ಕೊರೋನಾ ನಿಯಂತ್ರಣ | ದ ಕ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಉಸ್ತುವಾರಿ ಸಚಿವರು ಸೂಚನೆ

April 16, 2021
8:23 PM

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್‌ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

Advertisement
Advertisement
Advertisement

ವಿಡಿಯೋ ಕಾನ್ಫ್‍ರೆನ್ಸ್ ಮೂಲಕ ಕೊರೋನಾ ನಿಯಂತ್ರಣ ಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ  ಮಾತನಾಡಿದ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೊರೋನಾ ಪಾಸಿಟಿವ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣ ಕ್ರಮಗಳನ್ನು ಕಟುನಿಟ್ಟಾಗಿ ಜಾರಿಗೆ ತರುವುದರ ಜೊತೆಗೆ ಕೋವಿಡ್  ಪರೀಕ್ಷೆಗಳನ್ನು ಹೆಚ್ಚು ಹೆಚ್ಚು ಮಾಡಿ, ಸೋಂಕಿತರನ್ನು ಗುರುತಿಸಿ, ಚಿಕಿತ್ಸೆ ನೀಡಿ, ಅವರೊಂದಿಗೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದವರಿಗೂ ಸಹ ಪರೀಕ್ಷೆಗೆ ಒಳಪಡಿಸಬೇಕು ಎಂದು ಸೂಚನೆ ನೀಡಿದರು.

Advertisement

ಸಾರ್ವಜನಿಕರು ಕೋವಿಡ್ ನಿಯಂತ್ರಣದ ಸರಳ ಮಾರ್ಗಸೂಚಿಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ಸ್ಯಾನಿಟೈಸರ್ ಬಳಕೆ ಸೇರಿದಂತೆ ಮತ್ತಿತರ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದ ಅವರು ಮಾಲ್‍ಗಳಲ್ಲಿ, ಪೆಟ್ರೋಲ್ ಬಂಕ್ ಸೇರಿದಂತೆ ಮತ್ತಿತರ ವಾಣಿಜ್ಯ ಚಟುವಟಿಕೆದಾರರು ತಮ್ಮ ಗ್ರಾಹಕರಿಗೆ ಕರೋನಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ಎಚ್ಚರಿಸಬೇಕು.  ರಾತ್ರಿ ಕಫ್ರ್ಯೂ ನಿಯಮಗಳು ಕಟ್ಟುನಿಟ್ಟಾಗಿ ಪಾಲನೆಯಾಗಬೇಕು. ಕೇರಳ ಗಡಿಯಲ್ಲಿ ಕೊರೋನಾ ನೆಗೆಟಿವ್ ರಿಪೋರ್ಟ್‍ನ ತಪಾಸಣೆ ಸೇರಿದಂತೆ ಮತ್ತಿತರ ನಿಯಂತ್ರಣ ಕ್ರಮಗಳನ್ನು ಜಿಲ್ಲೆಯಾದ್ಯಂತ ಬಿಗಿಗೊಳಿಸಬೇಕು ಎಂದರು.

ಗ್ರಾಮೀಣ ಪ್ರದೇಶಗಳಲ್ಲಿಯೂ ಕೊರೋನಾ ಸೋಂಕಿನ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದ ಅವರು ಸಭೆ ಸಮಾರಂಭಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಚಾಚು ತಪ್ಪದೆ ಪಾಲಿಸಬೇಕು ಇವುಗಳ ಮೇಲುಸ್ತುವಾರಿಯನ್ನು ಸ್ಥಳೀಯ ಸಂಸ್ಥೆಗಳು, ಪೋಲಿಸ್ ಇಲಾಖೆ ಮಾಡಬೇಕು ಎಂದು ಇಲಾಖೆಗಳಿಗೆ ಸೂಚನೆ ನೀಡಿದರು.

Advertisement

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನವಾನೆ, ಅಪರ ಜಿಲ್ಲಾಧಿಕಾರಿ ಎಮ್. ಜೆ. ರೂಪಾ, ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ಸಿಡಿಪಿಓಗಳು ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather | 28-03-2024 | ಕೆಲವು ಕಡೆ ತುಂತುರು ಮಳೆ | ಮಾ.31 ನಂತರ ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ |
March 28, 2024
1:19 PM
by: ಸಾಯಿಶೇಖರ್ ಕರಿಕಳ
ಬರ ಹಿನ್ನೆಲೆ | ಮೈಸೂರು ಜಿಲ್ಲೆಯಲ್ಲಿ ಪಂಪ್‌ಸೆಟ್ ಬಳಸಿ ಕೃಷಿಗೆ ನದಿ ನೀರು ಬಳಕೆ ನಿಷೇಧ |
March 27, 2024
10:01 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಪ್ರಕರಣಗಳಲ್ಲಿ ದೂರು ದಾಖಲಾಗುತ್ತಿಲ್ಲವೇಕೆ…? | ಆರೋಪಿಗಳು ಪತ್ತೆಯಾಗುತ್ತಿಲ್ಲವೇಕೆ…? |
March 27, 2024
9:32 PM
by: ದ ರೂರಲ್ ಮಿರರ್.ಕಾಂ
Karnataka Weather | 27-03-2024 | ರಾಜ್ಯದಲ್ಲಿ ಒಣ ಹವೆ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |
March 27, 2024
12:49 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror