ರಾಜ್ಯದಲ್ಲಿ ಲಾಕ್ಡೌನ್ ವಿಸ್ತರಣೆ ಬಗ್ಗೆ ಮೇ.23 ರಂದು ನಿರ್ಧಾರ ಮಾಡಲಾಗುತ್ತದೆ. ಸದ್ಯ ಮೇ 24ರ ತನಕ ಲಾಕ್ಡೌನ್ ಜಾರಿಯಲ್ಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೊರೋನಾ 2 ನೇ ಅಲೆ ಹರಡುವುದು ತಡೆಯಲು ಈಗಾಗಲೇ ಮೇ 10 ರಿಂದ 24ರ ತನಕ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಈ ಅವಧಿಯಲ್ಲಿ ಆರ್ಥಿಕ ನಷ್ಟ ಅನುಭವಿಸಿದ ಜನರಿಗಾಗಿ ಕರ್ನಾಟಕ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ ಎಂದು ತಿಳಿಸಿದರು. ಸುಮಾರು 1,250 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಇದಾಗಿದ್ದು ಆಟೋ ಮತ್ತು ಟ್ಯಾಕ್ಸಿ ಚಾಲಕರು ಸೇರಿದಂತೆ ರಾಜ್ಯದ ಶ್ರಮಿಕರಿಗೆ, ಬಡವರಿಗೆ ಈ ಪ್ಯಾಕೇಜ್ ಲಭ್ಯವಾಗಲಿದೆ ಎಂದರು. ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ಗೆ 10 ಸಾವಿರ ರೂ. ಪರಿಹಾರ ನೀಡಲಾಗುವುದು. ಕಟ್ಟಡ ಕಾರ್ಮಿಕರಿಗೆ – 490 ಕೋಟಿ ರೂ. ಮೀಸಲಿಡಲಾಗಿದೆ. ಅಸಂಘಟಿತ ಕಾರ್ಮಿಕರಿಗೆ- 61 ಕೋಟಿ ರೂ, ರಸ್ತೆ ಬದಿ ವ್ಯಾಪಾರಸ್ಥರಿಗೆ 2 ಸಾವಿರ ರೂಪಾಯಿಯಂತೆ ಒಟ್ಟು 45 ಕೋಟಿ ಖರ್ಚು ಮಾಡಲಾಗಿದೆ. ಕಲಾವಿದರಿಗೆ, ಕಲಾತಂಡಗಳಿಗೆ 2,000 ರೂ., ಹಣ್ಣು, ತರಕಾರಿ ಬೆಳೆಗಾರರಿಗೆ 10 ಸಾವಿರ ರೂ. ಸಹಾಯ ಧನ, ಬಿಬಿಎಂಪಿ, ನಗರಾಭಿವೃದ್ಧಿ ಅಡಿಯಲ್ಲಿ ಇಂದಿರಾ ಕ್ಯಾಂಟೀನ್ನಲ್ಲಿ 6 ಲಕ್ಷ ಜನರಿಗೆ ಊಟ ನೀಡಲಾಗುತ್ತಿದೆ. ಇದಕ್ಕೆ 25 ಕೋಟಿ ಖರ್ಚು ಆಗುತ್ತಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.
ಸದ್ಯ ಲಾಕ್ಡೌನ್ ಘೋಷಣೆ ಇದ್ದು ಮೇ 23 ರಂದು ವಿಸ್ತರಣೆ ಬಗ್ಗೆ ತೀರ್ಮಾನವನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಅಡಿಕೆ ಬೆಳೆಗಾರರಿಗೆ ಈ ಬಾರಿ ಶೇ.50 ಕ್ಕಿಂತ ಅಧಿಕ ಪ್ರಮಾಣದಲ್ಲಿ ಅಡಿಕೆ…
ಒಡಿಸ್ಸಾದಲ್ಲಿರುವುದು ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಮಹಾರಾಷ್ಟ್ರ ಹಾಗೂ ಗುಜರಾತ್ ಗೆ ತಲಪುವ…
ಅರಣ್ಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ವಹಿಸಲಾಗಿದ್ದು, 540 ಅರಣ್ಯ ರಕ್ಷಕರ…
ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಸೋಮವಾರ ಹಲವು…
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎರಡು ಹಂತಗಳಲ್ಲಿ ಹಾಲಿನ ದರ ಒಟ್ಟು…
ರಾಜ್ಯದಲ್ಲಿ ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ…