ರಾಜ್ಯದಲ್ಲಿ ಕೊರೋನಾ ಅಬ್ಬರ ಹೆಚ್ಚುತ್ತಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ರಣಕೇಕೆ ಹಾಕುತ್ತಿದೆ. ಕೋವಿಡ್ ಸೋಂಕಿನ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಹೀಗಾಗಿ ಇಂದು ಸಂಜೆಯ ನಂತರ ರಾಜ್ಯದಲ್ಲಿ ಕಠಿಣ ಕ್ರಮಗಳು ಜಾರಿಯಾಗುವ ಸೂಚನೆಯನ್ನು ಸರಕಾರ ನೀಡಿದೆ.
ರಾಜ್ಯದಲ್ಲಿನ ಕೊರೋನಾ ಸ್ಥಿತಿಗತಿಗಳ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಕಂದಾಯ ಸಚಿವ ಅಶೋಕ್, ರಾಜ್ಯಪಾಲರು ಇಂದು ಸಂಜೆ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರು ಸೇರಿದಂತೆ ಸರ್ವ ಪಕ್ಷ ನಾಯಕರೊಂದಿಗೆ ನಡೆಸುವ ಸಭೆಯ ನಂತರ ರಾಜ್ಯದಲ್ಲಿ ಕಠಿಣ ನಿಯಮಗಳು ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.
Advertisement
ಈಗಾಗಲೇ ಆಮ್ಲಜನಕದ ಕೊರತೆಯಾಗದಂತೆ ಸರಕಾರ ಮುನ್ನೆಚ್ಚರಿಕೆ ಕೈಗೊಂಡಿದೆ. ಯಾವ ಆಸ್ಪತ್ರೆಗಳಲ್ಲಿ ಅವಕಾಶವಿದೆಯೋ ಅಲ್ಲಿಗೆ ಆಮ್ಲಜನಕ ಕೊಡಿಸಲಾಗುವುದು. ಸಿಲಿಂಡರ್ ಗಳ ಮೂಲಕವೇ ವಿತರಿಸುವ ಮೂಲಕ ದಾಸ್ತಾನಿಗೆ ಕ್ರಮ ಕೈಗೊಳ್ಳುವ ವ್ಯವಸ್ಥೆ ಮಾಡಲಾಗುವುದು ಎಂದು ಅಶೋಕ್ ಹೇಳಿದ್ದಾರೆ. ಕೊರೋನಾ ಸೋಂಕು ನಿಯಂತ್ರಿಸಲು ಎಲ್ಲರ ಸಹಕಾರ ಅಗತ್ಯವಾಗಿದ್ದು, ಕೋವಿಡ್ ಎರಡನೆ ಅಲೆ ತಡೆಯಲು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡುತ್ತೇವೆ ಎಂದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement