#Indo-PakWorldCup | ಇಂಡೋ-ಪಾಕ್‌ ವಿಶ್ವ ಸಮರಕ್ಕೆ ಕ್ಷಣಗಣನೆ | ವಿಶ್ವಕಪ್ ಹಣಾಹಣೆಯಲ್ಲಿ ಭಾರತದ ಗೆಲುವಿಗೆ ಕೋಟ್ಯಂತರ ಅಭಿಮಾನಿಗಳ ಶುಭ ಹಾರೈಕೆ |

October 14, 2023
1:29 PM
ಭಾರತ ಈ ಪಂದ್ಯಲ್ಲಿ ಗೆದ್ದು ಬರಲಿ ಎಂಬುದು 140 ಕೋಟಿ ಭಾರತೀಯರ ಪ್ರಾರ್ಥನೆ.

ವಿಶ್ವದ ಕ್ರಿಕೆಟ್‌ #Cricket ಅಭಿಮಾನಿಗಳು ಎದುರು ನೋಡುತ್ತಿರುವ ಏಕದಿನ ವಿಶ್ವಕಪ್ ಟೂರ್ನಿಯ #ICCworldcup ಹೈವೋಲ್ಟೇಜ್ ಪಂದ್ಯವಾದ ಭಾರತ- ಪಾಕಿಸ್ತಾನ ಕದನಕ್ಕೆ ಕ್ಷಣಗಣನೆ ಶುರುವಾಗಿದೆ.  ಭಾರತ ಈಗ ನವರಾತ್ರಿ ಸಂಭ್ರಮಕ್ಕೆ ಅಣಿಯಾಗುತ್ತಿದೆ. ಈ ಪಂದ್ಯಕ್ಕಾಗಿ ಕೇವಲ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಮಾತ್ರವಲ್ಲ, ಇಡೀ ಕ್ರಿಕೆಟ್ ಜಗತ್ತೇ ಕಾಯುತ್ತಿದೆ.

ಪಂದ್ಯದಲ್ಲಿ ಪಾಕಿಸ್ತಾನವನ್ನು ಭಾರವು ಬಗ್ಗುಬಡಿಯಲಿ, ಭಾರತ ಸಂಭ್ರಮಿಸಲಿ ಅನ್ನೋದು 140 ಕೋಟಿ ಭಾರತೀಯರ ಪ್ರಾರ್ಥನೆ. ಅಭಿಮಾನಿಗಳ ಬೆಂಬಲವೂ ರೋಹಿತ್‌ ಶರ್ಮಾ ಪಡೆಯ ಬೆನ್ನಿಗೆ ಇರಲಿದೆ. 1992 ರಿಂದ 2019ರ ವರೆಗೂ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ 7 ಪಂದ್ಯಗಳನ್ನಾಡಿರುವ ಭಾರತ, 7 ಬಾರಿಯೂ ವಿಜಯದ ಮಾಲೆ ಹಾಕಿಕೊಂಡಿದೆ. ಈ ವಿಶ್ವಕಪ್‌ನಲ್ಲಿ ಆಡುತ್ತಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳ ಬಲಾಬಲವನ್ನು ನೋಡಿದಾಗ, ಈ ಸಲವೂ ಭಾರತವೇ ಗೆಲ್ಲುವ ಫೇವರಿಟ್ ಆಗಿದೆ. ಭಾರತ 8ನೇ ಜಯಕ್ಕೆ ಹಪಹಪಿಸುತ್ತಿದ್ದರೆ, ಮೊದಲ ಜಯ ಸಾಧಿಸಿ ಇತಿಹಾಸ ಸೃಷ್ಟಿಸುವ ತವಕದಲ್ಲಿದೆ.

ಭಾರತ ತಂಡದಲ್ಲಿರುವ ಬ್ಯಾಟರ್‌ಗಳೆಲ್ಲರೂ ಕ್ರಿಕೆಟ್ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಬೌಲರ್‌ಗಳೂ ಒಬ್ಬರಿಗಿಂತ ಒಬ್ಬರು ದೊಡ್ಡ ರೆಕಾರ್ಡ್‌ ಮಾಡಿದವರಿದ್ದಾರೆ. ಈ ಪಂದ್ಯದಲ್ಲಿ ಲಯ, ಸಾಮರ್ಥ್ಯ, ಪ್ರತಿಭೆ ಇವೆಲ್ಲಕ್ಕಿಂತ ಮಿಗಿಲಾಗಿ ಯಾರು ಭಾವನೆಗಳನ್ನು ಸಮರ್ಥವಾಗಿ ನಿಭಾಯಿಸುತ್ತಾರೋ ಅವರಿಗೆ ವಿಜಯಲಕ್ಷ್ಮಿ ಒಲಿಯುತ್ತಾಳೆ. ಹೀಗಾಗಿ ರೋಹಿತ್‌ ಪಡೆಗಿರುವ ಅತಿದೊಡ್ಡ ಸವಾಲು ಭಾವನೆಗಳ ಬಂಧನಕ್ಕೆ ಒಳಗಾಗದಿರುವುದು.

ಅಫ್ಘಾನಿಸ್ತಾನ ವಿರುದ್ಧ ಸಿಡಿಲಬ್ಬರದ ಆಟವಾಡಿದ್ದ ರೋಹಿತ್, ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ ಮೇಲೆ ತಂಡ ಹೆಚ್ಚು ನಿರೀಕ್ಷೆ ಇಟ್ಟಿದ್ದು, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ ಸಹ ನಿರ್ಣಾಯಕ ಪಾತ್ರ ವಹಿಸಬೇಕಾಗುತ್ತದೆ.  ಅಹಮದಾಬಾದ್‌ನ ಇತ್ತೀಚಿನ ದಾಖಲೆಯನ್ನು ಪರಿಗಣಿಸಿ, ವೇಗದ ಬೌಲರ್‌ಗಳಿಗೆ ಹೆಚ್ಚು ನೆರವು ಸಿಗಲಿದೆ ಎನ್ನುವ ನಂಬಿಕೆಯೊಂದಿಗೆ ಭಾರತ ಕಣಕ್ಕಿಳಿದರೆ ಮೊಹಮದ್ ಶಮಿಗೆ ಅವಕಾಶ ಸಿಗಬಹುದು. ಶಮಿ ಐಪಿಎಲ್‌ನಲ್ಲಿ ಗುಜರಾತ್ ತಂಡದಲ್ಲಿ ಆಡುವ ಕಾರಣ, ಇಲ್ಲಿನ ಪಿಚ್ ಬಗ್ಗೆ ಅವರಿಗೆ ಹೆಚ್ಚಿನ ಮಾಹಿತಿ ಇರಲಿದೆ. ಒಂದು ವೇಳೆ ದೊಡ್ಡ ಬೌಂಡರಿಗಳು ಎನ್ನುವ ಅಂಶವನ್ನು ತಲೆಯಲ್ಲಿಟ್ಟುಕೊಂಡು ಆಡುವ ಹನ್ನೊಂದನ್ನು ನಿರ್ಧರಿಸಿದರೆ ಆಗ ಆರ್.ಅಶ್ವಿನ್‌ರನ್ನು ಆಡಿಸಬಹುದು ಎಂದು ಹೇಳಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror