ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಂಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಭಾರತೀಯ ಉದ್ಯಮಶೀಲತಾ ಅಭಿವೃದ್ಧಿ ಸಂಸ್ಥೆಯಿಂದ ಆಯೋಜಿಸಿರುವ 40 ಮಹಿಳೆಯರಿಗೆ ಕೌಶಲ್ಯ ತರಬೇತಿ ನೀಡುವ ಕಾರ್ಯಾಗಾರಕ್ಕೆ ಚಾಲನೆ ನೀಡಲಾಗಿದೆ. ಉದ್ಯಮಶೀಲ ತಜ್ಞರಾದ ಲಲಿತ ಕಾರ್ಯಾಗಾರಕ್ಕೆ ಚಾಲನೆ ನೀಡಿದರು.
ಕಾರ್ಯಾಗಾರದಲ್ಲಿ ಮಹಿಳಾ ಸ್ವಾವಲಂಬನೆಯ ಬಗ್ಗೆ ಆದ್ಯತೆ ನೀಡಲಾಗಿತ್ತು.ತರಬೇತಿಯಲ್ಲಿ ಕಾಗದದ ಮೂಲಕ ತಯಾರು ಮಾಡುವ ಕೊರಿಯರ್ ಕವರ್, ಕಾಗದದ ಬ್ಯಾಗ್, ಲಕೋಟೆಗಳನ್ನು ಸೇರಿದಂತೆ ವಿವಿಧ ಉತ್ಪನ್ನಗಳನ್ನು ತಯಾರು ಮಾಡುವ ಬಗ್ಗೆ ತರಬೇತಿ ನೀಡಲಾಗುತ್ತಿದೆ, ಇದರಿಂದ ಮಹಿಳೆಯರ ಸ್ವಾವಲಂಬನೆಗೆ ಅನುಕೂಲವಾಗಲಿದೆ.
16 ದಿನಗಳ ಕಾಲ ತರಬೇತಿ ಶಿಬಿರ ನಡೆಯುತ್ತಿದ್ದು, ಕಡಿಮೆ ವೆಚ್ಚದಲ್ಲಿ ಸುಲಭವಾಗಿ ತಯಾರಿಸಬಹುದಾದ ಉತ್ಪನ್ನಗಳ ತಯಾರಿಕೆ ಕುರಿತು ಕಲಿಸಲಾಗುತ್ತಿದೆ, ತರಬೇತಿ ಪಡೆದ ಮಹಿಳೆಯರು ಸ್ವಯಂ ಉದ್ಯಮ ಸ್ಥಾಪಿಸಿಕೊಂಡು ಆರ್ಥಿಕವಾಗಿ ಮುನ್ನೆಡಲು ಸಹಕಾರಿಯಾಗಲಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel