ಕೋವಿಡ್ 4ನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸಿಎಂ ಗೃಹ ಕಚೇರಿಯಲ್ಲಿ ಇಂದು ಮಹತ್ವದ ಸಭೆಯನ್ನು ನಡೆಸಲಾಯಿತು. ಕೊರೋನಾ ನಾಲ್ಕನೇ ಅಲೆಯ ತೀವ್ರತೆ ಮತ್ತು ಸ್ಥಿತಿಗತಿಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಜ್ಞರ ಪರಿಶೀಲನ ಸಭೆಯನ್ನು ನಡೆಸಿದರು.
ಮುಖ್ಯಮಂತ್ರಿ ನೇತೃತ್ವದ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ‘ಕೋವಿಡ್ ನಾಲ್ಕನೇ ಅಲೆಯ ಸ್ಥಿತಿಗತಿ ಬಗ್ಗೆ ಮುಖ್ಯಮಂತ್ರಿ ನೇತೇತ್ವದಲ್ಲಿ ಪರಿಶೀಲನೆ ನಡೆಸಿ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ. ಜನಜಂಗುಳಿ, ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಬೇಕು, ಸಾಮಾಜಿಕ ಅಂತರ ಕಾಪಾಡಬೇಕು. ಆದರೆ, ಮಾಸ್ಕ್ ಧರಿಸದವರಿಗೆ ಸದ್ಯಕ್ಕೆ ದಂಡ ಹಾಕುವ ತೀರ್ಮಾನ ಮಾಡಿಲ್ಲ,’ ಎಂದು ಹೇಳಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel