ಕೊರೋನಾ ರೂಪಾಂತರ ವೈರಸ್ ಬಗ್ಗೆ ಎಚ್ಚರಿಕೆ ವಹಿಸಬೇಕೆ ಹೊರತು ಆತಂಕ ಪಡುವ ಅಗತ್ಯವಿಲ್ಲ | ದಕ್ಷಿಣ ಆಫ್ರಿಕಾ ಸಂಸ್ಥೆ ಮಾಹಿತಿ |

April 14, 2022
10:14 PM

ದಕ್ಷಿಣ ಆಫ್ರಿಕಾದ ವಿಜ್ಞಾನಿಗಳು ಕೊರೋನಾ ವೈರಸ್​ನ ಓಮಿಕ್ರಾನ್​ ರೂಪಾಂತರದ ಎರಡು ಹೊಸ ಉಪ ವರ್ಗಗಳನ್ನು ಕಂಡು ಹಿಡಿದಿದ್ದಾರೆ ಎಂದು  ಜೀನ್​​ ಸಿಕ್ವೇನ್ಸಿಂಗ್​ ಸಂಸ್ಥೆಗಳನ್ನು ನಡೆಸುತ್ತಿರುವ ತಲಿಯೊ ಡಿ ಒಲಿವೇರಾ ಮಾಹಿತಿ ನೀಡಿದ್ದಾರೆ.ಈ ವಂಶಾವಳಿಗಳಿಗೆ BA.4 ಮತ್ತು BA.5 ಎಂದು ಹೆಸರಿಸಲಾಗಿದೆ ಎಂದು ಟ್ವೀಟ್​ ಮೂಲಕ ತುಲಿಯೊ ಡಿ ಒಲಿವೇರಾ ಮಾಹಿತಿ ನೀಡಿದ್ದಾರೆ. ಈ ವಂಶಾವಳಿಗಳು ದಕ್ಷಿಣ ಆಫ್ರಿಕಾದಲ್ಲಿ ಸೋಂಕನ್ನು ಹೆಚ್ಚಳಗೊಳಿಸಿಲ್ಲ ಎಂದು ತಿಳಿದುಬಂದಿದೆ.

ದಕ್ಷಿಣ ಆಫ್ರಿಕಾದಲ್ಲಿ ಅತಿ ಕಡಿಮೆ ಸೋಂಕುಗಳು, ಹಾಗೂ ಆಸ್ಪತ್ರೆಗಳಲ್ಲಿ ದಾಖಲಾಗುತ್ತಿರುವವರ ಪ್ರಮಾಣದಲ್ಲಿ ಇಳಿಕೆ ಮತ್ತು ಸಾವಿನ ಸಂಖ್ಯೆಗಳನ್ನು ಗಮನಿಸಿದರೆ ಮುಂದುವರಿದ ಕೊರೋನಾ ರೂಪಾಂತರದ ಬಗ್ಗೆ ಎಚ್ಚರಿಕೆ ವಹಿಸಬೇಕೆ ಹೊರತು ಆತಂಕ ಪಡುವ ಅಗತ್ಯವಿಲ್ಲ ಎಂದು ಡಿ. ಒಲಿವೇರಾ ಹೇಳಿದ್ದಾರೆ.

ನವೆಂಬರ್​​ನಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಬೋಟ್ಸ್​ವಾನಾದಲ್ಲಿ ಮೊದಲ ಬಾರಿಗೆ ಓಮಿಕ್ರಾನ್​ ಸೋಂಕು ಪತ್ತೆಯಾಗಿತ್ತು. ದಕ್ಷಿಣ ಆಫ್ರಿಕಾವು ಓಮಿಕ್ರಾನ್​​​ ಸೋಂಕಿನ ಅಲೆಯನ್ನು ಕಂಡ ಮೊದಲ ದೇಶವಾಗಿದೆ. ಆಸ್ಪತ್ರೆಗಳು ಹಾಗೂ ಸಾವಿನ ಸಂಖ್ಯೆಗಳಿಗೆ ಡೆಲ್ಟಾ ರೂಪಾಂತರಿಯು ಕಾರಣವಾಗಿದ್ದರೆ ಡಿಸೆಂಬರ್​ ತಿಂಗಳಲ್ಲಿ ದಾಖಲೆಯ ಪ್ರಮಾಣದಲ್ಲಿ ದೈನಂದಿನ ಪ್ರಕರಣಗಳು ವರದಿಯಾಗಲು ಓಮಿಕ್ರಾನ್​ ರೂಪಾಂತರಿ ಕಾರಣವಾಗಿತ್ತು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror