Advertisement
ಸುದ್ದಿಗಳು

ದೇಶದಲ್ಲಿ ಲಾಕ್ಡೌನ್‌ ಕಟ್ಟಕಡೆಯ ಆಯ್ಕೆ | ಶ್ರಮಿಕರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲು ರಾಜ್ಯಗಳಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ |

Share

ಕೊರೋನಾ ನಿಯಂತ್ರಣಕ್ಕೆ ದೇಶದಲ್ಲಿ ಮತ್ತೆ ಲಾಕ್ಡೌ ನ್ ಅಗತ್ಯವಿಲ್ಲ. ಆದರೆ ದೇಶವಾಸಿಗಳೆಲ್ಲಾ ಸಾಕಷ್ಟು ಮುಂಜಾಗ್ರತೆ ವಹಿಸಿಕೊಳ್ಳಲೇಬೇಕಾದ ಅನಿವಾರ್ಯತೆ ಇದೆ. ಲಾಕ್ಡೌನ್‌ ಕೊನೆಯ ಆಯ್ಕೆಯಷ್ಟೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮಂಗಳವಾರ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸದ್ಯ ಲಾಕ್ಡೌನ್ ಮಾಡುವುದಿಲ್ಲ, ಆದರೆ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವುದು  ಹಾಗೂ ಜನರು ಯಾರೂ ಮನೆಯಿಂದ ಹೊರಗಡೆ ಅನಗತ್ಯವಾಗಿ ಓಡಾಡಬೇಡಿ  ಎಂದು ಮತ್ತೊಮ್ಮೆ ಮನವಿ ಮಾಡುತ್ತೇನೆ, ಮೈಕ್ರೋ ಕಂಟೋನ್ಮೆಂಟ್ ವಲಯಗಳ ಮೇಲೆ ಗಮನ ಹರಿಸಿ ಎಂದರು. ಎಲ್ಲಾ ರಾಜ್ಯಗಳೂ ಕೂಡಾ ಶ್ರಮಿಕರ ಹಿತ ಕಾಯ್ದುಕೊಂಡು ವಲಸೆ ಸಮಸ್ಯೆಯಾಗದಂತೆ ನೋಡಿಕೊಳ್ಳುವಂತೆ ರಾಜ್ಯಗಳಲ್ಲಿ ಮನವಿ ಮಾಡಿದ ಪ್ರಧಾನಿಗಳಿ , ಕಾರ್ಮಿಕರು ಸೇರಿದಂತೆ ಯಾರೂ ಗುಳೆ ಹೋಗದಂತೆ ಮೋದಿ ಮನವಿ ಮಾಡಿದರು. ಎಲ್ಲಾ ರಾಜ್ಯಗಳೂ ಈ ನಿಟ್ಟಿನಲ್ಲಿ  ಗಮನಹರಿಸಬೇಕು, ಯಾವುದೇ ಉದ್ಯಮಗಳು ಬಂದ್‌ ಆಗಲಾರದು ಎಂದರು.

ಕೊರೋನಾ ವಿರುದ್ಧ ದೇಶ ಮತ್ತೊಮ್ಮೆ ಹೋರಾಟ ನಡೆಸಬೇಕಿದೆ. ಎರಡನೇ ಅಲೆ ರಭಸವಾಗಿ ಅಪ್ಪಳಿಸಿದೆ, ಯಾರೂ ಧೈರ್ಯಗೆಡುವ ಅಗತ್ಯವಿಲ್ಲ. ದೇಶದ ಎಲ್ಲಾ ವೈದ್ಯರೂ ಈ ಬಾರಿ ಸೂಕ್ತ ಚಿಕಿತ್ಸೆ ನೀಡಲು ಸಿದ್ಧರಾಗಿದ್ದಾರೆ. ಆಮ್ಲಜನಕದ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಲಾಗಿದೆ ಎಂದರು.ದೇಶದಲ್ಲಿ ಲಸಿಕೆ ಉತ್ಪಾದನೆ ಹೆಚ್ಚಾಗಿದೆ. ಇದುವರೆಗೂ 12 ಕೋಟಿ ಮಂದಿಗೆ ಲಸಿಕೆ ನೀಡಿದ್ದೇವೆ. ಹದಿನೆಂಟು ವರ್ಷಮೇಲ್ಪಟ್ಟವರಿಗೆ ಮೇ 1ರಿಂದ ಲಸಿಕೆಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

24 hours ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

24 hours ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

1 day ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

1 day ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

2 days ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

2 days ago