ಕೊರೋನಾ ಹರಡುವುದನ್ನು ತಡೆಯುವುದು ಹಾಗೂ ನಿಯಂತ್ರಣ ಮಾಡಲು 3 ಟಿ ಸೂತ್ರದಿಂದ ಸಾಧ್ಯವಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅಭಿಪ್ರಾಯಪಟ್ಟಿದ್ದಾರೆ.
ಮಂಗಳೂರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಕುರಿತು ವೈದ್ಯಕೀಯ ತಜ್ಞರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಟೆಸ್ಟಿಂಗ್, ಟ್ರೇಸಿಂಗ್, ಟ್ರೀಟ್‍ಮೆಂಟ್ ಸೂತ್ರ ಇಂದು ಅಗತ್ಯವಾಗಿದೆ. ಕೋವಿಡ್ ಸೋಂಕಿತರ ಸಂಪರ್ಕಿತರನ್ನು ಶೀಘ್ರದಲ್ಲಿಯೇ ಪತ್ತೆ ಹಚ್ಚಿ ಕೋವಿಡ್ ಪರೀಕ್ಷೆಯನ್ನು ನಡೆಸಿ ಸೋಂಕು ಹೊಂದಿದಲ್ಲಿ ಅವರನ್ನು ಪ್ರತ್ಯೇಕಿಸಿ ಚಿಕಿತ್ಸೆ ನೀಡುವುದರಿಂದ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು.
ಕೋವಿಡ್ ಸೋಂಕಿತರ ಪ್ರಮಾಣವನ್ನು ಕಡಿಮೆಗೊಳಿಸಲು ಕೋವಿಡ್ ಸೋಂಕು ದೃಢಪಟ್ಟವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದವರನ್ನು ಗುರುತಿಸಿ ಕೋವಿಡ್ ಪರೀಕ್ಷೆಗೆ ಒಳಪಡಿಸಿ ಸೋಂಕು ಹೊಂದಿದಲ್ಲಿ ಅವರನ್ನು ಪ್ರತ್ಯೇಖಿಸಿ ಚಿಕಿತ್ಸೆ ನೀಡಿದಾಗ ಸೋಂಕು ನಿಯಂತ್ರಣ ತರಲು ಸಾಧ್ಯ, ಕೋವಿಡ್ ಪರೀಕ್ಷೆಯ ಫಲಿತಾಂಶವನ್ನು 24 ಗಂಟೆಯ ಒಳಗಾಗಿ ನೀಡಲಾಗುತ್ತಿರುವುದು ಸೊಂಕಿತರನ್ನು ಪ್ರತ್ಯೇಕಗೊಳಿಸಿ ಆರಂಭದಲ್ಲಿ ಚಿಕಿತ್ಸೆ ನೀಡಲು ಅನುಕೂಲವಾಗಿದೆ ಎಂದರು.
ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 6882 ಬೆಡ್ ಗಳಿದ್ದು ಅವುಗಳಲ್ಲಿ 1,470 ರೋಗಿಗಳ ಬಳಕೆಯಲ್ಲಿದರೆ 5,412 ಬೆಡ್ ಗಳು ಖಾಲಿ ಇವೆ, ಸಾಮಾನ್ಯ ಬೆಡ್‍ಗಳಲ್ಲಿ 472 ,ಆಕ್ಸಿಜನ್ ಬೆಡ್ ನಲ್ಲಿ 555, ಐ. ಸಿ. ಯು ನಲ್ಲಿ 146, ವೆಂಟಿಲೇಟರ್ ನಲ್ಲಿ 183 ಸೇರಿದಂತೆ 1470 ರಷ್ಟು ಭರ್ತಿಯಾಗಿವೆ ಎಂದು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಈಗಾಗಲೇ ಸಾಮಾನ್ಯ ರೋಗಿಗಳು ಮನೆಯಲ್ಲಿಯೇ ಚಿಕಿತ್ಸೆಗೆ ಆಕ್ಸಿಜನ್‍ನ್ನು ಬಳಸುತ್ತಿದ್ದಾರೆ, ಈ ಬಗ್ಗೆ ಶಿಫಾರಸ್ಸು ಮಾಡಿದ ವೈದ್ಯರುಗಳು ಮಾಹಿತಿಯನ್ನು ನೀಡಿದ್ದಲ್ಲಿ ಅಂತವರಿಗೆ ಆಕ್ಸಿಜನ್ ಪೂರೈಕೆ ಮಾಡಲಾಗುವುದು ಎಂದರು.
ಕೋರೋನ ಸೋಂಕು ದೃಢ ಹೊಂದಿದ ಯಾವುದೇ ರೋಗ ಲಕ್ಷಣ ಇಲ್ಲದೇ ಮನೆಯಲ್ಲಿಯೇ ಇದ್ದು ರೋಗ ಉಲ್ಬಣಗೊಂಡು ಕೊನೆಯ ಕ್ಷಣಗಳಲ್ಲಿ ಆಸ್ಪತ್ರೆಗೆ ದಾಖಲಾಗುತ್ತಾರೆ. ಇಂತಹ ಪ್ರಕರಣಗಳಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮರಣ ಹೊಂದುವ ಪ್ರಕರಣಗಳು ಕಂಡುಬರುತ್ತಿದೆ ಇದಕ್ಕೆ ಆಸ್ಪದ ನೀಡಬಾರದು ಎಂದು ಜಿಲ್ಲಾದಿಕಾರಿಗಳು ಸೂಚನೆ ನೀಡಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…