ಕೋವಿಡ್ ಬಂದವರಿಗೆ 7 ದಿನ ಕಡ್ಡಾಯ ರಜೆ, ಹೋಮ್ ಐಸೊಲೇಷನ್ | ಸೋಂಕಿತರ ಮನೆಗಳಿಗೆ ವೈದ್ಯರಿಂದ ಭೇಟಿ

December 27, 2023
11:28 AM

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್‌(Covid) ಸೋಂಕಿತರ ಸಂಖ್ಯ ಏರುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಕೋವಿಡ್  ಸೋಂಕಿತರ ಮನೆಗಳಿಗೆ ಸರ್ಕಾರಿ ವೈದ್ಯರು(Govt Doctors) ಭೇಟಿ ನೀಡಿ ಹೆಚ್ಚಿನ ನಿಗಾ ವಹಿಸುವಂತೆ ಆರೋಗ್ಯ ಸಚಿವ(Health Minister) ದಿನೇಶ್ ಗುಂಡೂರಾವ್ (Dinesh Gundu Rao) ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ನಿಟ್ಟಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ(Bengaluru) ವಿಧಾನ ಸೌಧದಲ್ಲಿ(Vidhana Soudha) ಸಂಪುಟ ಉಪಸಮಿತಿ ಸಭೆ ನಡೆಯಿತು.

Advertisement
Advertisement

ರಾಜ್ಯದಲ್ಲಿ ಜೆ.ಎನ್.1 ಉಪತಳಿ, ಹಾಗೂ ಕೋವಿಡ್ ಸೋಂಕಿನ ಕುರಿತು ವಿಸ್ತೃತವಾಗಿ ಸಭೆಯಲ್ಲಿ ಚರ್ಚೆ ನಡೆಸಿದ ಸಂಪುಟ ಉಪಸಮಿತಿ, ಕೋವಿಡ್ ನಿಯಂತ್ರಣ ವಿಚಾರದಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿತು. ಹೊಸ ವರ್ಷಾಚರಣೆಗೆ ಸದ್ಯಕ್ಕೆ ನಿರ್ಬಂಧ ಹೇರುವುದು ಬೇಡ ಎಂಬ ನಿರ್ಧಾರವನ್ನ ಸಭೆಯಲ್ಲಿ ತೆಗೆದುಕೊಳ್ಳಲಾಯಿತು. ಆದರೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ, ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ಜನರು ಮಾಸ್ಕ್ ಹಾಕಿಕೊಳ್ಳುವಂತೆ ಸಲಹೆ ನೀಡಲು ನಿರ್ಧರಿಸಲಾಯಿತು.‌

Advertisement

ಕಾಯಿಲೆ ಹೊಂದಿದವರು ಮುನ್ನೆಚ್ಚರಿಕೆ ಕ್ರಮವಾಗಿ ವ್ಯಾಕ್ಸಿನ್ ತೆಗೆದುಕೊಳ್ಳಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸದ್ಯಕ್ಕೆ 30 ಸಾವಿರ ವ್ಯಾಕ್ಸಿನ್‌ಗಳನ್ನು (Vaccine) ಕೇಂದ್ರ ಸರ್ಕಾರದಿಂದ ಪಡೆದು ರಾಜ್ಯದ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಿಗೆ ವಿತರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಸಂಪುಟ ಉಪಸಮಿತಿ ಸಭೆಯ ಹೈಲೆಟ್ಸ್:

Advertisement
  •  ಮಕ್ಕಳಲ್ಲಿ ವೇಗವಾಗಿ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಜ್ವರ, ನೆಗಡಿ ಸೇರಿದಂತೆ ಯಾವುದೇ ಆರೋಗ್ಯ ಸಮಸ್ಯೆ (Health Problem) ಇರುವ ಮಕ್ಕಳನ್ನು ಶಾಲೆಗಳಿಗೆ (School) ಕಳುಹಿಸಬಾರದು. ಮನೆಯಲ್ಲೇ ಸೂಕ್ತ ಆರೈಕೆಗೆ ಮಾರ್ಗಸೂಚಿ ಹೊರಡಿಸಲು ನಿರ್ಧಾರ.
  • ಕೋವಿಡ್ ಪಾಸಿಟಿವ್ ಆದವರು ಕಡ್ಡಾಯವಾಗಿ 7 ದಿನ ಹೋಮ್ ಐಸೊಲೇಷನಲ್‌ (Home Isolation) ಇರಬೇಕು. ʻಹೋಮ್ ಐಸೊಲೇಷನ್ʼನಲ್ಲಿ ಇರುವ, ಸರ್ಕಾರಿ ಅಥವಾ ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ 7 ದಿನಗಳ ರಜೆ ಕೊಡಬೇಕು. ಐಸಿಯು ಅಥವಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಬಾಧಿತರಿಗೆ ಸಂಪೂರ್ಣ ಗುಣಮುಖರಾಗುವರೆಗೆ ರಜೆ (Holiday) ಕೊಡಿಸುವ ಕುರಿತು ಸರ್ಕಾರದಿಂದ ಮಾರ್ಗಸೂಚಿ ಹೊರಡಿಸಲು ಸಭೆಯಲ್ಲಿ ನಿರ್ಧಾರ.
  • ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳು, ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ್ ರಚನೆಗೆ ನಿರ್ಧಾರ. ಬೆಂಗಳೂರಿನ ವಿಕ್ಟೋರಿಯಾ, ಮತ್ತು ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ್.‌ ಐಸಿಯು ಬೆಡ್, ಹಾಗೂ ಐಸೊಲೇಷನ್ ಬೆಡ್ ವ್ಯವಸ್ಥೆ.
  • ರಾಜ್ಯದಲ್ಲಿ ಕೋವಿಡ್ 436 ಸಕ್ರಿಯ ಪ್ರಕರಣಗಳಿವೆ. ಹೋಮ್ ಐಸೊಲೇಷನ್ ನಲ್ಲಿರುವ 400 ಕೋವಿಡ್ ಸೋಂಕಿತರ ಮನೆಗಳಿಗೆ ವೈದ್ಯರು ಭೇಟಿ ನೀಡಿ ನಿಗಾ ವಹಿಸಲು ಸೂಚನೆ ನೀಡಲಾಯಿತು. ಸೋಂಕಿತರ ಪ್ರಾಥಮಿಕ ಸಂಪರ್ಕಿತರಲ್ಲಿ ಕೋವಿಡ್ ರೋಗಲಕ್ಷಣಗಳಿದ್ದರೆ ಕಡ್ಡಾಯವಾಗಿ ಟೆಸ್ಟಿಂಗ್ ನಡೆಸಬೇಕು. ಐಸಿಯುನಲ್ಲಿ (ICU) ಚಿಕಿತ್ಸೆ ಪಡೆಯುತ್ತಿರುವವರ ಮೇಲೆ ಹೆಚ್ಚಿನ ನಿಗಾ ವಹಿಸಬೇಕು.‌
  • ಕೋವಿಡ್ ಶಂಕೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡುವ ಎಲ್ಲರನ್ನು ಸಿ.ಟಿ ಸ್ಕ್ಯಾನಿಂಗ್ ಗೆ ಒಳಪಡಿಸುವುದು ನಿಷೇಧ. ಕೋವಿಡ್ ಪಾಸಿಟಿವ್ ಬಂದವರನ್ನ ಮಾತ್ರ ಸಿ.ಟಿ ಸ್ಕ್ಯಾನಿಂಗ್ ಗೆ ಒಳಪಡಿಸಬಹುದು.
  • ಇಂದಿನಿಂದ ಪ್ರತಿ ನಿತ್ಯ 5 ಸಾವಿರ ಕೋವಿಡ್ ಟೆಸ್ಟಿಂಗ್, ವೆಂಟಿಲೇಟರ್, ಆಕ್ಸಿಜನ್ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ. ನಾಲ್ಕು ಮೊಬೈಲ್ ಆಕ್ಸಿಜನ್ ಕಂಟೆಂಡರ್‌ ಖರೀದಿಗೆ ಸಭೆಯಲ್ಲಿ ತೀರ್ಮಾನ.

The number of covid infected people in the state is increasing day by day. In this background, Health Minister Dinesh Gundu Rao has instructed the health officials to visit the homes of the Covid-infected patients and take extra care. A cabinet sub-committee meeting was held today at Vidhan Soudha, Bangalore under the chairmanship of Minister Dinesh Gundurao regarding the measures to control Covid in the state. – ಅಂತರ್ಜಾಲ ಮಾಹಿತಿ

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೋವಿ ಠೇವಣಾತಿ | ಕೃಷಿ ರಕ್ಷಣೆಗಾಗಿ ಕೋವಿ ಹಿಂಪಡೆಯಲು ಆದೇಶ |
April 29, 2024
6:36 PM
by: ದ ರೂರಲ್ ಮಿರರ್.ಕಾಂ
ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ : ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ
April 29, 2024
5:50 PM
by: The Rural Mirror ಸುದ್ದಿಜಾಲ
ನಿಮಗಿದು ಗೊತ್ತೇ? : ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ… : ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ!
April 29, 2024
3:30 PM
by: The Rural Mirror ಸುದ್ದಿಜಾಲ
ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ : ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ
April 29, 2024
2:51 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror