Advertisement
ಮಾಹಿತಿ

ಕೊರೋನಾ ಅನ್ಲಾಕ್‌ | ದ ಕ ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ

Share

ದ.ಕ ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಸರಕಾರದ ಪ್ರಸಕ್ತ ಸಾಲಿನ ಅ.1 ರ ಅನ್ಲಾಕ್‌ 5  ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ರಾಜೇಂದ್ರ ಕೆ.ವಿ  ಆದೇಶ ಹೊರಡಿಸಿದ್ದಾರೆ.

Advertisement
Advertisement
Advertisement

ಹೀಗಿದೆ ಮುಂಜಾಗ್ರತಾ ಕ್ರಮಗಳು :

Advertisement

ಶಾಲೆಗಳು, ಕಾಲೇಜುಗಳ, ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳು ಅ.15  ನಂತರ ಹಂತ-ಹಂತವಾಗಿ ತೀರ್ಮಾನ ತೆಗೆದುಕೊಳ್ಳಬಹುದಾಗಿದೆ. ಸಂಬಂಧಪಟ್ಟ ಶಾಲೆಯ-ಸಂಸ್ಥೆಯ ಆಡಳಿತ ಮಂಡಳಿಯೊಂದಿಗೆ ಸಮಾಲೋಚಿಸಿ ಪರಿಸ್ಥಿತಿಯ ನಿರ್ಧರಣೆಯ ಆಧಾರದ ಮೇಲೆ ಮತ್ತು ಈ ಕೆಳಕಂಡ ಚಟುವಟಿಕೆಗಳಿಗೆ ಅನುಮತಿ ನೀಡಲಾಗುವುದು. ಆನ್ ಲೈನ್ /ದೂರಶಿಕ್ಷಣ ಕಲಿಕೆಗಳಿಗೆ ಆದ್ಯತಾನುಸಾರ ಅನುಮತಿ ಮುಂದುವರಿಸಬೇಕು ಮತ್ತು ಪ್ರೋತ್ಸಾಹಿಸಲಾಗುವುದು. ಶಾಲೆಗಳು ಆನ್ ಲೈನ್ ತರಗತಿಗಳನ್ನು ನಡೆಸುತ್ತಿದ್ದು, ಕೆಲವು ವಿದ್ಯಾರ್ಥಿಗಳು ಖುದ್ದಾಗಿ ಶಾಲೆಗೆ ಹಾಜರಾಗುವುದಕ್ಕೆ ಬದಲಾಗಿ ಆನ್ ಲೈನ್ ತರಗತಿಗಳಿಗೆ ಹಾಜರಾಗಲು ಆಯ್ಕೆ ಮಾಡಿಕೊಂಡಲ್ಲಿ, ಹಾಗೆ ಮಾಡಲು ಅವರಿಗೆ ಅನುಮತಿ ನೀಡುವುದು. ವಿದ್ಯಾರ್ಥಿಗಳು ತಮ್ಮ ತಂದೆ-ತಾಯಿ ಮತ್ತು ಪೋಷಕರ ಲಿಖಿತ ಅನುಮತಿಯೊಂದಿಗೆ ಮಾತ್ರವೇ ಶಾಲೆಗಳಿಗೆ /ಸಂಸ್ಥೆಗಳಿಗೆ ಹಾಜರಾಗಬಹುದಾಗಿದೆ. ಹಾಜರಾತಿಯನ್ನು ಕಡ್ಡಾಯಗೊಳಿಸಬಾರದು ಮತ್ತು ಅದು ಸಂಪೂರ್ಣವಾಗಿ ಪೋಷಕರ ಅನುಮತಿಯ ಮೇಲೆ ಅವಲಂಬಿತವಾಗಿರಬೇಕು. ಕರ್ನಾಟಕ ಸರ್ಕಾರದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಸಮಾಲೋಚಿಸಿ ಸ್ಥಳೀಯ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ , ಶಿಕ್ಷಣ ಮಂತ್ರಾಲಯ ಭಾರತ ಸರ್ಕಾರ ಇವರು ಹೊರಡಿಸಲಿರುವ ಮಾದರಿ ಕಾರ್ಯನಿರ್ವಹಣಾ ಪ್ರಕ್ರಿಯೆ ನಿಯಮವನ್ನು ಶಾಲೆಗಳು/ ಸಂಸ್ಥೆಗಳು ಪಾಲಿಸಬೇಕು.

ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯು ಕಾಲೇಜುಗಳು/ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸುವ ಸಮಯ ಕುರಿತಂತೆ ಉನ್ನತ ಶಿಕ್ಷಣ ಇಲಾಖೆ , ಶಿಕ್ಷಣ ಮಂತ್ರಾಲಯ , ಭಾರತ ಸರ್ಕಾರದ ಇದರೊಂದಿಗೆ ಸಮಾಲೋಚಿಸಿ ಪರಿಸ್ಥಿತಿಯ ನಿರ್ಧಾರಣೆಯ ಆಧಾರದ ಮೇಲೆ ತೀರ್ಮಾನ ಕೈಗೊಳ್ಳಲಿದ್ದು, ಆನ್ ಲೈನ್ /ದೂರಶಿಕ್ಷಣ ಕಲಿಕೆಗಳಿಗೆ ಆದ್ಯತಾನುಸಾರ ಅನುಮತಿ ಮುಂದುವರಿಸಬೇಕು ಮತ್ತು ಪ್ರೋತ್ಸಾಹಿಸಬೇಕು. ಪ್ರಯೋಗಾಲಯ ಮತ್ತು ಪ್ರಾಯೋಗಿಕ ಚಟುವಟಿಕೆಗಳ ಅಗತ್ಯವಿರುವ ವಿಜ್ಞಾನ ಮತ್ತು ತಂತ್ರಾಜ್ಞಾನ  ವಿಷಯದಲ್ಲಿನ ಸಂಶೋಧನಾ ವಿದ್ಯಾರ್ಥಿಗಳು (ಪಿಎಚ್ ಡಿ) ಮತ್ತು ಸ್ನಾತಕೋತರ ವಿದ್ಯಾರ್ಥಿಗಳಿಗಾಗಿ ಮಾತ್ರ ಉನ್ನತ ಶಿಕ್ಷಣ ಸಂಸ್ಥೆಗಳಿಗೆ 15 ಅಕ್ಟೋಬರ್ 2020 ರಿಂದ ಕೇಂದ್ರ ಹಣಕಾಸು ನೆರವಿನ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಿಸಿದಂತೆ , ಸಂಸ್ಥೆಯ ಮುಖ್ಯಸ್ಥರು ವಿಜ್ಞಾನ ಮತ್ತು ತಂತ್ರಜ್ಞಾನ ಆಧ್ಯಯನ ವಿಷಯದಲ್ಲಿನ ಸಂಶೋಧನಾ ವಿದ್ಯಾರ್ಥಿಗಳು (ಪಿಎಚ್ ಡಿ) ಮತ್ತು ಸ್ನಾತಕೋತರ ವಿದ್ಯಾರ್ಥಿಗಳು ಪ್ರಯೋಗಾಲಯ ಮತ್ತು ಪ್ರಾಯೋಗಿಕ ಚಟುವಟಿಕೆಗಳಿಗಾಗಿ ಕಾಲೇಜುಗಳಿಗೆ ಹಾಜರಾಗುವುದು ಅತ್ಯಗತ್ಯವಿದೆ ಎಂಬುದನ್ನು ಸ್ವತ: ಮನವರಿಕೆ ಮಾಡಿಕೊಳ್ಳಲಾಗುವುದು. ವಿಶ್ವವಿದ್ಯಾಲಯಗಳು , ಖಾಸಗಿ ವಿಶ್ವವಿದ್ಯಾಲಯಗಳು ಮೊದಲಾದ ಇತರೆ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯು ತೆಗೆದುಕೊಳ್ಳುವ ತೀರ್ಮಾನಕ್ಕನುಸಾರವಾಗಿ ಪ್ರಯೋಗಾಲಯ ಮತ್ತು ಪ್ರಾಯೋಗಿಕ ಚಟುವಟಿಕೆಗಳ ಅಗತ್ಯವಿರುವ ವಿಜ್ಞಾನ ಮತ್ತು ತಂತ್ರಜ್ಞಾನ ಅಧ್ಯಯನ ವಿಷಯದಲ್ಲಿನ ಸಂಶೋಧನಾ ವಿದ್ಯಾರ್ಥಿಗಳು (ಪಿಎಚ್ ಡಿ) ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಮಾತ್ರ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅನುಮತಿ ನೀಡಲಾಗುವುದು.

Advertisement

ಕ್ರೀಡಾಪಟುಗಳ ತರಬೇತಿಗಾಗಿ ಬಳಸುತ್ತಿರುವ ಈಜುಕೊಳಗಳನ್ನು ಪ್ರಸಕ್ತ ಸಾಲಿನ ಅ,15 ರಿಂದ ಜಾರಿಗೆ ಬರುವಂತೆ ತೆರೆಯಲು ಅನುಮತಿ ನಿಡಲಾಗುವುದು. ಇದಕ್ಕಾಗಿ ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಭಾರತ ಸರ್ಕಾರದ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಮಂತ್ರಾಲಯ ಗಳು ಮಾದರಿ ಕಾರ್ಯುನಿರ್ವಹಣಾ ಪ್ರಕ್ರಿಯೆಯನ್ನು ಹೊರಡಿಸಲಿವೆ.

ಕಂಟೈನ್ ಮೆಂಟ್ ವಲಯಗಳನ್ನು ಹೊರತುಪಡಿಸಿದ ಪ್ರದೇಶಗಳಲ್ಲಿ ಮಾತ್ರವೇ ಸಿನಿಮಾ ಮಂದಿರಗಳು / ರಂಗಮಂದಿರಗಳು / ಮಲ್ಟಿಫ್ಲೆಕ್ಸ್ ಗಳನ್ನು ಪ್ರಸಕ್ತ ಸಾಲಿನ ಅ,15 ರಿಂದ ಜಾರಿಗೆ ಬರುವಂತೆ ಅವುಗಳ ಒಟ್ಟು ಆಸನ ಸಾಮಥ್ರ್ಯದ ಶೇ.50ರಷ್ಟು ಮಂದಿಗೆ ಮಾತ್ರ ಅವಕಾಶ ನೀಡಿ ತೆರೆಯಲು ಅನುಮತಿಸಲಾಗುವುದು. ಇದಕ್ಕಾಗಿ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಭಾರತ ಸರ್ಕಾರದ ಮಾಹಿತಿ ಮತ್ತು ಪ್ರಚಾರ ಮಂತ್ರಾಲಯಗಳು ಮಾದರಿ ಕಾರ್ಯನಿರ್ವಹಣಾ ಪ್ರಕ್ರಿಯೆಯನ್ನು ಹೊರಡಿಸಲಿವೆ. ಮನೋರಂಜನಾ ಉದ್ಯಾನಗಳು ಮತ್ತು ಅದೇ ರೀತಿಯ ಸ್ಧಳಗಳನ್ನು ಪ್ರಸಕ್ತ ಸಾಲಿನ ಅಕ್ಟೋಬರ್ 15 ರಿಂದ ಜಾರಿಗೆ ಬರುವಂತೆ ತೆರೆಯಲು ಅನುಮತಿಸಲಾಗುವುದು. ಇದಕ್ಕಾಗಿ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯಗಳು ಮಾದರಿ ಕಾರ್ಯನಿರ್ವಹಣಾ ಪ್ರಕ್ರಿಯೆಯನ್ನು ಹೊರಡಿಸಲಿವೆ.

Advertisement

ಕಂಟೈನ್ ಮೆಂಟ್ ವಲಯಗಳನ್ನು ಹೊರತುಪಡಿಸಿದ ಪ್ರದೇಶಗಳಲ್ಲಿ ಮಾತ್ರ ವ್ಯಾಪಾರದಿಂದ ವ್ಯಾಪಾರಕ್ಕೆ ಪ್ರದರ್ಶನಗಳನ್ನು ಪ್ರಸಕ್ತ ಸಾಲಿನ ಅಕ್ಟೋಬರ್ 15 ರಿಂದ ತೆರೆಯಲು ಅನುಮತಿಸಲಾಗುವುದು. ಇದಕ್ಕಾಗಿ ಕರ್ನಾಟಕ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ಭಾರತ ಸರ್ಕಾರದ ವಾಣಿಜ್ಯ ಇಲಾಖೆಗಳು ಮಾದರಿ ಕಾರ್ಯನಿರ್ವಹಣಾ ಪ್ರಕ್ರಿಯೆ ಯನ್ನು ಹೊರಡಿಸಲಿವೆ. ಕಂಟೈನ್ ಮೆಂಟ್ ವಲಯಗಳನ್ನು ಹೊರತುಪಡಿಸಿದ ಪ್ರದೇಶಗಳಲ್ಲಿ ಮಾತ್ರ ಗರಿಷ್ಠ 100 ಜನರ ಪರಿಮಿತಿಗೆ ಒಳಪಟ್ಟು ಸಾಮಾಜಿಕ/ ಶೈಕ್ಷಣಿಕ/ ಕ್ರೀಡೆ / ಮನೋರಂಜನೆ/ ಸಾಂಸ್ಕೃತಿಕ/ ಧಾರ್ಮಿಕ/ ರಾಜಕೀಯ ಕಾರ್ಯಕ್ರಮಗಳು ಮತ್ತು ಇತರ ಸಮಾರಂಭಗಳಿಗೆ ಈಗಾಗಲೇ ಅನುಮತಿ ನೀಡಲಾಗಿದೆ. 100 ಜನರ ಮಿತಿಯನ್ನು ಮೀರಿ ಸೇರುವ ಅಂತಹ ಬೃಹತ್ ಸಭೆಗಳಿಗೆ ಪ್ರಸಕ್ತ ಸಾಲಿನ ಅಕ್ಟೋಬರ್ 15 ರ ನಂತರ ಮತ್ತು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ಮಂಗಳೂರು ಮಹಾನಗರ ಪಾಲಿಕೆ/ಸ್ಥಳೀಯ ಸಂಸ್ಥೆಗಳು ಕಂಟೈನ್‍ಮೆಂಟ್ ವಲಯಗಳ ಹೊರಗೆ ಅನುಮತಿಯನ್ನು ನೀಡಬಹುದಾಗಿದೆ.

ಒಳಾಂಗಣ ಸ್ಥಳಗಳಲ್ಲಿ 200 ಜನರ ಪರಿಮಿತಿಗೆ ಒಳಪಟ್ಟು ಸಭಾ ಭವನದ ಒಟ್ಟು ಸಾಮಥ್ರ್ಯದ ಗರಿಷ್ಠ ಶೇ.50% ರಷ್ಟಕ್ಕೆ ಮಾತ್ರ ಅನುಮತಿ ನೀಡಲಾಗುವುದು. ಮುಖಗವಸು ಧರಿಸುವಿಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ. ಥರ್ಮಲ್ ಸ್ಕ್ಯಾನಿಂಗ್ ಮತ್ತು ಕೈತೊಳೆಯುವಿಕೆ ಅಥವಾ ಸ್ಯಾನಿಟೈಜರ್ ವ್ಯವಸ್ದೆಯನ್ನು ಕಡ್ಡಾಯಗೊಳಿಸಿ ಅನುಮತಿ ನೀಡಲಾಗುವುದು. ಹೊರಾಂಗಣ ಸ್ಥಳಗಳಲ್ಲಿ, ಮೈದಾನದ/ ಸ್ಥಳದ ವಿಸ್ತೀರ್ಣವನ್ನು ಗಮನದಲ್ಲಿಟ್ಟುಗೊಂಡು ಮತ್ತು ಸಾಮಾಜಿಕ ಅಂತರದ ಕಟ್ಟುನಿಟ್ಟಿನ ಪಾಲನೆ, ಮುಖಗವಸು ಧರಿಸುವಿಕೆ, ಥರ್ಮಲ್ ಸ್ಕ್ಯಾನಿಂಗ್ ಮತ್ತು ಕೈತೊಳೆಯುವಿಕೆ ಅಥವಾ ಸ್ಯಾನಿಟೈಜರ್ ವ್ಯವಸ್ದೆಯನ್ನು ಕಡ್ಡಾಯಗೊಳಿಸಿ ಅನುಮತಿ ನೀಡಲಾಗುವುದು.

Advertisement

ಕರ್ನಾಟಕ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕರ್ನಾಟಕ ರಾಜ್ಯ ಸರ್ಕಾರದ ಗೃಹ ಇಲಾಖೆಯೊಂದಿಗೆ ಸಮಾಲೋಚಿಸಿ, ಅಂತಹ ಸಭೆ ಸಮಾರಂಭಗಳನ್ನು ನಿಯಂತ್ರಿಸಲು ಹೊರಡಿಸುವ ಮಾದರಿ ಕಾರ್ಯನಿರ್ವಹಣಾ ಪ್ರಕ್ರಿಯೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಿದೆ. ಗೃಹ ವ್ಯವಹಾರ ಮಂತ್ರಾಲಯ ಅನುಮತಿಸಿದ ವಿಮಾನ ಪ್ರಯಾಣವನ್ನು ಹೊರತುಪಡಿಸಿ ಅಂತರ-ರಾಷ್ಟ್ರೀಯ ವಿಮಾನ ಪ್ರಯಾಣದ ಮೇಲೆ ನಿರ್ಬಂಧ ಇರಲಿದೆ.

ಕಂಟೈನ್ ಮೆಂಟ್ ವಲಯಗಳಿಗೆ ಸೀಮಿತವಾದ ಲಾಕ್ ಡೌನ್ : ಕಂಟೈನ್ ಮೆಂಟ್ ವಲಯ ಗಳಲ್ಲಿನ ಲಾಕ್ ಡೌನ್ ಪ್ರಸಕ್ತ ಸಾಲಿನ ಅಕ್ಟೋಬರ್ 31 ರವರೆಗೆ ಮುಂದುವರೆಯಲಿದೆ.

Advertisement

ಜಿಲ್ಲಾಧಿಕಾರಿಯವರೊಂದಿಗೆ ಪೂರ್ವಸಮಾಲೋಚನೆ ನಡೆಸದೇ, ಕಂಟೈನ್ ಮೆಂಟ್ ವಲಯಗಳ ಹೊರಗೆ ಯಾವುದೇ ಸ್ಥಳೀಯ ಲಾಕ್ ಡೌನ್ ನ್ನು (ಮಹಾನಗರ ಪಾಲಿಕೆ /ತಾಲ್ಲೂಕು/ ನಗರ ಸ್ಥಳೀಯ ಸಂಸ್ಥೆ/ ಗ್ರಾಮ ಪಂಚಾಯಿತಿ/ ಗ್ರಾಮ ಮಟ್ಟ) ವಿಧಿಸತಕ್ಕದ್ದಲ್ಲ.

ಜಿಲ್ಲೆಯೊಳಗೆ ಹಾಗೂ ಜಿಲ್ಲೆಯ ಹೊರಗೆ ಓಡಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ಜಿಲ್ಲೆಯೊಳಗೆ ಮತ್ತು ಜಿಲ್ಲೆಯ ಹೊರಗೆ ವ್ಯಕ್ತಿಗಳ ಓಡಾಟಕ್ಕೆ ಹಾಗೂ ಸರಕುಗಳ ಸಾಗಣೆಗೆ ಯಾವುದೇ ನಿರ್ಬಂಧವಿರುವುದಿಲ್ಲ ಇಂತಹ ಓಡಾಟಕ್ಕೆ ಯಾವುದೇ ಪ್ರತ್ಯೇಕ ಅನುಮತಿ/ಅನುಮೋದನೆ/ಇ-ಪರ್ಮಿಟ್ ಅಗತ್ಯವಿರುವುದಿಲ್ಲ. ಆದಾಗ್ಯೂ, ಇತರೇ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವ ಜನರು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕಂದಾಯ ಇಲಾಖೆ(ವಿಪತ್ತು ನಿರ್ವಹಣೆ) ಗಳು ಹೊರಡಿಸಿದ ಚಾಲ್ತಿಯಲ್ಲಿರುವ ಮಾರ್ಗಸೂಚಿಗಳು /ಎಸ್ ಓಪಿ ಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗಿದೆ.

Advertisement

ದುರ್ಬಲ ವ್ಯಕ್ತಿಗಳ ರಕ್ಷಣೆ: 65 ವರ್ಷಕ್ಕಿಂತ ಮೇಲ್ಪಟ್ಟ ವಯೋಮಾನದ ವ್ಯಕ್ತಿಗಳು, ಬಹು-ಅಸ್ವಸ್ತತೆ ಹೊಂದಿರುವ ವ್ಯಕ್ತಿಗಳು, ಗರ್ಭಿಣಿಯರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಅಗತ್ಯ ಮತ್ತು ಆರೋಗ್ಯ ಉದ್ಧೇಶಗಳನ್ನು ಹೊರತು ಪಡಿಸಿ ಮನೆಯಲ್ಲಿಯೇ ಇರಲು ಸಲಹೆ ನೀಡಲಾಗಿದೆ.

ಆರೋಗ್ಯ ಸೇತು ಬಳಕೆ: ಸೋಂಕಿನ ಸಂಭವನೀಯ ಅಪಾಯವನ್ನು ಮೊದಲೇ ಗುರುತಿಸಲು ಆರೋಗ್ಯ ಸೇತು ಅನುವು ಮಾಡಿ ಕೊಡುತ್ತದೆ. ಮತ್ತು ಇದು ವ್ಯಕ್ತಿಗಳು ಹಾಗೂ ಸಮುದಾಯಕ್ಕೆ ರಕ್ಷಾ ಕವಚವಾಗಿ ಕಾರ್ಯನಿರ್ವಹಿಸುತ್ತದೆ. ಉದ್ಯೋಗದಾತರು, ಕಚೇರಿಗಳು ಮತ್ತು ಕರ್ತವ್ಯ ಸ್ಥಳಗಳಲ್ಲಿ ಸುರಕ್ಷತೆಯನ್ನು ಖಾತರಿಪಡಿಸುವ ಉದ್ಧೇಶದಿಂದ, ಉತ್ತಮ ಪ್ರಯತ್ನದ ಆಧಾರದ ಮೇಲೆ, ಎಲ್ಲಾ ಉದ್ಯೋಗಿಗಳು ಆರೋಗ್ಯ ಸೇತು ಆಪ್ ನ್ನು ಅಳವಡಿಸಿ ಕೊಳ್ಳುವ ಸೌಲಭ್ಯ ಹೊಂದಿರುವ ಮೊಬೈಲ್  ಫೋನ್ ಗಳನ್ನು ಹೊಂದಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲಾಗುವುದು. ಜಿಲ್ಲೆಯಲ್ಲಿ ಪ್ರತಿಯೊಬ್ಬರು ಆರೋಗ್ಯ ಸೇತು ಆಪ್ ನ್ನು ಅಳವಡಿಸಿಕೊಳ್ಳುವ ಸೌಲಭ್ಯವಿರುವ ತಮ್ಮ ಮೊಬೈಲ್ ಫೋನ್ ಗಳಲ್ಲಿ ಆರೋಗ್ಯ ಸೇತು ಆಪ್ ನ್ನು ಅಳವಡಿಸಲು ಮತ್ತು ಆಪ್ ನಲ್ಲಿ ನಿಯಮಿತವಾಗಿ ತಮ್ಮ ಆರೋಗ್ಯ ಸ್ಥಿತಿಯನ್ನು ಇಂದೀಕರಿಸಿಕೊಳ್ಳುವಂತೆ  ವ್ಯಕ್ತಿಗಳಿಗೆ ಸಲಹೆ ನೀಡಬಹುದಾಗಿದೆ. ಇದು ಅಪಾಯದಲ್ಲಿರುವ ವ್ಯಕ್ತಿಗಳಿಗೆ ಸಕಾಲದಲ್ಲಿ ವೈದ್ಯಕೀಯ ನೆರವು ನೀಡಲು ಸಹಕಾರಿಯಾಗುತ್ತದೆ.

Advertisement

ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು: ವಿಪತ್ತು ನಿರ್ವಹಣಾ ಅಧಿನಿಯಮ 2005ರ ಅಡಿಯಲ್ಲಿ ಹೊರಡಿಸಲಾದ ಈ ಮಾರ್ಗಸೂಚಿಗಳನ್ನು ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳು ಮಾರ್ಗಸೂಚಿಗಳನ್ನು ಯಾವುದೇ ರೀತಿಯಲ್ಲಿ ದುರ್ಬಲಗೊಳಿಸಬಾರದು. ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲೆಯ ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು.

ದಂಡನೀಯ ಉಪಬಂಧಗಳು : ಈ ಮೇಲ್ಕಂಡ ಕ್ರಮಗಳನ್ನು ಉಲ್ಲಂಘಿಸುವ ಯಾರೇ ವ್ಯಕ್ತಿಯು, ವಿಪತ್ತು ನಿರ್ವಹಣಾ ಅಧಿನಿಯಮ 2005ರ 51ನೇ ಪ್ರಕರಣದಿಂದ 60ನೇ ಪ್ರಕರಣದವರೆಗಿನ ಉಪಬಂಧಗಳಡಿಯಲ್ಲಿ ಅಲ್ಲದೇ ಭಾರತ ದಂಡ ಸಂಹಿತೆಯ 188ನೇ ಪ್ರಕರಣದ ಅಡಿಯಲ್ಲಿ ಮತ್ತು ಅನ್ವಯವಾಗಬಹದಾದ ಇತರೆ ಕಾನೂನುಗಳಡಿಯಲ್ಲಿ ಆತನ/ಆಕೆಯ ವಿರುದ್ಧ ಕಾನೂನು ಕ್ರಮ ಜರಗಿಸಲು ಗುರಿಯಾಗುತ್ತಾರೆ. ಹಾಗೂ ಈ ಕೆಳಕಂಡ ಕೋವಿಡ್ -19 ನಿರ್ವಹಣೆಗೆ ರಾಷ್ಟ್ರೀಯ ನಿರ್ದೇಶನಗಳನ್ನು ಸಾರ್ವಜನಿಕರು ತಪ್ಪದೇ ಪಾಲಿಸತಕ್ಕದ್ದು.

Advertisement

ಮುಖದ ಹೊದಿಕೆ : ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ, ಕೆಲಸದ ಸ್ಥಳಗಳಲ್ಲಿ ಮತ್ತು ಪ್ರಯಾಣದ ಸಮಯದಲ್ಲಿ ಮುಖದ ಹೊದಿಕೆಯನ್ನು ಧರಿಸುವುದು ಕಡ್ಡಾಯವಾಗಿದೆ. ಅಗತ್ಯಾನುಸಾರ ಸರಿಯಾಗಿ ಮುಖದ ಹೊದಿಕೆಯನ್ನು ಧರಿಸದಿದ್ದಲ್ಲಿ ಮಹಾನಗರ ಪಾಲಿಕೆ ಪ್ರದೇಶಗಳಲ್ಲಿ ರೂ 1,000/- ಮತ್ತು ಇನ್ನುಳಿದ ಪ್ರದೇಶಗಳಲ್ಲಿ ರೂ 500/-ದಂಡ ವಿಧಿಸಲಾಗುವುದು.‌

ಸಾಮಾಜಿಕ ಅಂತರ: ಪ್ರತಿಯೊಬ್ಬರೂ ಸಾರ್ವಜನಿಕ ಸ್ಥಳಗಳಲ್ಲಿ ಕನಿಷ್ಟ 6 ಅಡಿ ಅಂತರವನ್ನು (2 ಗಜ ಅಂತರ) ಕಾಯ್ದುಕೊಳ್ಳಬೇಕು. ಗ್ರಾಹಕರಲ್ಲಿ ದೈಹಿಕ ಅಂತರ ಇರುವುದನ್ನು ಅಂಗಡಿಗಳ ಮಾಲಕರು ಖಚಿತಪಡಿಸಿಕೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವುದು ಜುಲ್ಮಾನೆಯಿಂದ ದಂಡನೀಯವಾಗಿರುತ್ತದೆ. ಈ ಜುಲ್ಮಾನೆಯು ಸ್ಥಳೀಯ ಪ್ರಾಧಿಕಾರಗಳು ಕಾನೂನು, ನಿಯಮ ಮತ್ತು ನಿಬರ್ಂಧನೆಗಳಿಗೆ ಅನುಸಾರವಾಗಿ ನಿಗದಿಪಡಿಸಬಹುದಾದದಂತೆ ಇರಬೇಕಾಗಿದೆ.

Advertisement

ಕೆಲಸದ ಸ್ಥಳಗಳಲ್ಲಿ ಹೆಚ್ಚುವರಿ ನಿರ್ದೇಶನಗಳು:– ಮನೆಯಿಂದ ಕೆಲಸ  ಸಾಧ್ಯವಾದಷ್ಟು ಮಟ್ಟಿಗೆ ಮನೆಯಿಂದಲೇ ಕೆಲಸ ಮಾಡುವ ಪದ್ಧತಿಯನ್ನು ಅನುಸರಿಸಬೇಕು. ಕಚೇರಿಗಳಲ್ಲಿ, ಕೆಲಸದ ಸ್ಥಳಗಳಲ್ಲಿ, ಅಂಗಡಿಗಳಲ್ಲಿ, ಮಾರುಕಟ್ಟೆಗಳಲ್ಲಿ ಮತ್ತು ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಕೆಲಸ/ವ್ಯವಹಾರದ ಸಮಯದಲ್ಲಿ ಪಾಳಿಯ ಪದ್ಧತಿಯನ್ನು ಅನುಸರಿಸಬೇಕಾಗಿದೆ. ಎಲ್ಲಾ ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ಹಾಗೂ ಸಾಮಾನ್ಯ ಪ್ರದೇಶಗಳಲ್ಲಿ ಥರ್ಮಲ್ ಸ್ಕ್ರೀನಿಂಗ್, ಕೈ ತೊಳೆಯುವುದಕ್ಕೆ ಮತ್ತು ಸ್ಯಾನಿಟೈಸರ್ ಗೆ ವ್ಯವಸ್ಥೆ ಕಲ್ಪಿಸಬೇಕಾಗಿದೆ.

ನಿಯಮಿತ ಸ್ಯಾನಿಟೈಸೇಷನ್: ಕೆಲಸದ ಸಂಪೂರ್ಣ ಆವರಣ, ಸಾಮಾನ್ಯ ಸೌಲಭ್ಯಗಳು ಮತ್ತು ಮಾನವ ಸಂಪರ್ಕಕ್ಕೆ ಬರುವ ಎಲ್ಲಾ ಸಾಧನ ಸಲಕರಣೆಗಳನ್ನು ಆಗಾಗ್ಗೆ ನೈರ್ಮಲೀಕರಣ ಮಾಡತಕ್ಕದ್ದು. (ಉದಾ: ಬಾಗಿಲ ಹಿಡಿಕೆಗಳು, ಇತ್ಯಾದಿಗಳು) ಇದನ್ನು ಕೆಲಸದ ಪಾಳಿಯ ಮಧ್ಯದಲ್ಲಿ ಸಹ ಖಾತರಿಪಡಿಸಿಕೊಳ್ಳುವುದು. ಕೆಲಸದ ಸ್ಥಳಗಳಲ್ಲಿ ಮೇಲ್ವಿಚಾರಣೆ ಹೊಂದಿರುವ ಎಲ್ಲಾ ವ್ಯಕ್ತಿಗಳು ಕೆಲಸಗಾರರ ನಡುವೆ ಸಾಕಷ್ಟು ಅಂತರವನ್ನು, ಪಾಳಿಗಳ ನಡುವೆ, ಸಿಬ್ಬಂದಿಗಳ ಊಟದ ವಿರಾಮ ಇತ್ಯಾಧಿಗಳ ಸಂದರ್ಭದಲ್ಲಿ ಸಾಕಷ್ಟು ಅಂತರವನ್ನು ಕಾಯ್ದುಕೊಂಡಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು.

Advertisement

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಗ್ರಾಮಾಂತರ, ನಗರ ಸ್ಥಳೀಯ ಸಂಸ್ಥೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಣಿಜ್ಯ ವ್ಯವಹಾರ ನಡೆಯುವ ಎಲ್ಲಾ ಹೋಟೆಲ್, ರೆಸ್ಟೋರೆಂಟ್‍ಗಳು ವಾಣಿಜ್ಯ ಸಂಕೀರ್ಣಗಳು, ಮಾಲ್‍ಗಳು, ಜನಸಂದಣಿ ಸೇರುವ ಪ್ರದೇಶಗಳಲ್ಲಿ, ಎಲ್ಲಾ ಅಂಗಡಿ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯವಾಗಿರುತ್ತದೆ.

ಪ್ರತಿಯೊಬ್ಬ ಅಂಗಡಿ ಮಾಲಿಕರು ಸಾಮಾಜಿಕ ಅಂತರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಹಾಗೂ ನಿಯಮ ಉಲ್ಲಂಘನೆಯಾಗದಂತೆ ಸಾಕಷ್ಟು ಮುಂಜಾಗೃತಾ ಕ್ರಮವಹಿಸಿಕೊಳ್ಳಬೇಕು. ನಗರ ಸ್ಥಳೀಯ ಸಂಸ್ಥೆ ಹಾಗೂ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರತಿಯೊಬ್ಬ ವರ್ತಕರು ತಮ್ಮ ಅಂಗಡಿಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಏಕಕಾಲದಲ್ಲಿ ಸೇರದಂತೆ ಅಂಗಡಿ ಮುಂಗಟ್ಟಿನ ಮುಂಭಾಗದಲ್ಲಿ ಕನಿಷ್ಟ 6*6 ಅಡಿ ಅಂತರವನ್ನು ಗುರುತಿಸಿ ಗ್ರಾಹಕರಲ್ಲಿ ದೈಹಿಕ ಅಂತರ ಪಾಲಿಸುವುದನ್ನು ಖಚಿತಪಡಿಸಿಕೊಳ್ಳಬೇಕಾಗಿದೆ. ನಗರ ಸ್ಥಳೀಯ ಸಂಸ್ಥೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯ ವರ್ತಕರು ತಮ್ಮ ಅಂಗಡಿ ಮುಂಗಟ್ಟಿನಲ್ಲಿ ಮುಂದೆ ಇರುವ ಸ್ಥಳದಲ್ಲಿ ವಾಹನ ಸಂಚಾರಕ್ಕೆ ಬಳಸಲ್ಪಡುವ ರಸ್ತೆಯನ್ನು ಹೊರತುಪಡಿಸಿ, ಉಳಿದ ಸ್ಥಳವನ್ನು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಳಸಬಹುದಾಗಿದೆ.

Advertisement

ಪ್ರತಿ ಅಂಗಡಿ ಮಾಲಕರು ತಮ್ಮ ಅಂಗಡಿ ಮುಂಭಾಗದಲ್ಲಿ ಸ್ವಯಂಚಾಲಿತ ಸ್ಯಾನಿಟೈಸರ್ ವ್ಯವಸ್ಥೆಯನ್ನು ಅಳವಡಿಸುವುದು ಹಾಗೂ ಗ್ರಾಹಕರನ್ನು ಸ್ಯಾನಿಟೈಸರ್ ಬಳಸಲು ಉತ್ತೇಜಿಸಬೇಕು. ಪ್ರತಿ ಅಂಗಡಿ ಮಾಲಕರು ಪ್ರತಿದಿನ ತಮ್ಮ ತಮ್ಮ ಅಂಗಡಿಗಳಲ್ಲಿ ಕೆಲಸ ನಿರ್ವಹಿಸುವ ಎಲ್ಲಾ ಸಿಬ್ಬಂದಿಗಳ ಆರೋಗ್ಯ ತಪಾಸಣೆಯನ್ನು ನಡೆಸುವುದಲ್ಲದೇ ಪ್ರತಿ ಮೂರು ದಿನಗಳಿಗೊಮ್ಮೆ ತಮ್ಮ ಅಂಗಡಿಗಳನ್ನು ಸ್ಯಾನಿಟೈಸ್ ಮಾಡಲು ಕ್ರಮವಹಿಸಬೇಕಾಗಿದೆ. ಅಂಗಡಿ ಮಾಲಕರು ತಮ್ಮ ಅಂಗಡಿ ಮುಂಭಾಗದಲ್ಲಿ ಓರ್ವ ಸಿಬ್ಬಂದಿಯನ್ನು ನಿಯೋಜಿಸಿ ದಿನನಿತ್ಯ ಗ್ರಾಹಕರನ್ನು ಥರ್ಮಲ್ ಸ್ಕಾನಿಂಗ್ ಮಾಡಿಸಬೇಕು. ಜ್ವರದ ಲಕ್ಷಣಗಳುಳ್ಳ ಗ್ರಾಹಕರ ಹೆಸರು ದೂರವಾಣಿ ಸಂಖ್ಯೆ ಮತ್ತು ವಿಳಾಸವನ್ನು ರಿಜಿಸ್ಟರ್‍ನಲ್ಲಿ ನಮೂದಿಸಿ ತಮ್ಮ ವ್ಯಾಪ್ತಿಯ ಆರೋಗ್ಯಾಧಿಕಾರಿ ಹಾಗೂ ಮಹಾನಗರಪಾಲಿಕೆಗೆ ವರದಿ ನೀಡಬೇಕು.

ಕೆ.ಎಸ್. ಆರ್. ಟಿ. ಸಿ ಬಸ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ತಪ್ಪದೇ ಮಾಸ್ಕ್ ಗಳನ್ನು ಬಳಸಬೇಕು ಹಾಗೂ ಸರ್ಕಾರಿ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕಾಗಿದೆ. ಇದನ್ನು ಉಲ್ಲಂಘಿಸುವ ಪ್ರಯಾಣಿಕರಿಗೆ ಪ್ರಯಾಣಕ್ಕೆ ಅವಕಾಶ ನೀಡದಂತೆ ಬಸ್ಸಿನ ಚಾಲಕ ಹಾಗೂ ನಿರ್ವಾಹಕರಿಗೆ ಜಿಲ್ಲೆಯ ವಿಭಾಗೀಯ ನಿಯಂತ್ರಣಾಧಿಕಾರಿ ಸೂಕ್ತ ನಿರ್ದೇಶನ ನೀಡಬೇಕು.
ಖಾಸಗಿ ಬಸ್ ,ಆಟೋ, ಕ್ಯಾಬ್ ಇತ್ಯಾದಿ ವಾಹನಗಳಲ್ಲಿ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಬಳಸಿ ಸಂಚರಿಸುವುದು. ಈ ಬಗ್ಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ನಿಯಮಿತವಾಗಿ ಪರಿಶೀಲಿಸಿ ಉಲ್ಲಂಘನೆಯಾದ್ದಲ್ಲಿ ವಾಹನದ ಮಾಲೀಕರಿಗೆ ದಂಡವನ್ನು ವಿಧಿಸಬೇಕು. ಪೊಲೀಸ್ ಇಲಾಖಾ ಅಧಿಕಾರಿಗಳು ಕೂಡಾ ತಮ್ಮ ಹಂತದಲ್ಲಿ ಆಗಿಂದಾಗ್ಗೆ ವಾಹನ ತಪಾಸಣೆ ಮಾಡಿ ಸರ್ಕಾರಿ ಮಾರ್ಗಸೂಚಿಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸುತ್ತಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು ತಮ್ಮ ವ್ಯಾಪ್ತಿಯಲ್ಲಿ ಇದನ್ನು ಉಲ್ಲಂಘಿಸುವ ಸಾರ್ವಜನಿಕರಿಗೆ ದಂಡವನ್ನು ವಿಧಿಸಿ ಅಗತ್ಯ ಕ್ರಮ ಜರುಗಿಸಬೇಕು ಎಂದು ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ರಾಜೇಂದ್ರ ಕೆ.ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-11-2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ನ.28 ರಿಂದ ಕೆಲವು ಕಡೆ ಮಳೆ ಸಾಧ್ಯತೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.

11 hours ago

ಇಂಧನ ಉಳಿತಾಯ | ಪರಿಸರ ಜಾಗೃತಿ | ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ

ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…

17 hours ago

ಕೃಷಿ ಭೂಮಿ ಉಳಿಸಿಕೊಳ್ಳಲು- ಆರೋಗ್ಯ ಕಾಪಾಡಲು ಸಾವಯವ ಕೃಷಿಯತ್ತ ಒಲವು ಬೆಳೆಸಿ | ಐಐಟಿ ನಿರ್ದೇಶಕ ಡಾ.ವೆಂಕಪ್ಪಯ್ಯ ಆರ್. ದೇಸಾಯಿ

ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…

17 hours ago

ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಕ್ಯೂಆರ್ ಕೋಡ್ ಅಳವಡಿಕೆ

ಕ್ಯೂಆರ್ ಕೋಡ್  ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…

18 hours ago

ಅಡಿಕೆ ಹಳದಿರೋಗ ಪೀಡಿತ ಪ್ರದೇಶದಲ್ಲಿ ಗೇರುಕೃಷಿ ಹೇಗೆ..? | ಸಂಪಾಜೆಯಲ್ಲಿ ಪರ್ಯಾಯ ಕೃಷಿಯ ಬಗ್ಗೆ ಚಿಂತನೆ |

ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…

18 hours ago

ಅಡಿಕೆ ಮೇಲೆ ಕ್ಯಾನ್ಸರ್‌ ತೂಗುಗತ್ತಿಯ ಭಯ ಏಕೆ ? | ಅಡಿಕೆಯ ಔಷಧೀಯ ಅಧ್ಯಯನ ಸಾಕಷ್ಟಿದೆ | ಈಗ ಸಂಘಟಿತ ಹೋರಾಟ ಅಗತ್ಯ |

ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…

1 day ago