ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
ವಿಡಿಯೋ ಕಾನ್ಫ್‍ರೆನ್ಸ್ ಮೂಲಕ ಕೊರೋನಾ ನಿಯಂತ್ರಣ ಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣ ಕ್ರಮಗಳನ್ನು ಕಟುನಿಟ್ಟಾಗಿ ಜಾರಿಗೆ ತರುವುದರ ಜೊತೆಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚು ಹೆಚ್ಚು ಮಾಡಿ, ಸೋಂಕಿತರನ್ನು ಗುರುತಿಸಿ, ಚಿಕಿತ್ಸೆ ನೀಡಿ, ಅವರೊಂದಿಗೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದವರಿಗೂ ಸಹ ಪರೀಕ್ಷೆಗೆ ಒಳಪಡಿಸಬೇಕು ಎಂದು ಸೂಚನೆ ನೀಡಿದರು.
ಸಾರ್ವಜನಿಕರು ಕೋವಿಡ್ ನಿಯಂತ್ರಣದ ಸರಳ ಮಾರ್ಗಸೂಚಿಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ಸ್ಯಾನಿಟೈಸರ್ ಬಳಕೆ ಸೇರಿದಂತೆ ಮತ್ತಿತರ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದ ಅವರು ಮಾಲ್‍ಗಳಲ್ಲಿ, ಪೆಟ್ರೋಲ್ ಬಂಕ್ ಸೇರಿದಂತೆ ಮತ್ತಿತರ ವಾಣಿಜ್ಯ ಚಟುವಟಿಕೆದಾರರು ತಮ್ಮ ಗ್ರಾಹಕರಿಗೆ ಕರೋನಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ಎಚ್ಚರಿಸಬೇಕು. ರಾತ್ರಿ ಕಫ್ರ್ಯೂ ನಿಯಮಗಳು ಕಟ್ಟುನಿಟ್ಟಾಗಿ ಪಾಲನೆಯಾಗಬೇಕು. ಕೇರಳ ಗಡಿಯಲ್ಲಿ ಕೊರೋನಾ ನೆಗೆಟಿವ್ ರಿಪೋರ್ಟ್‍ನ ತಪಾಸಣೆ ಸೇರಿದಂತೆ ಮತ್ತಿತರ ನಿಯಂತ್ರಣ ಕ್ರಮಗಳನ್ನು ಜಿಲ್ಲೆಯಾದ್ಯಂತ ಬಿಗಿಗೊಳಿಸಬೇಕು ಎಂದರು.
ಗ್ರಾಮೀಣ ಪ್ರದೇಶಗಳಲ್ಲಿಯೂ ಕೊರೋನಾ ಸೋಂಕಿನ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದ ಅವರು ಸಭೆ ಸಮಾರಂಭಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಚಾಚು ತಪ್ಪದೆ ಪಾಲಿಸಬೇಕು ಇವುಗಳ ಮೇಲುಸ್ತುವಾರಿಯನ್ನು ಸ್ಥಳೀಯ ಸಂಸ್ಥೆಗಳು, ಪೋಲಿಸ್ ಇಲಾಖೆ ಮಾಡಬೇಕು ಎಂದು ಇಲಾಖೆಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನವಾನೆ, ಅಪರ ಜಿಲ್ಲಾಧಿಕಾರಿ ಎಮ್. ಜೆ. ರೂಪಾ, ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ಸಿಡಿಪಿಓಗಳು ಮತ್ತಿತರರು ಉಪಸ್ಥಿತರಿದ್ದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…