ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್(Covid) ಸೋಂಕಿತರ ಸಂಖ್ಯ ಏರುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಕೋವಿಡ್ ಸೋಂಕಿತರ ಮನೆಗಳಿಗೆ ಸರ್ಕಾರಿ ವೈದ್ಯರು(Govt Doctors) ಭೇಟಿ ನೀಡಿ ಹೆಚ್ಚಿನ ನಿಗಾ ವಹಿಸುವಂತೆ ಆರೋಗ್ಯ ಸಚಿವ(Health Minister) ದಿನೇಶ್ ಗುಂಡೂರಾವ್ (Dinesh Gundu Rao) ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ನಿಟ್ಟಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ(Bengaluru) ವಿಧಾನ ಸೌಧದಲ್ಲಿ(Vidhana Soudha) ಸಂಪುಟ ಉಪಸಮಿತಿ ಸಭೆ ನಡೆಯಿತು.
ರಾಜ್ಯದಲ್ಲಿ ಜೆ.ಎನ್.1 ಉಪತಳಿ, ಹಾಗೂ ಕೋವಿಡ್ ಸೋಂಕಿನ ಕುರಿತು ವಿಸ್ತೃತವಾಗಿ ಸಭೆಯಲ್ಲಿ ಚರ್ಚೆ ನಡೆಸಿದ ಸಂಪುಟ ಉಪಸಮಿತಿ, ಕೋವಿಡ್ ನಿಯಂತ್ರಣ ವಿಚಾರದಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿತು. ಹೊಸ ವರ್ಷಾಚರಣೆಗೆ ಸದ್ಯಕ್ಕೆ ನಿರ್ಬಂಧ ಹೇರುವುದು ಬೇಡ ಎಂಬ ನಿರ್ಧಾರವನ್ನ ಸಭೆಯಲ್ಲಿ ತೆಗೆದುಕೊಳ್ಳಲಾಯಿತು. ಆದರೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ, ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ಜನರು ಮಾಸ್ಕ್ ಹಾಕಿಕೊಳ್ಳುವಂತೆ ಸಲಹೆ ನೀಡಲು ನಿರ್ಧರಿಸಲಾಯಿತು.
ಕಾಯಿಲೆ ಹೊಂದಿದವರು ಮುನ್ನೆಚ್ಚರಿಕೆ ಕ್ರಮವಾಗಿ ವ್ಯಾಕ್ಸಿನ್ ತೆಗೆದುಕೊಳ್ಳಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸದ್ಯಕ್ಕೆ 30 ಸಾವಿರ ವ್ಯಾಕ್ಸಿನ್‌ಗಳನ್ನು (Vaccine) ಕೇಂದ್ರ ಸರ್ಕಾರದಿಂದ ಪಡೆದು ರಾಜ್ಯದ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಿಗೆ ವಿತರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಸಂಪುಟ ಉಪಸಮಿತಿ ಸಭೆಯ ಹೈಲೆಟ್ಸ್:
The number of covid infected people in the state is increasing day by day. In this background, Health Minister Dinesh Gundu Rao has instructed the health officials to visit the homes of the Covid-infected patients and take extra care. A cabinet sub-committee meeting was held today at Vidhan Soudha, Bangalore under the chairmanship of Minister Dinesh Gundurao regarding the measures to control Covid in the state. – ಅಂತರ್ಜಾಲ ಮಾಹಿತಿ
ಹಕ್ಕಿಗಳಿಗೆ ಗೂಡುಕಟ್ಟುವ ಮೂಲಕ ಪರಿಸರ ಸಂರಕ್ಷಣೆಗೆ ಪಣತೊಟ್ಟಿರುವ ದಂಪತಿಗಳು ಬಂಟ್ವಾಳ ತಾಲೂಕಿನಲ್ಲಿದ್ದಾರೆ. ಇವರ…
ಜಾಗತಿಕ ಮಟ್ಟದಲ್ಲಿ ಅಡಿಕೆ ಬೆಳೆಯ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ಭಾರತ ಮೊದಲನೇ ಸ್ಥಾನದಲ್ಲಿದೆ.ಇನ್ನು…
ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ ರಾಜ್ಯ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ಕೃಷಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದರ್ಶಿತ್ ಕೆ ಎಸ್, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್, ಬೆಳ್ಳಾರೆದರ್ಶಿತ್…
ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…