“3T” ಸೂತ್ರದಿಂದ ಕೊರೋನಾ ನಿಯಂತ್ರಣ ಸಾಧ್ಯ – ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ

May 22, 2021
11:05 PM

ಕೊರೋನಾ ಹರಡುವುದನ್ನು ತಡೆಯುವುದು ಹಾಗೂ ನಿಯಂತ್ರಣ ಮಾಡಲು 3 ಟಿ ಸೂತ್ರದಿಂದ ಸಾಧ್ಯವಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅಭಿಪ್ರಾಯಪಟ್ಟಿದ್ದಾರೆ.

Advertisement

ಮಂಗಳೂರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಕುರಿತು ವೈದ್ಯಕೀಯ ತಜ್ಞರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು  ಮಾತನಾಡುತ್ತಿದ್ದರು. ಟೆಸ್ಟಿಂಗ್, ಟ್ರೇಸಿಂಗ್, ಟ್ರೀಟ್‍ಮೆಂಟ್ ಸೂತ್ರ ಇಂದು ಅಗತ್ಯವಾಗಿದೆ. ಕೋವಿಡ್ ಸೋಂಕಿತರ ಸಂಪರ್ಕಿತರನ್ನು ಶೀಘ್ರದಲ್ಲಿಯೇ ಪತ್ತೆ ಹಚ್ಚಿ ಕೋವಿಡ್ ಪರೀಕ್ಷೆಯನ್ನು ನಡೆಸಿ ಸೋಂಕು ಹೊಂದಿದಲ್ಲಿ ಅವರನ್ನು ಪ್ರತ್ಯೇಕಿಸಿ ಚಿಕಿತ್ಸೆ ನೀಡುವುದರಿಂದ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು.

ಕೋವಿಡ್ ಸೋಂಕಿತರ ಪ್ರಮಾಣವನ್ನು ಕಡಿಮೆಗೊಳಿಸಲು ಕೋವಿಡ್ ಸೋಂಕು ದೃಢಪಟ್ಟವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದವರನ್ನು ಗುರುತಿಸಿ ಕೋವಿಡ್ ಪರೀಕ್ಷೆಗೆ ಒಳಪಡಿಸಿ ಸೋಂಕು ಹೊಂದಿದಲ್ಲಿ ಅವರನ್ನು ಪ್ರತ್ಯೇಖಿಸಿ ಚಿಕಿತ್ಸೆ ನೀಡಿದಾಗ ಸೋಂಕು ನಿಯಂತ್ರಣ ತರಲು ಸಾಧ್ಯ, ಕೋವಿಡ್ ಪರೀಕ್ಷೆಯ ಫಲಿತಾಂಶವನ್ನು 24 ಗಂಟೆಯ ಒಳಗಾಗಿ ನೀಡಲಾಗುತ್ತಿರುವುದು ಸೊಂಕಿತರನ್ನು ಪ್ರತ್ಯೇಕಗೊಳಿಸಿ ಆರಂಭದಲ್ಲಿ ಚಿಕಿತ್ಸೆ ನೀಡಲು ಅನುಕೂಲವಾಗಿದೆ ಎಂದರು.

ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 6882 ಬೆಡ್ ಗಳಿದ್ದು ಅವುಗಳಲ್ಲಿ 1,470 ರೋಗಿಗಳ ಬಳಕೆಯಲ್ಲಿದರೆ 5,412 ಬೆಡ್ ಗಳು ಖಾಲಿ ಇವೆ, ಸಾಮಾನ್ಯ ಬೆಡ್‍ಗಳಲ್ಲಿ 472 ,ಆಕ್ಸಿಜನ್ ಬೆಡ್ ನಲ್ಲಿ 555, ಐ. ಸಿ. ಯು ನಲ್ಲಿ 146, ವೆಂಟಿಲೇಟರ್ ನಲ್ಲಿ 183 ಸೇರಿದಂತೆ 1470 ರಷ್ಟು ಭರ್ತಿಯಾಗಿವೆ ಎಂದು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಈಗಾಗಲೇ ಸಾಮಾನ್ಯ ರೋಗಿಗಳು ಮನೆಯಲ್ಲಿಯೇ  ಚಿಕಿತ್ಸೆಗೆ ಆಕ್ಸಿಜನ್‍ನ್ನು ಬಳಸುತ್ತಿದ್ದಾರೆ, ಈ ಬಗ್ಗೆ ಶಿಫಾರಸ್ಸು ಮಾಡಿದ ವೈದ್ಯರುಗಳು ಮಾಹಿತಿಯನ್ನು ನೀಡಿದ್ದಲ್ಲಿ ಅಂತವರಿಗೆ ಆಕ್ಸಿಜನ್ ಪೂರೈಕೆ ಮಾಡಲಾಗುವುದು ಎಂದರು.

ಕೋರೋನ ಸೋಂಕು ದೃಢ ಹೊಂದಿದ ಯಾವುದೇ ರೋಗ ಲಕ್ಷಣ ಇಲ್ಲದೇ ಮನೆಯಲ್ಲಿಯೇ ಇದ್ದು ರೋಗ ಉಲ್ಬಣಗೊಂಡು ಕೊನೆಯ ಕ್ಷಣಗಳಲ್ಲಿ ಆಸ್ಪತ್ರೆಗೆ ದಾಖಲಾಗುತ್ತಾರೆ. ಇಂತಹ ಪ್ರಕರಣಗಳಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮರಣ ಹೊಂದುವ ಪ್ರಕರಣಗಳು ಕಂಡುಬರುತ್ತಿದೆ ಇದಕ್ಕೆ ಆಸ್ಪದ ನೀಡಬಾರದು ಎಂದು ಜಿಲ್ಲಾದಿಕಾರಿಗಳು ಸೂಚನೆ ನೀಡಿದರು.

Advertisement
ಬ್ಲಾಕ್ ಫಂಗಸ್ ರೋಗವು ಸೋಂಕಿನ ರೋಗವಲ್ಲ ಜನರು ಇದರ ಬಗ್ಗೆ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದ ಅವರು ಆಸ್ಪತ್ರೆಗಳಲ್ಲಿ ಬ್ಲಾಕ್ ಫಂಗಸ್ ರೋಗಕ್ಕೆ ಚಿಕಿತ್ಸೆಗೆ ಬರುವ ಜಿಲ್ಲೆಯ ಹಾಗೂ ಹೊರಜಿಲ್ಲೆಯಿಂದ ಬಂದವರ ಬಗ್ಗೆ ಪ್ರತೀ ದಿನದ ಮಾಹಿತಿಯನ್ನು ಎಲ್ಲಾ ಆಸ್ಪತ್ರೆಗಳು ನೋಡಲ್ ಅಧಿಕಾರಿಗಳಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ ವಿ ಹೇಳಿದರು .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-07-2025 | ನಾಳೆಯಿಂದ ಮಳೆ ಕಡಿಮೆ ನಿರೀಕ್ಷೆ | ಹಲವು ದಿನಗಳ ಬಳಿಕ ರೈತರಿಗೆ ಆಶಾದಾಯಕ ಹವಾಮಾನ |
July 21, 2025
12:48 PM
by: ಸಾಯಿಶೇಖರ್ ಕರಿಕಳ
ಕಬ್ಬಿಗೆ ದರ ನಿಗದಿ ಮಾಡುವಂತೆ ಭಾಕಿಸಂ ಒತ್ತಾಯ
July 21, 2025
7:11 AM
by: The Rural Mirror ಸುದ್ದಿಜಾಲ
ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ರೈತರಿಗೆ ಸಲಹೆ
July 21, 2025
6:58 AM
by: The Rural Mirror ಸುದ್ದಿಜಾಲ
ಲಕ್ ಪತಿ ದೀದಿ ಯೋಜನೆ | ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿ
July 21, 2025
6:52 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group