ಚೀನಾ ಸೇರಿದಂತೆ 6 ದೇಶಗಳಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ವಿಧಿಸಿದ್ದ ಕೊರೊನಾ ನಿಯಮವನ್ನು ಕೇಂದ್ರ ಆರೋಗ್ಯ ಸಚಿವಾಲಯ ಪರಿಷ್ಕರಿಸಿದ್ದು, ಈ ದೇಶಗಳ ಮೂಲದ ಪ್ರಜೆಗಳು ಯಾವುದೇ ದೇಶಗಳಿಂದ ಭಾರತಕ್ಕೆ ಪ್ರಯಾಣ ಬೆಳೆಸಿದರೂ ಅವರು ಕೊರೊನಾ ನೆಗೆಟಿವ್ ರಿಪೋರ್ಟ್ ಹೊಂದಿರುವುದನ್ನು ಕಡ್ಡಾಯಗೊಳಿಸಿದೆ.
Advertisement
ವಿದೇಶಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಚೀನಾ, ಸಿಂಗಾಪುರ, ಹಾಂಕಾಂಗ್, ಕೊರಿಯಾ ಗಣರಾಜ್ಯ, ಥಾಯ್ಲೆಂಡ್ ಹಾಗೂ ಜಪಾನ್‌ನಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ನೆಗೆಟಿವ್ ರಿಪೋರ್ಟ್ ಹೊಂದುವುದನ್ನು ಕಡ್ಡಾಯಗೊಳಿಸಲಾಗಿತ್ತು. ಆದರೆ ಈ ದೇಶಗಳ ಮೂಲದ ಪ್ರಜೆಗಳು ಬೇರೆ ದೇಶಗಳ ಮೂಲಕ ಭಾರತಕ್ಕೆ ಪ್ರಯಾಣಿಸಬಹುದಾದ ಸಾಧ್ಯತೆಗಳನ್ನು ಪರಿಗಣಿಸಿ, ನಿಯಮವನ್ನು ಪರಿಷ್ಕರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement