ದ.ಕ.ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನದ ಆಶ್ರಯದಲ್ಲಿ ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮಕ್ಕೆ ಸುಳ್ಯ ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಇಂದು ಮುಂಜಾನೆ ಚಾಲನೆ ನೀಡಲಾಯಿತು.
Advertisement
ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ವೈದ್ಯಕೀಯ ನಿರ್ದೇಶಕರಾದ ಡಾ| ಕೆ.ವಿ.ಚಿದಾನಂದರವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮೆಡಿಕಲ್ ಕಾಲೇಜಿನ ಡೀನ್ ಡಾ.ನೀಲಾಂಬಿಕೈ ನಟರಾಜನ್, ಕೆ.ವಿ.ಜಿ. ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ಲೀಲಾಧರ್, ಸಮುದಾಯ ಆರೋಗ್ಯ ವಿಭಾಗದ ಪ್ರಾಧ್ಯಾಪಕ ಡಾ.ನಾರಾಯಣ ಹೊಳ್ಳ, ಸಹಪ್ರಾಧ್ಯಾಪಕಿ ಡಾ.ಅಪೂರ್ವ ದೊರೆ, ಕೆ.ವಿ.ಜಿ. ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಪ್ರೀಮ ಹಾಗೂ ಚಂದ್ರಾವತಿ, ಡಾ.ಕವಿತ, ಧನಂಜಯ ಮದುವೆಗದ್ದೆ, ವಿನಯ, ದೀಕ್ಷಿತ್, ಕೌಸಲ್ಯ, ಪ್ರೇಮಜ, ರಜತ್ ಅಡ್ಕಾರ್, ಹೇಮಂತ್ ಎ.ಎ. ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
Advertisement
ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕ ಡಾ.ಸನತ್ ರವರು ಪ್ರಥಮವಾಗಿ ಕೋವಿಡ್ ಲಸಿಕೆ ಪಡೆದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement