ದೇಶದ ಅತಿ ಉದ್ದದ ಸಮುದ್ರ ಸೇತುವೆ | 1962ರಲ್ಲೇ ಯೋಜನೆ ತಯಾರಿ | 60 ವರ್ಷದ ಹಿಂದಿನ ಕನಸಿನ ಯೋಜನೆ ಇಂದು ಮೋದಿಯಿಂದ ಲೋಕಾರ್ಪಣೆ |

January 12, 2024
10:47 AM

ಬೇರೆ ದೇಶದ(Foreign) ಮೂಲಭೂತ ಸೌಕರ್ಯಗಳನ್ನು(Infrastructure) ನೋಡಿದಾಗ ಭಾರತೀಯರು(Indian) ನಮ್ಮ ದೇಶದಲ್ಲಿ ಇಲ್ಲವಲ್ಲಾ ಎಂದು ಬೇಸರಿಸಿಕೊಳಳುತ್ತಿದ್ದರು. ಇದೀಗ ಕೆಲವೊಂದು ಮಹತ್ತರ ಅಂತಹ ಯೋಜನೆಗಳು(Project) ಸಾಕಾರಗೊಳ್ಳುತ್ತಿವೆ. ಇದೀಗ 60 ವರ್ಷದ ಹಿಂದೆ ಸಿದ್ಧಗೊಂಡ ಕನಸಿನ ಯೋಜನೆ, ದೇಶದ ಅತಿ ಉದ್ದದ ಸಮುದ್ರ ಸೇತುವೆಯಾದ (India’s Longest Sea Bridge) ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್(MTHL) ಅನ್ನು ಇಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಲೋಕಾರ್ಪಣೆ ಮಾಡಲಿದ್ದಾರೆ .

Advertisement
Advertisement

ಮುಂಬೈನ(Mumbai) ಸೆವ್ರಿ ಮತ್ತು ರಾಯಗಡ ಜಿಲ್ಲೆಯ ನ್ಹವಾ ಶೇವಾ ಪ್ರದೇಶದ ನಡುವಿನ 21.8 ಕಿಲೋಮೀಟರ್ ಉದ್ದದ ಸೇತುವೆಯು ಪ್ರಸ್ತುತ ಎರಡು ಗಂಟೆಗಳಿಂದ ಸುಮಾರು 15-20 ನಿಮಿಷಗಳಿಗೆ ಪ್ರಯಾಣದ ಅವಧಿಯನ್ನು ಕಡಿಮೆ ಮಾಡಲಿದೆ.  ರಾಜ್ಯದ ಎರಡು ದೊಡ್ಡ ನಗರಗಳನ್ನು ಸಂಪರ್ಕಿಸುವ ಮುಂಬೈ ಪುಣೆ ಎಕ್ಸ್‌ಪ್ರೆಸ್‌ ವೇಗೆ MTHL ಮತ್ತಷ್ಟು ಸಂಪರ್ಕ ಕಲ್ಪಿಸುತ್ತದೆ. MTHL 6 ಲೇನ್ ಮಾರ್ಗ ಹೊಂದಿದೆ. ಸಮುದ್ರದ ಮೇಲೆ 16.50 ಕಿಲೋಮೀಟರ್ ಮತ್ತು ಭೂಮಿಯಲ್ಲಿ 5.50 ಕಿಲೋಮೀಟರ್ ಉದ್ದವನ್ನು ಹೊಂದಿದೆ. ಈ ಸೇತುವೆಗೆ ʼಅಟಲ್ ಬಿಹಾರಿ ವಾಜಪೇಯಿ ಸೇವ್ರಿ-ನವ ಶೇವಾ ಅಟಲ್ ಸೇತುʼ ಎಂದು ಹೆಸರನ್ನು ಇಡಲಾಗಿದೆ.

Advertisement

ಸೇತುವೆಯ ವಿಶೇಷತೆ ಏನು?: ಈ ಯೋಜನೆಯು ಸರಿಸುಮಾರು 21 ಕಿ.ಮೀ. ಉದ್ದದ 6 ಲೇನ್‌ (3+3-ಲೇನ್, 2 ತುರ್ತು ಲೇನ್) ಸೇತುವೆಯನ್ನು ಮುಂಬೈ ನಗರದ ಶಿವಡಿ ಮತ್ತು ಮುಖ್ಯ ಭೂಭಾಗದ ನ್ಹಾವಾವನ್ನು ಸಂಪರ್ಕಿಸುತ್ತದೆ. ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ, ಮುಂಬೈ-ಗೋವಾ ಎಕ್ಸ್‌ಪ್ರೆಸ್‌ವೇ, ವಿರಾರ್‌-ರಾಯ್‌ಘಡರ್‌ ಕಾರಿಡರ್‌ ಸಂಪರ್ಕ ಇನ್ನು ಮುಂದೆ ಸುಲಭವಾಗಲಿದೆ. ಈ ರಸ್ತೆಯಲ್ಲಿ 4 ಚಕ್ರದ ವಾಹನಗಳಿಗೆ ಗಂಟೆಗೆ ಗರಿಷ್ಠ 100 ಕಿ.ಮೀ ವೇಗದ ಮಿತಿಯನ್ನು ನಿಗದಿಪಡಿಸಲಾಗಿದೆ. ಬೈಕ್‌, ಅಟೋರಿಕ್ಷಾ, ಟ್ರ್ಯಾಕ್ಟರ್‌ ಸಂಚಾರವನ್ನು ನಿರ್ಬಂಧಿಸಲಾಗಿದೆ.

1962 ರಲ್ಲೇ ಎರಡು ನಗರಗಳ ಮಧ್ಯೆ ಸಂಚಾರ ವ್ಯವಸ್ಥೆ ಮಾಡಲು ಯೋಜನೆ ರೂಪಿಸಲಾಗಿತ್ತು. ಈ ಯೋಜನೆ ಜಾರಿ ಸಂಬಂಧ ಹಲವು ಅಧ್ಯಯನಗಳು ನಡೆದಿದ್ದವು. 2008ರಲ್ಲಿ ಮಹಾರಾಷ್ಟ್ರ ಸರ್ಕಾರ ಈ ಯೋಜನೆ ಜಾರಿಗೆ ಸಂಬಂಧ ಟೆಂಡರ್‌ ಆಹ್ವಾನಿಸಿತ್ತು. ಈ ಯೋಜನೆಯಲ್ಲಿ ರಾಜಕೀಯದ ಗಾಳಿ ಬೀಸಿ ಭಾರೀ ಟೀಕೆ ಬಂದ ಹಿನ್ನೆಲೆಯಲ್ಲಿ ಟೆಂಡರ್‌ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಕೊನೆಗೆ ಎಲ್ಲಾ ಇಲಾಖೆಗಳ ಅನುಮತಿ ಪಡೆದ ಬಳಿಕ 2016ರ ಡಿಸೆಂಬರ್‌ 24 ರಂದು ಪ್ರಧಾನಿ ನರೇಂದ್ರ ಮೋದಿ ಈ ಯೋಜನೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಭೂಮಿ ಸ್ವಾಧೀನ ಪಡಿಸಿದ ಬಳಿಕ 2018ರ ಏಪ್ರಿಲ್‌ 24 ರಂದು ಕಾಮಗಾರಿ ಆರಂಭವಾಗಿತ್ತು.

Advertisement

ನಿಗದಿ ಪ್ರಕಾರ ಸೆಪ್ಟೆಂಬರ್‌ 22, 2022ಕ್ಕೆ ಮುಕ್ತಾಯವಾಗಬೇಕಿತ್ತು. ಆದರೆ ಕೋವಿಡ್‌, ಲಾಕ್‌ಡೌನ್‌ ನಂತರ ಕಾರ್ಮಿಕರ ಸಮಸ್ಯೆಯಿಂದಾಗಿ ಯೋಜನೆ ಮುಂದಕ್ಕೆ ಹೋಗಿ ಈಗ ಜನವರಿಯಲ್ಲಿ ಉದ್ಘಾಟನೆಯಾಗುತ್ತಿದೆ. ಆರಂಭದಲ್ಲಿ ಈ ಯೋಜನೆ ನಿರ್ಮಾಣಕ್ಕೆ 14,712.70 ಕೋಟಿ ರೂ. ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಈಗ ಈ ವೆಚ್ಚ 16,904.43 ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ಆರ್‌ಟಿಐ ಅಡಿ ಉತ್ತರ ಸಿಕ್ಕಿತ್ತು.

– ಅಂತರ್ಜಾಲ ಮಾಹಿತಿ

Advertisement

India’s Longest Sea Bridge, Mumbai Trans Harbor Link (MTHL), a dream project prepared 60 years ago, will be inaugurated today by Prime Minister Narendra Modi.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |
May 2, 2024
6:51 AM
by: ವಿವೇಕಾನಂದ ಎಚ್‌ ಕೆ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror