Advertisement
MIRROR FOCUS

ಕೊರೋನಾ ಭಯ ಬಿಡಿ ಧೈರ್ಯವಾಗಿರಿ | ಜನರಿಗೆ ಧೈರ್ಯ ತುಂಬಿದ ಗ್ರಾಮ ಭಾರತ ತಂಡದ ಸದಸ್ಯರು |

Share

ಕೊರೋನಾ ಪಾಸಿಟಿವ್‌ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಗ್ರಾಮೀಣ ಭಾಗದಲ್ಲಿ ಜನರಿಗೆ ಧೈರ್ಯ ತುಂಬುವ ಕಾರ್ಯವನ್ನು ಸುಳ್ಯ ತಾಲೂಕಿನ ಗ್ರಾಮ ಭಾರತ ತಂಡದ ಗ್ರಾ ಪಂ ಸದಸ್ಯರು ಹಾಗೂ ಗ್ರಾಮ ಭಾರತ ತಂಡದ ಸದಸ್ಯರು ನಡೆಸಿದರು.

ಕಳೆದ ಕೆಲವು ದಿನಗಳ ಹಿಂದೆ ಕೊರೋನಾ ಪಾಸಿಟಿವ್‌ ಕಂಡುಬಂದು ಸಂಪೂರ್ಣ ಗುಣಮುಖರಾದವರ ಮನೆಗೆ ಹಾಗೂ ಪಾಸಿಟಿವ್‌ ಕಂಡುಬಂದಿರುವ ಮತ್ತು  ಸಾಮಾನ್ಯ ಜ್ವರ ಬಂದಿರುವ ಮನೆಗಳಿಗೆ ಭೇಟಿ ನೀಡಿದ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾ ಪಂ ಒಂದನೇ ವಾರ್ಡ್‌ ನ ಗ್ರಾಮ ಭಾರತದ ತಂಡದ ಗ್ರಾ ಪಂ ಸದಸ್ಯರು ಹಾಗೂ ಗ್ರಾಮ ಭಾರತ ತಂಡದ ಸದಸ್ಯರು  ಧೈರ್ಯ ತುಂಬಿದರು. ಜ್ವರ ಪೀಡಿತರ ಮನೆಗೆ ತೆರಳಿ ಮಾನಸಿಕ ಧೈರ್ಯ ತುಂಬುವುದು, ಮನೆ ಪರಿಸ್ಥಿತಿ ಗಮನಿಸಿ  ಅಗತ್ಯ ವಸ್ತುಗಳ ವಿತರಣೆ ಮತ್ತು ಔಷಧಿಯ ಸಲಹೆ , ತುರ್ತು ಚಿಕಿತ್ಸೆಗೆ ಬೇಕಾದ ನೆರವಿಗೆ ಮಾಹಿತಿ ನೀಡಲಾಯಿತು. ಯಾವುದೇ ಕಾರಣಕ್ಕೂ ಗ್ರಾಮಸ್ಥರು ಭಯಗೊಳ್ಳುವ ಅವಶ್ಯಕತೆ ಇಲ್ಲ, ಸಾಕಷ್ಟು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು  ಸದಸ್ಯರು ಧೈರ್ಯ ತುಂಬಿದರು. ಯಾವುದೇ ಸಂದರ್ಭದಲ್ಲಿ ತುರ್ತು ಚಿಕಿತ್ಸೆ ಅಗತ್ಯವಿದ್ದರೆ   ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳುವಂತೆ ಸಲಹೆ ನೀಡಿದರು. ಯಾವುದೇ ಸಹಾಯ ಬೇಕಿದ್ದರೆ ಗ್ರಾ ಪಂ ಸದಸ್ಯರುಗಳಿಗೆ ಅಥವಾ ಸ್ವಯಂ ಸೇವಕರಿಗೆ ಮಾಹಿತಿ ನೀಡಲು ತಿಳಿಸಲಾಯಿತು.

ಈ ಸಂದರ್ಭ ಗ್ರಾ ಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾ ಕುಮಾರಿ ಆಜಡ್ಕ,  ಭರತ್ ಕೆವಿ, ವಸಂತ ಮೊಗ್ರ  ಗ್ರಾಮ ಭಾರತದ ತಂಡದ ಸದಸ್ಯರುಗಳಾದ ಹರ್ಷಿತ್‌ ಕಾಂತಿಲ, ಬಾಬು ಕಮಿಲ, ರವೀಂದ್ರ ಆಜಡ್ಕ, ಮಹೇಶ್‌ ಪುಚ್ಚಪ್ಪಾಡಿ ಮೊದಲಾದವರು ಇದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

3 minutes ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

17 minutes ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

20 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

20 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

20 hours ago