ಆಂಬುಲೆನ್ಸ್ ನಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟರೆ ಮೃತ ವ್ಯಕ್ತಿ ಕುಟುಂಬಸ್ಥರು ಅಪಘಾತ ವಿಮೆ ಪಡೆಯಲು ಅರ್ಹರು

January 27, 2023
9:59 PM

ಕಾಯಿಲೆಯಿಂದ ಬಳಲುತ್ತಿರುವ ರೋಗಿ ಚಿಕಿತ್ಸೆಗಾಗಿ ಆಂಬುಲೆನ್ಸ್ ನಲ್ಲಿ ಹೋಗುವ ವೇಳೆ ಅದು ಅಪಘಾತಕ್ಕೀಡಾಗಿ ಸಾವನ್ನಪ್ಪಿದರೆ ಅಂತಹ ಸಂದರ್ಭದಲ್ಲಿ ಮೃತ ವ್ಯಕ್ತಿಯ ಕುಟುಂಬಸ್ಥರು ಅಪಘಾತ ವಿಮೆ ಪಡೆಯಲು ಅರ್ಹರು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಬ್ಬಿನಹಳ್ಳಿ ಗ್ರಾಮದ ವಾಸಿ ರವಿ ಎಂಬವರನ್ನು 2010ರ ಏಪ್ರಿಲ್ 13ರಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಆಂಬುಲೆನ್ಸ್ ಮೂಲಕ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ವೇಗವಾಗಿ ಸಾಗುತ್ತಿದ್ದ ಅಂಬುಲೆನ್ಸ್ ಅಲಪೆ ಗ್ರಾಮದ ಕೊಡೇಕಲ್ ರೈಲ್ವೆ ಮೇಲ್ಸೆತುವೆ ಬಳಿ ಮಗಚಿಕೊಂಡ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ರವಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಹೀಗಾಗಿ ರವಿ ಕುಟುಂಬಸ್ಥರು ಅಪಘಾತ ವಿಮೆ ಪರಿಹಾರ ಕೋರಿದ್ದು, ನ್ಯಾಯಾಧಿಕರಣ 5.50 ಲಕ್ಷ ರೂಪಾಯಿಗಳ ಪರಿಹಾರಕ್ಕೆ ಆದೇಶಿಸಿತ್ತು. ಆದರೆ ರವಿ ಅಪಘಾತದಿಂದ ಮೃತಪಟ್ಟಿಲ್ಲ ಕಾಯಿಲೆಯಿಂದ ಸಾವು ಸಂಭವಿಸಿದೆ ಎಂದು ವಿಮಾ ಕಂಪನಿ ಹೈಕೋರ್ಟ್ ಮೆಟ್ಟಿಲೇರಿದ್ದು, ನ್ಯಾಯಾಧಿಕರಣದ ಆದೇಶವನ್ನು ಎತ್ತಿ ಹಿಡಿದ ನ್ಯಾಯಪೀಠ ಪರಿಹಾರ ಮೊತ್ತವನ್ನು 4.62 ಲಕ್ಷ ರೂಪಾಯಿಗಳಿಗೆ ಇಳಿಕೆ ಮಾಡಿದೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ಧಾರಣೆ ಏರಿಕೆ | ಒಮ್ಮೆಲೇ ಬೇಡಿಕೆ ಹೆಚ್ಚಳದಿಂದ ಮಾರುಕಟ್ಟೆಯಲ್ಲಿ ಅಸ್ಥಿರತೆ – ಭವಿಷ್ಯದಲ್ಲಿ ಗುಣಮಟ್ಟದ ಅಡಿಕೆಗೆ ಬೇಡಿಕೆ ನಿರೀಕ್ಷೆ
January 8, 2026
7:16 AM
by: ದ ರೂರಲ್ ಮಿರರ್.ಕಾಂ
ಚಿಕಿತ್ಸೆ ಮುಗಿದರೂ ಕ್ಯಾನ್ಸರ್ ಅಪಾಯ ಏಕೆ ಮುಗಿಯುವುದಿಲ್ಲ?
January 7, 2026
11:10 PM
by: ದ ರೂರಲ್ ಮಿರರ್.ಕಾಂ
‌ ಭೂಮಿಗೆ ಬಿದ್ದ ಪ್ಲಾಸ್ಟಿಕ್ ಕರಗುವಂತೆ ಮಾಡಬಹುದು…!, ಇದು ಪ್ಲಾಸ್ಟಿಕ್ ಮಾಲಿನ್ಯಕ್ಕೆ ಪರಿಹಾರವೇ?
January 7, 2026
10:43 PM
by: ದ ರೂರಲ್ ಮಿರರ್.ಕಾಂ
2026 ರಲ್ಲಿ ಕೃಷಿ ಕ್ಷೇತ್ರ ಸ್ಥಿರತೆ , ಆದರೆ ಅಸಮಾನತೆ ಮುಂದುವರಿಕೆ
January 7, 2026
10:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror