ರಾಜ್ಯದಲ್ಲಿ ಕೊರೋನಾ ಅಬ್ಬರ ಮತ್ತೆ ಹೆಚ್ಚಿದೆ. ಶನಿವಾರ 40990 ಮಂದಿಯಲ್ಲಿ ಕೊರೋನಾ ಪತ್ತೆಯಾಗಿದ್ದು 24 ಗಂಟೆಗಳಲ್ಲಿ ರಾಜ್ಯದಲ್ಲಿ 271 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಬೆಂಗಳೂರು ನಗರದಲ್ಲಿ 19353 ಜನರಿಗೆ ಕೊರೋನಾ ಪಾಸಿಟಿವ್ ಕಂಡುಬಂದರೆ. ನಗರದಲ್ಲಿ 162 ಮಂದಿ ಮೃತಪಟ್ಟಿದ್ದಾರೆ.
ಕೊರೋನಾ ಎರಡನೇ ಅಲೆ ರಾಜ್ಯದಲ್ಲಿ ವ್ಯಾಪಕವಾಗುತ್ತಿದೆ. ಎಲ್ಲಾ ಜಿಲ್ಲೆಗಳಲ್ಲೂ ಮುಂಜಾಗ್ರತಾ ಕ್ರಮ ಕೈಗೊಂಡರೂ ಕೊರೋನಾ ಪಾಸಿಟಿವ್ ಪ್ರಕರಣ ಕಡಿಮೆಯಾಗಿಲ್ಲ. ರಾಜ್ಯಾದ್ಯಂತ ಇಂದು 40990 ಮಂದಿಯಲ್ಲಿ ಕೊರೋನಾ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1564132ಕ್ಕೆ ಏರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 15794 ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಇಂದು 19,353 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 7,76,093ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇಂದು 18341 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೆ ಒಟ್ಟು 1143250 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಉಳಿದಂತೆ 405068 ಸಕ್ರಿಯ ಕೇಸ್ಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 933 , ಉಡುಪಿ ಜಿಲ್ಲೆಯಲ್ಲಿ 670 , ಬಳ್ಳಾರಿ ಜಿಲ್ಲೆಯಲ್ಲಿ 1163 , ಮೈಸೂರು ಜಿಲ್ಲೆಯಲ್ಲಿ 2529 , ತುಮಕೂರು ಜಿಲ್ಲೆಯಲ್ಲಿ 2308 ಕೊರೋನಾ ಪಾಸಿಟಿವ್ ಪ್ರಕರಣ ಶನಿವಾರ ಕಂಡುಬಂದಿದೆ.
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್ಆರ್ ಎಲ್ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…