ಕೊರೋನಾ ಲಾಕ್ಡೌನ್‌ ವಿಸ್ತರಣೆ ಬಗ್ಗೆ ಮೇ 23 ರಂದು ನಿರ್ಧಾರ – ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಸ್ಪಷ್ಟನೆ | ಬಡವರಿಗಾಗಿ ವಿಶೇಷ ಪ್ಯಾಕೇಜ್ ಘೋಷಿಸಿದ ಬಿ ಎಸ್‌ ವೈ |

May 19, 2021
12:08 PM

ರಾಜ್ಯದಲ್ಲಿ ಲಾಕ್ಡೌನ್‌ ವಿಸ್ತರಣೆ ಬಗ್ಗೆ ಮೇ.23  ರಂದು ನಿರ್ಧಾರ ಮಾಡಲಾಗುತ್ತದೆ. ಸದ್ಯ  ಮೇ 24ರ ತನಕ ಲಾಕ್ಡೌನ್‌ ಜಾರಿಯಲ್ಲಿದೆ ಎಂದು ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

Advertisement

ಬುಧವಾರ ಸುದ್ದಿಗೋಷ್ಟಿಯಲ್ಲಿ  ಮಾತನಾಡಿದ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಕೊರೋನಾ 2  ನೇ ಅಲೆ ಹರಡುವುದು  ತಡೆಯಲು ಈಗಾಗಲೇ ಮೇ 10 ರಿಂದ 24ರ ತನಕ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಈ ಅವಧಿಯಲ್ಲಿ  ಆರ್ಥಿಕ ನಷ್ಟ ಅನುಭವಿಸಿದ ಜನರಿಗಾಗಿ ಕರ್ನಾಟಕ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ ಎಂದು ತಿಳಿಸಿದರು.  ಸುಮಾರು 1,250 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಇದಾಗಿದ್ದು  ಆಟೋ ಮತ್ತು ಟ್ಯಾಕ್ಸಿ ಚಾಲಕರು ಸೇರಿದಂತೆ ರಾಜ್ಯದ ಶ್ರಮಿಕರಿಗೆ, ಬಡವರಿಗೆ ಈ ಪ್ಯಾಕೇಜ್‌ ಲಭ್ಯವಾಗಲಿದೆ ಎಂದರು. ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್​ಗೆ 10 ಸಾವಿರ ರೂ. ಪರಿಹಾರ ನೀಡಲಾಗುವುದು. ಕಟ್ಟಡ ಕಾರ್ಮಿಕರಿಗೆ – 490 ಕೋಟಿ ರೂ. ಮೀಸಲಿಡಲಾಗಿದೆ. ಅಸಂಘಟಿತ ಕಾರ್ಮಿಕರಿಗೆ- 61 ಕೋಟಿ ರೂ, ರಸ್ತೆ ಬದಿ ವ್ಯಾಪಾರಸ್ಥರಿಗೆ 2 ಸಾವಿರ ರೂಪಾಯಿಯಂತೆ ಒಟ್ಟು 45 ಕೋಟಿ ಖರ್ಚು ಮಾಡಲಾಗಿದೆ. ಕಲಾವಿದರಿಗೆ, ಕಲಾತಂಡಗಳಿಗೆ 2,000 ರೂ., ಹಣ್ಣು, ತರಕಾರಿ ಬೆಳೆಗಾರರಿಗೆ 10 ಸಾವಿರ ರೂ. ಸಹಾಯ ಧನ, ಬಿಬಿಎಂಪಿ, ನಗರಾಭಿವೃದ್ಧಿ ಅಡಿಯಲ್ಲಿ ಇಂದಿರಾ ಕ್ಯಾಂಟೀನ್​ನಲ್ಲಿ 6 ಲಕ್ಷ ಜನರಿಗೆ ಊಟ ನೀಡಲಾಗುತ್ತಿದೆ. ಇದಕ್ಕೆ 25 ಕೋಟಿ ಖರ್ಚು ಆಗುತ್ತಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

ಸದ್ಯ ಲಾಕ್ಡೌನ್‌ ಘೋಷಣೆ ಇದ್ದು ಮೇ 23 ರಂದು  ವಿಸ್ತರಣೆ  ಬಗ್ಗೆ ತೀರ್ಮಾನವನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಜಿಡಿಪಿಯಲ್ಲಿ ಗಮನಾರ್ಹ ಪ್ರಗತಿ
August 18, 2025
2:39 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 18-08-2025 | ವಾಯುಭಾರ ಕುಸಿತದ ಮಳೆಯ ಅಬ್ಬರ | ಆ.19-20 ರಿಂದ ಮಳೆ ಕಡಿಮೆ |
August 18, 2025
12:52 PM
by: ಸಾಯಿಶೇಖರ್ ಕರಿಕಳ
ನ್ಯಾನೊ ಯೂರಿಯಾ ಬಳಕೆಯಿಂದ ಶೇಕಡಾ 80 ರಷ್ಟು ಇಳುವರಿ ಸಾಧ್ಯ
August 18, 2025
7:43 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ 17 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಚಿಂತನೆ
August 18, 2025
7:39 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group