ದೇಶಾದ್ಯಂತ 15-18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಲು ಸಿದ್ಧತೆ ನಡೆಯುತ್ತಿದೆ. ಈ ವೇಳೆ ಮಕ್ಕಳಿಗೆ ಸದ್ಯದ ಮಟ್ಟಿಗೆ ಕೊವ್ಯಾಕ್ಸಿನ್ ಮಾತ್ರ ನೀಡಲಾಗುವುದೆಂದು ಕೇಂದ್ರ ಸರ್ಕಾರ ತಿಳಿಸಿದೆ. ಮಾತ್ರವಲ್ಲದೆ ಇದಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿಯನ್ನೂ ಸಹ ಕೇಂದ್ರ ಸರ್ಕಾರವು ಬಿಡುಗಡೆಯನ್ನು ಮಾಡಿದೆ.
ಶನಿವಾರವಷ್ಟೇ ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ ಲಸಿಕೆಯನ್ನು 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ನೀಡಲು ಅನುಮತಿಯನ್ನು ನೀಡಲಾಗಿದ್ದು, ಜನವರಿ 3 ರಿಂದ ಲಸಿಕೆ ವಿತರಣೆ ಆರಂಭವಾಗಲಿದೆ. ಇದೇ ವೇಳೆ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರು ಹಾಗೂ ವಿವಿಧ ಕಾಯಿಲೆಯಿದ ಬಳಲುತ್ತಿರುವ 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡುವ ಕುರಿತು ಮಾರ್ಗಸೂಚಿ ಬಿಡುಗಡೆಯನ್ನು ಮಾಡಲಾಗಿದೆ. ಎರಡನೇ ಡೋಸ್ ಪಡೆದು 9 ತಿಂಗಳು ಪೂರ್ಣಗೊಂಡವರಿಗೆ ಮಾತ್ರ ಮುನ್ನೆಚ್ಚರಿಕಾ ಡೋಸ್ ನೀಡಲಾಗುತ್ತದೆ ಎಂದು ಸರಕಾರ ತಿಳಿಸಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel