ಕೊರೋನಾ ಸೋಂಕು ನಿಯಂತ್ರಿಸುವುದಕ್ಕೆ ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸುವ ಕ್ರಮವನ್ನು ತಳ್ಳಿ ಹಾಕಿರುವ ಪ್ರಧಾನಿ ನರೇಂದ್ರ ಮೋದಿ ಮೈಕ್ರೋ ಕಂಟೇನ್ಮೆಂಟ್ ಝೋನ್ ಬಗ್ಗೆ ಪ್ರಸ್ತಾಪಿಸಿದ್ದಾರೆ. ಅತಿಹೆಚ್ಚು ಸೋಂಕು ಹರಡುವ ಹಾಗೂ ಅಪಾಯವಿರುವ ಪ್ರದೇಶಗಳನ್ನು ಮೈಕ್ರೋ ಕಂಟೇನ್ಮೆಂಟ್ ಝೋನ್ ಆಗಿ ಮಾಡುವುದು. ಈ ಪ್ರದೇಶಗಳಲ್ಲಿ ಅತಿಹೆಚ್ಚು ನಿಗಾ ವಹಿಸಬೇಕು. ಸೋಂಕಿನ ತಪಾಸಣೆಯನ್ನು ಮಾಡುವುದರ ಜೊತೆಗೆ ಕೊವಿಡ್-19 ಪಾಸಿಟಿವ್ ಪ್ರಮಾಣವನ್ನು ಶೇ.5ರಷ್ಟು ಕಡಿಮೆ ಮಾಡಬೇಕಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ದೇಶದಲ್ಲಿ ಕೊರೋನಾ ವೈರಸ್ ಸೋಂಕಿನ ನಿಯಂತ್ರಣಕ್ಕೆ ತಪಾಸಣೆ ವೇಗವನ್ನು ಹೆಚ್ಚಿಸಬೇಕಿದೆ. ತಪಾಸಣೆ ನಡೆಸಿದಷ್ಟು ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತವೆ. ಹಾಗಿದ್ದರೂ, ದೇಶದ ಶೇ.70 ರಷ್ಟು ಜನರು ಆರ್ ಟಿ- ಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ನೀವು ಸೋಂಕಿನ ತಪಾಸಣೆ ಮಾಡಿಸಿಕೊಳ್ಳದಿದ್ದರೆ, ನಿಮ್ಮ ನೆರೆಹೊರೆಯವರಿಗೂ ಸೋಂಕು ಹರಡುವ ಅಪಾಯ ಹೆಚ್ಚಾಗಿರುತ್ತದೆ ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡಿದರು.
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…