ಕೊರೋನಾ ನಿಯಂತ್ರಣ ಕಾರ್ಯಗಳನ್ನು ವಾರ್ಡ್ ಹಾಗೂ ಗ್ರಾಮಮಟ್ಟದಲ್ಲಿ ಮಾಡಬೇಕು – ಕೋಟಾ ಶ್ರೀನಿವಾಸ ಪೂಜಾರಿ

June 5, 2021
8:23 PM

ಕೋವಿಡ್ ನಿಯಂತ್ರಣ ಕಾರ್ಯಗಳನ್ನು ವಾರ್ಡ್ ಹಾಗೂ ಗ್ರಾಮಮಟ್ಟದ ಸಮಿತಿಗಳು ಪರಿಣಾಮಕಾರಿಯಾಗಿ ಮಾಡಿದಾಗ ಮಾತ್ರ ಸೋಕು ನಿಯಂತ್ರಣಕ್ಕೆ ತರಲು ಸಾಧ್ಯವಾಗುತ್ತದೆ ಎಂದು ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

Advertisement

ಅವರು ಕೋಟೆಕಾರ್ ಪಟ್ಟಣ ಪಂಚಾಯತ್‍ನ ಸಭಾಂಗಣದಲ್ಲಿ ಕೋವಿಡ್ -19 ನಿಯಂತ್ರಣಕ್ಕೆ ಸಂಬಂಧಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕೋವಿಡ್ ಸೋಂಕಿತರನ್ನು ಸಾಧ್ಯವಾದಷ್ಟು ಕೋವಿಡ್ ಕೇರ್ ಸೆಂಟರ್ ಗಳಿಗೆ ವರ್ಗಾಹಿಸಬೇಕು, ಸೋಂಕು ತೀವ್ರ ಉಲ್ಭಣಗೊಂಡವರಿಗೆ ಆಸ್ಪತ್ರೆಗೆ ಸೇರಿಸಬೇಕು. ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ಕ್ಷೇಮವನ್ನು ಸಮಿತಿಯ ಸದಸ್ಯರುಗಳು ಪ್ರತೀ ದಿನ ವಿಚಾರಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ಹೋಮ್ ಕ್ವಾರಂಟೈನ್‍ನಲ್ಲಿರುವ ಸೋಂಕಿತರ ಮನೆಗೆ ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು ಹಾಗೂ ವಾರ್ಡ್ ಹಾಗೂ ಗ್ರಾಮ ಮಟ್ಟದ ಸಮಿತಿಯ ಸದಸ್ಯರುಗಳು ಸಹ ಭೇಟಿ ನೀಡಿ ಅವರ ಆರೋಗ್ಯದ ಸ್ಥಿತಿಗತಿಗಳನ್ನು ನೋಡುವುದರ ಜೊತೆಗೆ ಅವರ ದೈನಂದಿನ ಅವಶ್ಯಕತೆಗಳಾದ ಆಹಾರ ಸಾಮಾಗ್ರಿ ಸೇರಿದಂತೆ ಮತ್ತಿತರ ವಸ್ತುಗಳನ್ನು ಪೂರೈಕೆ ಮಾಡುವುದರೊಂದಿಗೆ ಸೋಂಕಿತರು ಹೊರಗಡೆ ಅಡ್ಡಾಡದಂತೆ ತಡೆಯಲು ಸಾಧ್ಯ, ಅಂತಹಾ ಮನೆಗಳನ್ನು ಸೀಲ್ ಡೌನ್ ಮಾಡಬೇಕು ಎಂದರು.

ಕೋವಿಡ್ ಪಾಸಿಟಿವ್ ಇರುವವರ ಮನೆಯನ್ನು ಸೀಲ್ ಡೌನ್ ಮಾಡುವುದರಿಂದ ಕೋವಿಡ್ ನಿಯಂತ್ರಣ ಸಾಧ್ಯ,  ಕೋವಿಡ್ ಪೋಸಿಟಿವ್ ಇರುವ ಮನೆಗಳನ್ನು ಗುರುತಿಸಿ ಸ್ಟಿಕ್ಕರ್ ಗಳನ್ನು ಹಾಕುವ ಕಾರ್ಯವನ್ನು ಕಾರ್ಯಪಡೆಗಳು ಮಾಡಬೇಕು ಎಂದ ಅವರು  ಕೋವಿಡ್ ಪಾಸಿಟಿವ್ ಇರುವ ವ್ಯಕ್ತಿ ಅಥವಾ ಅವರ ಮನೆಯವರು ಅನಾವಶ್ಯಕವಾಗಿ ಮನೆಯಿಂದ ಹೊರಗಡೆ ಸುತ್ತಾಡುವುದು ಕಂಡು ಬಂದಲ್ಲಿ ಬೀಟ್ ಪೋಲೀಸರು ಅವರಿಗೆ ಎಚ್ಚರಿಕೆ ನೀಡುವುದರೊಂದಿಗೆ  ಸೂಕ್ತ ಕ್ರಮ ಕೈಗೊಳ್ಳಬಹುದಾಗಿದೆ ಎಂದರು.

ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ನೋಡಲ್ ಅಧಿಕಾರಿ, ಸ್ಥಳೀಯ ಕೌನ್ಸಿಲರ್ ಹಾಗೂ ವಾರ್ಡ್ ಸದಸ್ಯರಿರುವ ತಂಡದಿಂದ ವಾರ್ಡ್ ಸಮೀಕ್ಷೆ ಮಾಡುವ ಕೆಲಸಗಳು ನಡೆಯಬೇಕು ಎಂದ ಅವರು ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿರುವ ಗುಣಮಟ್ಟದ ಪಲ್ಸ್ ಆಕ್ಸಿ ಮೀಟರ್, ಮಾಸ್ಕ್, ಸ್ಯಾನಿಟೈಸರ್ ಹಾಗೂ ಕೈಗವಸುಗಳ ಬಗ್ಗೆ ವಿಚಾರಿಸಿ ತುರ್ತು ಸಮಯದಲ್ಲಿ ಆಶಾ ಕಾರ್ಯಕರ್ತೆಯರಿಗೆ ಓಡಾಡಲು ವಾಹನದ ವ್ಯವಸ್ಥೆಯ ಅಗತ್ಯವಿದ್ದರೆ ಪಟ್ಟಣ ಪಂಚಾಯತ್ ವತಿಯಿಂದ ಒದಗಿಸಬೇಕು ಎಂದು  ಸೂಚಿಸಿದರು.

ಆರ್ಥಿಕ ಸಂಕಷ್ಟದಲ್ಲಿರುವವರಿಗೆ ಆಹಾರ ಸಾಮಾಗ್ರಿಗಳ ಅಗತ್ಯವಿರುವುದರಿಂದ ಅಂತವರಿಗೆ ಧಾನಿಗಳು ಅಥವಾ ಸಂಘಸಂಸ್ಥೆಗಳ ನೆರವಿನಿಂದ ಸಹಾಯ ಮಾಡುವ ಕಾರ್ಯ ಆಗಬೇಕು ಇನ್ನೂ ಹೆಚ್ಚಿನ ಅಗತ್ಯತೆ ಇದ್ದಲ್ಲಿ ಜಿಲ್ಲಾಡಳಿತವು ನೆರವು ನೀಡಲಿದೆ ಎಂದರು.

Advertisement

ಪಡಿತರ ಚೀಟಿ ಬಗ್ಗೆ ಮಾತನಾಡಿದ ಸಚಿವರು  5 ಲಕ್ಷಕ್ಕಿಂತ ಮೇಲ್ಪಟ್ಟು ಆದಾಯ ಹೊಂದಿ ಆದಾಯ ತೆರಿಗೆ ಪಾವತಿ ಮಾಡುವವರನ್ನು ಹೊರತು ಪಡಿಸಿ ಉಳಿದವರಿಗೆ ಬಿ.ಪಿ.ಎಲ್ ಕಾರ್ಡ್ ಮುಂದಿನ ದಿನಗಳಲ್ಲಿ ನೀಡಲಾಗುವುದು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಜ್ಞಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್, ಅಲೇಮಾರಿ ಜನಾಂಗದ ಅಧ್ಯಕ್ಷ ರವೀಂದ್ರ ಶೇಟ್,  ಕೋಟೆಕಾರ್ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಪ್ರಫುಲ್ಲಾ ದಾಸ್, ಉಪಾಧ್ಯಕ್ಷರು, ಪಂಚಾಯತ್ ಸದಸ್ಯರು, ತಹಶೀಲ್ದಾರು,  ಆಶಾಕಾರ್ಯಕರ್ತೆಯರು  ಇನ್ನಿತರ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಮರನಾಥ ಯಾತ್ರೆಗೆ ಚಾಲನೆ | ಮೊದಲ ಗುಂಪಿನ 5,880 ಯಾತ್ರಿಗಳು ಪ್ರಯಾಣ
July 3, 2025
11:46 PM
by: ದ ರೂರಲ್ ಮಿರರ್.ಕಾಂ
ರಾಜ್ಯದ ವಿವಿಧೆಡೆ ಧಾರಾಕಾರ ಮಳೆ | ಉತ್ತರಕನ್ನಡ, ಕೊಡಗಿನಲ್ಲಿ ಸಮಸ್ಯೆ
July 3, 2025
11:38 PM
by: The Rural Mirror ಸುದ್ದಿಜಾಲ
ಕೇರಳದಲ್ಲಿ 1 ಲಕ್ಷ ಹೆಕ್ಟೇರ್‌ ರಬ್ಬರ್‌ ತೋಟದಲ್ಲಿ ಟ್ಯಾಪಿಂಗ್‌ ಇಲ್ಲ..!
July 3, 2025
2:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-07-2025 | ಇಂದು ಸಾಮಾನ್ಯ ಮಳೆ | ಜು.6 ರ ನಂತರ ಮಲೆನಾಡು-ಕರಾವಳಿ ಹವಾಮಾನ ಹೇಗೆ ? | ಜು.4 ರಿಂದ ಒಳನಾಡು ವಾತಾವರಣ ಹೇಗೆ ?
July 3, 2025
12:35 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group