ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲು ಕೊರೋನಾ ನಿರ್ವಹಣೆಯ ಕಡೆಗೆ ಎಲರ್ಟ್ ಆಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎರಡು ವಾರಗಳ ಹಿಂದೆ ಸಂಸದರ ಪ್ರದೇಶಾಭಿವೃದ್ಧಿ ಅನುದಾನವನ್ನು ಆಯಾ ಕ್ಷೇತ್ರದಲ್ಲಿ ಕೋವಿಡ್ ನಿರ್ವಹಣೆಗೆ ಬಳಕೆ ಮಾಡಬಹುದು ಎಂಬ ಸೂಚನೆಯನ್ನು ಪಾಲಿಸಿದ್ದಾರೆ. ಇದೀಗ ದ.ಕ ಜಿಲ್ಲೆಯ ಕೊವೀಡ್ ನಿರ್ವಹಣೆಗೆ ನಳಿನ್ ಕುಮಾರ್ ಕಟೀಲ್ ರವರಿಂದ ರೂ. 2.50 ಕೋಟಿ ಅನುದಾನವನ್ನು ಬಳಕೆ ಮಾಡಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಈ ಸಾಲಿನಲ್ಲಿ ಬಂದಂತಹ ಸಂಸದರ ಪ್ರದೇಶಾಭಿವೃದ್ಧಿ ಸಂಪೂರ್ಣ ಅನುದಾನ ಎರಡೂವರೆ ಕೋಟಿ ರೂಪಾಯಿಗಳನ್ನು ಕೋವಿಡ್ 19 ನಿರ್ವಹಣೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ 19 ಸಾಂಕ್ರಮಿಕ ರೋಗವನ್ನು ಎದುರಿಸಲು ಬೇಕಾದ ವೈದ್ಯಕೀಯ ಪರಿಕರಗಳು ಇತ್ಯಾದಿಗಳನ್ನು ಅಳವಡಿಸಲು ಈ ಅನುದಾನ ಉಪಯೋಗಿಸಿಕೊಳ್ಳಲು ಅವರು ಸೂಚಿಸಿದ್ದಾರೆ ಎಂದು ಸಂಸದರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದೇ ವೇಳೆ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಅಳವಡಿಸಲು 100 ಹೆಚ್ಚುವರಿ ವೆಂಟಿಲೇಟರ್ ಗಳನ್ನು ರಾಜ್ಯ ಸರ್ಕಾರದ ವತಿಯಿಂದ ನೀಡಬೇಕೆಂದು ಸಂಸದ ನಳಿನ್ ಕುಮಾರ್ ಕಟೀಲು ಮನವಿ ಮಾಡಿದ್ದು, ಮುಖ್ಯಮಂತ್ರಿಗಳು ಕೂಡಲೇ ಸ್ಪಂದಿಸಿ ಜಿಲ್ಲೆಗೆ 100 ವೆಂಟಿಲೇಟರ್ ಗಳನ್ನ ನೀಡಲು ಒಪ್ಪಿಗೆ ಸೂಚಿಸುತ್ತಾರೆ. ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ಎದುರಿಸುವ ನಿಟ್ಟಿನಲ್ಲಿ ಸ್ಪಂದಿಸಿದ ಮಾನ್ಯ ಮುಖ್ಯಮಂತ್ರಿಯವರಿಗೆ ನಳಿನ್ ಕುಮಾರ್ ಕಟೀಲ್ ಅವರು ಕೃತಜ್ಞತೆ ಸಲ್ಲಿಸಿರುತ್ತಾರೆ ಎಂದೂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…