ದಕ್ಷಿಣ ಆಫ್ರಿಕಾದ ವಿಜ್ಞಾನಿಗಳು ಕೊರೋನಾ ವೈರಸ್ನ ಓಮಿಕ್ರಾನ್ ರೂಪಾಂತರದ ಎರಡು ಹೊಸ ಉಪ ವರ್ಗಗಳನ್ನು ಕಂಡು ಹಿಡಿದಿದ್ದಾರೆ ಎಂದು ಜೀನ್ ಸಿಕ್ವೇನ್ಸಿಂಗ್ ಸಂಸ್ಥೆಗಳನ್ನು ನಡೆಸುತ್ತಿರುವ ತಲಿಯೊ ಡಿ ಒಲಿವೇರಾ ಮಾಹಿತಿ ನೀಡಿದ್ದಾರೆ.ಈ ವಂಶಾವಳಿಗಳಿಗೆ BA.4 ಮತ್ತು BA.5 ಎಂದು ಹೆಸರಿಸಲಾಗಿದೆ ಎಂದು ಟ್ವೀಟ್ ಮೂಲಕ ತುಲಿಯೊ ಡಿ ಒಲಿವೇರಾ ಮಾಹಿತಿ ನೀಡಿದ್ದಾರೆ. ಈ ವಂಶಾವಳಿಗಳು ದಕ್ಷಿಣ ಆಫ್ರಿಕಾದಲ್ಲಿ ಸೋಂಕನ್ನು ಹೆಚ್ಚಳಗೊಳಿಸಿಲ್ಲ ಎಂದು ತಿಳಿದುಬಂದಿದೆ.
ದಕ್ಷಿಣ ಆಫ್ರಿಕಾದಲ್ಲಿ ಅತಿ ಕಡಿಮೆ ಸೋಂಕುಗಳು, ಹಾಗೂ ಆಸ್ಪತ್ರೆಗಳಲ್ಲಿ ದಾಖಲಾಗುತ್ತಿರುವವರ ಪ್ರಮಾಣದಲ್ಲಿ ಇಳಿಕೆ ಮತ್ತು ಸಾವಿನ ಸಂಖ್ಯೆಗಳನ್ನು ಗಮನಿಸಿದರೆ ಮುಂದುವರಿದ ಕೊರೋನಾ ರೂಪಾಂತರದ ಬಗ್ಗೆ ಎಚ್ಚರಿಕೆ ವಹಿಸಬೇಕೆ ಹೊರತು ಆತಂಕ ಪಡುವ ಅಗತ್ಯವಿಲ್ಲ ಎಂದು ಡಿ. ಒಲಿವೇರಾ ಹೇಳಿದ್ದಾರೆ.
ನವೆಂಬರ್ನಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಬೋಟ್ಸ್ವಾನಾದಲ್ಲಿ ಮೊದಲ ಬಾರಿಗೆ ಓಮಿಕ್ರಾನ್ ಸೋಂಕು ಪತ್ತೆಯಾಗಿತ್ತು. ದಕ್ಷಿಣ ಆಫ್ರಿಕಾವು ಓಮಿಕ್ರಾನ್ ಸೋಂಕಿನ ಅಲೆಯನ್ನು ಕಂಡ ಮೊದಲ ದೇಶವಾಗಿದೆ. ಆಸ್ಪತ್ರೆಗಳು ಹಾಗೂ ಸಾವಿನ ಸಂಖ್ಯೆಗಳಿಗೆ ಡೆಲ್ಟಾ ರೂಪಾಂತರಿಯು ಕಾರಣವಾಗಿದ್ದರೆ ಡಿಸೆಂಬರ್ ತಿಂಗಳಲ್ಲಿ ದಾಖಲೆಯ ಪ್ರಮಾಣದಲ್ಲಿ ದೈನಂದಿನ ಪ್ರಕರಣಗಳು ವರದಿಯಾಗಲು ಓಮಿಕ್ರಾನ್ ರೂಪಾಂತರಿ ಕಾರಣವಾಗಿತ್ತು.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…