ಜಗತ್ತಿನಾದ್ಯಂತ ಕೊರೋನಾ ವೈರಸ್ ಮಹಾಮಾರಿಯಾಗಿ ಕಾಡುತ್ತಿದೆ. ಸೂಕ್ತ ಮುಂಜಾಗ್ರತಾ ಕ್ರಮಗಳು ಮಾತ್ರವೇ ಈ ಮಹಾಮಾರಿಯನ್ನು ಹಿಮ್ಮೆಟ್ಟಿಸಲು ಪರಿಹಾರ ಮಾರ್ಗ ಎಂಬುದೂ ಈಗೀಗ ಸ್ಪಷ್ಟವಾಗುತ್ತಿದೆ. ಭಾರತದಲ್ಲಿ ಕೊರೋನಾ ವೈರಸ್ ಸೋಂಕಿತ ಪ್ರಕರಣಗಳು ಈಗಾಗಲೇ 63 ಲಕ್ಷದ ಗಡಿ ದಾಟಿದೆ. ಇದರಲ್ಲಿ ಸುಮಾರು 52 ಲಕ್ಷ ಪ್ರಕರಣಗಳೂ ಗುಣಮುಖವಾಗಿವೆ. ಇದಕ್ಕೆ ಮುಂಜಾಗ್ರತಾ ಕ್ರಮಗಳೇ ಮುಖ್ಯ ಕಾರಣವಾಗಿದೆ.
Advertisement
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 80,472 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೋನಾ ವೈರಸ್ ಸೋಂಕಿಗೆ 1179 ಜನರು ಬಲಿಯಾಗಿದ್ದು, ದೇಶದಲ್ಲಿ9,40,705 ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 97,497ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
Advertisement
ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 14,23,052 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 7,56,19,781 ಜನರನ್ನು ಕೊರೋನಾ ವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ವಿಶ್ವದೆಲ್ಲೆಡೆ ಒಟ್ಟು 3.3 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 25,215,175 ಕೋಟಿ ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 26,229,488 ಪ್ರಕರಣಗಳು ಗುಣಮುಖವಾಗಿವೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement