Advertisement
ಸುದ್ದಿಗಳು

ರಾಮಮಂದಿರ ಲೋಕಾರ್ಪಣೆಗೆ ದಿನಗಣನೆ | ಅಯೋಧ್ಯೆಯಲ್ಲಿ ‘ರಾಮಲಲ್ಲಾ’ ಮೂರ್ತಿ ಹೊರಲಿರುವ ಪ್ರಧಾನಿ ಮೋದಿ | ಪ್ರಧಾನಿ ಸಮ್ಮುಖದಲ್ಲಿಯೇ ಪ್ರಾಣಪ್ರತಿಷ್ಠಾಪನೆ-ಯಜ್ಞ |

Share

ಭಾರತದ(Bharat) ಸಮಸ್ತ ಹಿಂದುಗಳ ಕನಸು ಅಯೋಧ್ಯೆಯಲ್ಲಿ (Ayodhya) ರಾಮನ ಮಂದಿರವಾಗಬೇಕು(Rama mandir). ಅಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪನೆಯಾಗಬೇಕು ಅನ್ನೋದು. ಆ ಕನಸನ್ನು ನನಸು ಮಾಡುವುದಾಗಿ ಅನೇಕ ದಶಕಗಳಿಂದ ರಾಜಕೀಯ ಪಕ್ಷಗಳು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಉಪಯೋಗಿಸಿಕೊಂಡು ಜನರ ಕಣ್ಣಿಗೆ ಮಣ್ಣೆರಚಿತ್ತು.ಇದೀಗ ಅಯೋಧ್ಯೆಯ ರಾಮಮಂದಿರದ ಲೋಕಾರ್ಪಣೆಗೆ ಸಂಬಂಧಿಸಿದಂತೆ ಹೊಸ ಹೊಸ ವಿಚಾರಗಳು ಅನಾವರಣಗೊಳ್ಳುತ್ತಿವೆ.

ರಾಮಮಂದಿರ ನಿರ್ಮಾಣದ ಭೂಮಿ ಪೂಜೆಯಿಂದ ಹಿಡಿದು ಪ್ರತಿಯೊಂದರ ಹಂತದಲ್ಲಿಯೂ ಪ್ರಧಾನಿ ನರೇಂದ್ರ ಮೋದಿ (Narendra Modi) ಪ್ರಮುಖ ಪಾತ್ರ ವಹಿಸಿದ್ದರು.  ರಾಮ ಮಂದಿರ ಲೋಕಾರ್ಪಣೆ 2024ರ ಜನವರಿ 22 ರಂದು ನೆರವೇರಲಿದೆ. ಈ ವೇಳೆ ಸಹಜವಾಗಿಯೇ ಪ್ರಧಾನಿ ಮೋದಿ ಮುಖ್ಯಭೂಮಿಕೆ ನಿರ್ವಹಿಸಲಿದ್ದಾರೆ. ಈ ವಿಶೇಷ ದಿನಕ್ಕಾಗಿ ಬಹಳಷ್ಟು ತಯಾರಿಗಳನ್ನು ಈಗಾಗಲೇ ನಡೆಸಲಾಗಿದೆ.

ರಾಮಮಂದಿರ ಲೋಕಾರ್ಪಣೆಯಂದು ಏನಿರಲಿದೆ?: ಮಂದಿರಕ್ಕೆ ಮೋದಿ ರಾಮಲಲ್ಲಾ ಮೂರ್ತಿ (Ram Lalla Idol) ಕೊಂಡೊಯ್ಯಲಿದ್ದಾರೆ. ತಾತ್ಕಾಲಿಕ ಮಂದಿರದಿಂದ ರಾಮಮಂದಿರಕ್ಕೆ ಮೆರವಣಿಗೆ ತೆರಳಲಿದೆ. ಪ್ರೋಟೊಕಾಲ್ ನಡುವೆಯೂ 500 ಮೀಟರ್ ಮೋದಿ ಹೆಜ್ಜೆ ಹಾಕಲಿದ್ದಾರೆ. ಗರ್ಭಗುಡಿಯವರೆಗೆ ಮೋದಿ ರಾಮಲಲ್ಲಾ ಮೂರ್ತಿಯನ್ನು ಹೊರಲಿದ್ದಾರೆ. ಪ್ರಧಾನಿಗೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸಾಥ್ ನೀಡಲಿದ್ದಾರೆ. ಪ್ರಧಾನಿ ಸಮ್ಮುಖದಲ್ಲಿಯೇ ಪ್ರಾಣಪ್ರತಿಷ್ಠಾಪನೆ ಯಜ್ಞ ನಡೆಯಲಿದೆ. ಜನವರಿ 22ರ ಬೆಳಗ್ಗೆ 11:30 ರಿಂದ ಮಧ್ಯಾಹ್ನ 12:30 ರವರೆಗೆ ಹೋಮ ನಡೆಯಲಿದೆ.

Prime Minister Narendra Modi will play an important role in every step of the construction of Ram Mandir from Bhumi Puja. The dedication of Ram Mandir will take place on January 22, 2024. Of course, Prime Minister Modi will play the main role. A lot of preparations are already done for this special day.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

7 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

9 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

16 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

22 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago