Advertisement
ಸುದ್ದಿಗಳು

ಕೊರೋನಾ ಎಲರ್ಟ್‌ | ದ ಕ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ | ಎಚ್ಚರ ವಹಿಸಲು ಉಸ್ತುವಾರಿ ಸಚಿವರಿಂದ ಮನವಿ |

Share

ಕೋವಿಡ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಕಡ್ಡಾಯ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಾಪಾಡುವಿಕೆ,  ಸ್ವಚ್ಚತೆ ಹಾಗೂ ಕೋವಿಡ್ ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜನತೆಗೆ ಮನವಿ ಮಾಡಿದ್ದಾರೆ.

 

ಕೊರೋನಾ ಮುಂಜಾಗ್ರತೆಗಾಗಿ  ನಗರದ  ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ವಾರದ 7 ದಿನಗಳಲ್ಲೂ ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಹಾಗೂ ಭಾನುವಾರ ಬೆಳಿಗ್ಗೆ 10ರಿಂದ ಸಂಜೆ 1 ಗಂಟೆಯವರೆಗೆ ಉಚಿತ ಲಸಿಕೆಯನ್ನು ನೀಡಲಾಗುತ್ತಿದೆ. ನಗರ ಪ್ರದೇಶವೂ ಸೇರಿದಂತೆ 78 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವಾರದಲ್ಲಿ 4 ದಿನ ಅಂದರೆ ಪ್ರತೀ ಮಂಗಳವಾರ, ಬುಧವಾರ, ಶುಕ್ರವಾರ, ಶನಿವಾರ ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಉಚಿತ ಲಸಿಕೆ ಕೊಡಲಾಗುವುದು . ಇದನ್ನು ಹೊರತುಪಡಿಸಿ 8 ಮೆಡಿಕಲ್ ಕಾಲೇಜುಗಳೂ ಸೇರಿದಂತೆ 33  ಖಾಸಗಿ ಆಸ್ಪತ್ರೆ/ ನರ್ಸಿಂಗ್ ಹೋಂ ಗಳಲ್ಲಿ ಕೂಡ ಲಸಿಕೆ ಕೊಡುವ ಕಾರ್ಯಕ್ರಮ ಇದ್ದು  ಪ್ರತೀ ಡೋಸ್‍ಗೆ ರೂ 250 ಪಡೆದು ಲಸಿಕೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪ್ರಸ್ತುತ 60 ವರ್ಷ  ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೆ  ಮತ್ತು 45 ರಿಂದ 59 ವರ್ಷದ ವಯಸ್ಸಿನ  ಕೋ-ಮಾರ್ಬಿಡಿಟಿಸ್ ಇರುವ ಫಲಾನುಭವಿಗಳಿಗೆ ಮಾತ್ರ ಲಸಿಕೆ ನೀಡಲಾಗುವುದು. ಆದರೆ ಎಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುವುದು.

ಕೋವಿಡ್‌ ಶಿಷ್ಟಾಚಾರ ಪಾಲಿಸಿ
ಎಲ್ಲಾ ಸಭೆ ಸಮಾರಂಭಗಳಲ್ಲಿ ಕಡ್ಡಾಯವಾಗಿ ಕೋವಿಡ್ ಶಿಷ್ಟಾಚಾರ ಪಾಲನೆ ಮಾಡಬೇಕು. ಕೋವಿಡ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಲಾಕ್‍ಡೌನ್ ಸಾಧ್ಯತೆ ತಪ್ಪಿಸಲು ಕೋವಿಡ್ ಮಾರ್ಗಸೂಚಿ ಪಾಲನೆಯೊಂದೇ ಏಕೈಕ ಮಾರ್ಗವಾಗಿದ್ದು, ಎಲ್ಲರೂ ಕಟ್ಟುನಿಟ್ಟಾಗಿ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿಕೊಂಡಿರುತ್ತಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

17 hours ago

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 days ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

3 days ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

3 days ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

3 days ago