Corona Updates | ಬೆಂಗಳೂರಲ್ಲಿ ಏರುತ್ತಿದೆ ಕೊರೋನಾ ಪಾಸಿಟಿವ್‌ ಸಂಖ್ಯೆ | ಎರಡನೇ ದಿನವೂ ರಾಜ್ಯದಲ್ಲಿ 40 ಸಾವಿರಕ್ಕೂ ಮಿಕ್ಕಿದ ಪ್ರಕರಣ ದಾಖಲು |

May 1, 2021
9:54 PM

ರಾಜ್ಯದಲ್ಲಿ ಕೊರೋನಾ ಅಬ್ಬರ ಮತ್ತೆ ಹೆಚ್ಚಿದೆ. ಶನಿವಾರ 40990 ಮಂದಿಯಲ್ಲಿ ಕೊರೋನಾ ಪತ್ತೆಯಾಗಿದ್ದು 24 ಗಂಟೆಗಳಲ್ಲಿ ರಾಜ್ಯದಲ್ಲಿ 271 ಮಂದಿ ಕೊರೋನಾ  ಸೋಂಕಿಗೆ ಬಲಿಯಾಗಿದ್ದಾರೆ.  ಬೆಂಗಳೂರು ನಗರದಲ್ಲಿ 19353 ಜನರಿಗೆ ಕೊರೋನಾ ಪಾಸಿಟಿವ್‌ ಕಂಡುಬಂದರೆ. ನಗರದಲ್ಲಿ 162 ಮಂದಿ ಮೃತಪಟ್ಟಿದ್ದಾರೆ.

ಕೊರೋನಾ ಎರಡನೇ ಅಲೆ ರಾಜ್ಯದಲ್ಲಿ  ವ್ಯಾಪಕವಾಗುತ್ತಿದೆ. ಎಲ್ಲಾ ಜಿಲ್ಲೆಗಳಲ್ಲೂ ಮುಂಜಾಗ್ರತಾ ಕ್ರಮ ಕೈಗೊಂಡರೂ ಕೊರೋನಾ ಪಾಸಿಟಿವ್‌ ಪ್ರಕರಣ ಕಡಿಮೆಯಾಗಿಲ್ಲ. ರಾಜ್ಯಾದ್ಯಂತ ಇಂದು  40990 ಮಂದಿಯಲ್ಲಿ ಕೊರೋನಾ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1564132ಕ್ಕೆ ಏರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 15794 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 19,353 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 7,76,093ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇಂದು 18341 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಈವರೆಗೆ ಒಟ್ಟು 1143250 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಉಳಿದಂತೆ 405068 ಸಕ್ರಿಯ ಕೇಸ್​ಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 933 , ಉಡುಪಿ ಜಿಲ್ಲೆಯಲ್ಲಿ  670 , ಬಳ್ಳಾರಿ ಜಿಲ್ಲೆಯಲ್ಲಿ 1163 , ಮೈಸೂರು ಜಿಲ್ಲೆಯಲ್ಲಿ 2529 , ತುಮಕೂರು ಜಿಲ್ಲೆಯಲ್ಲಿ 2308 ಕೊರೋನಾ ಪಾಸಿಟಿವ್‌ ಪ್ರಕರಣ ಶನಿವಾರ ಕಂಡುಬಂದಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror