸೂಕ್ತ ಕ್ರಮದ ಬಗ್ಗೆ ಸೂಚನೆ ನೀಡದೇ ಇರುವುದರ ಬಗ್ಗೆ ರೂರಲ್‌ ಮಿರರ್‌ ಗಮನ ಸೆಳೆದಿತ್ತು ಹಾಗೂ ಸಂಸದರ ಪ್ರದೇಶಾಭಿವೃದ್ಧಿ ಹಣ ಬಳಕೆಯ ಬಗ್ಗೆ ಪ್ರಧಾನಿಗಳ ಕಾರ್ಯಾಲಯ ತಿಳಿಸಿದ್ದರೂ ಬಳಕೆಗೆ ಸೂಚನೆಯಾಗದೇ ಇರುವ ಬಗ್ಗೆಯೂ ರೂರಲ್‌ ಮಿರರ್‌ ವಿಶ್ಲೇಷಣೆಯಲ್ಲಿ ಮೂಲಕ ಗಮನಸೆಳೆಯಲಾಗಿತ್ತು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸದ್ಯ ಮುಂಗಾರು ಮಳೆ ಆಶಾವಾದ | ಮುಂದಿರುವ ಸವಾಲುಗಳಲ್ಲಿ ತಾಪಮಾನವೇ ಪ್ರಮುಖ |
April 18, 2025
6:57 AM
by: The Rural Mirror ಸುದ್ದಿಜಾಲ
ಯಾಣವನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಪಣ | ಅರಣ್ಯ ಇಲಾಖೆಯಿಂದ ಹಲವು ಕ್ರಮ
April 18, 2025
6:35 AM
by: The Rural Mirror ಸುದ್ದಿಜಾಲ
ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ರೈಲು | ಎಲ್ ಹೆಚ್ ಬಿ ಬೋಗಿ ಅಳವಡಿಸಲು ನೈರುತ್ಯ ರೈಲ್ವೆ  ಸಜ್ಜು
April 18, 2025
6:23 AM
by: The Rural Mirror ಸುದ್ದಿಜಾಲ
ಜಾನುವಾರು ಕಾಲುಬಾಯಿರೋಗ | ಎ.21 ರಿಂದ ಜೂ.4 ಲಸಿಕಾ ಅಭಿಯಾನ
April 18, 2025
6:17 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group