ಹರಿಯಾಣ ಮೂಲದ ಐಸಿಎಆರ್-ನ್ಯಾಷನಲ್ ರಿಸರ್ಚ್ ಸೆಂಟರ್ ಅಭಿವೃದ್ಧಿಪಡಿಸಿದ ಪ್ರಾಣಿಗಳಿಗಾಗಿ ದೇಶದ ಮೊದಲ ಸ್ವದೇಶಿ ಕೋವಿಡ್-19 ಲಸಿಕೆ ಅನೋಕೊವಾಕ್ಸ್ ಅನ್ನು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಬಿಡುಗಡೆ ಮಾಡಿದ್ದಾರೆ.
ಪ್ರಾಣಿಗಳಿಗೆ ರೋಗನಿರೋಧಕ ಶಕ್ತಿ ಉಂಟು ಮಾಡುವ ಹಾಗೂ ಕೊರೋಲಾ ವೈರಸ್, ರೂಪಾಂತರ ವೈರಸ್ , ಡೆಲ್ಟಾ ಮತ್ತು ಓಮಿಕ್ರಾನ್ ರೂಪಾಂತರಗಳನ್ನು ತಟಸ್ಥಗೊಳಿಸುತ್ತದೆ ಎಂದು ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಹೇಳಿಕೆಯಲ್ಲಿ ತಿಳಿಸಿದೆ. ಇದು ನಾಯಿಗಳು, ಸಿಂಹಗಳು, ಚಿರತೆಗಳು, ಇಲಿಗಳು ಮತ್ತು ಮೊಲಗಳಿಗೆ ಸುರಕ್ಷಿತವಾಗಿದೆ ಎಂದು ಇಲಾಖೆ ಹೇಳಿದೆ.
ಈ ರೋಗವು ಭಾರತದ ಎಲ್ಲಾ ಕೃಷಿ-ಹವಾಮಾನ ಭಾಗಗಳಲ್ಲಿ ವ್ಯಾಪಕವಾಗಿದೆ. ಭಾರತದಲ್ಲಿ, ಜಾನುವಾರು ಉತ್ಪಾದಕತೆಗೆ ವಾರ್ಷಿಕವಾಗಿ 44,740 ಮಿಲಿಯನ್ ನಷ್ಟಗಳು ಎಂದು ಅಂದಾಜಿಸಲಾಗಿದೆ. ಹೀಗಾಗಿ ಸೂಕ್ತ ಮುಂಜಾಗ್ರತಾ ಕ್ರಮವಾಗಿ ಇಂತಹ ಅನ್ವೇಷಣೆ ಅಗತ್ಯ ಎಂದು ಥೋಮರ್ ಅಭಿಪ್ರಾಯಪಟ್ಟರು. ವಿಜ್ಞಾನಿಗಳ ಅವಿರತ ಕೊಡುಗೆಗಳಿಂದಾಗಿ ದೇಶವು ಆಮದು ಮಾಡಿಕೊಳ್ಳುವುದಕ್ಕಿಂತ ಹೆಚ್ಚಾಗಿ ತನ್ನದೇ ಆದ ಲಸಿಕೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಸ್ವಾವಲಂಬಿಯಾಗಿ ನಿಂತಿದೆ. ಇದು ನಿಜವಾಗಿಯೂ ದೊಡ್ಡ ಸಾಧನೆಯಾಗಿದೆ ಎಂದು ಸಚಿವ ಥೋಮರ್ ಹೇಳಿದರು.
ಐಸಿಎಆರ್ ಮಹಾನಿರ್ದೇಶಕ ತ್ರಿಲೋಚನ್ ಮೊಹಾಪಾತ್ರ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಕಾರ್ಯದರ್ಶಿ ಅತುಲ್ ಚತುರ್ವೇದಿ, ಐಸಿಎಆರ್ ಉಪ ಮಹಾನಿರ್ದೇಶಕ (ಪ್ರಾಣಿ ವಿಜ್ಞಾನ) ಭೂಪೇಂದ್ರ ನಾಥ್ ತ್ರಿಪಾಠಿ ಉಪಸ್ಥಿತರಿದ್ದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.