ಕೋವಿಡ್ ಸಂದರ್ಭ ಜನಪರ ಸೇವೆ ಸಲ್ಲಿಸಿದ ಮಹಿಳೆಯರಿಂದ ಅರ್ಜಿ ಆಹ್ವಾನ

September 22, 2020
7:18 AM

 “ಮಗಳನ್ನು ಉಳಿಸಿ, ಮಗಳನ್ನು ಓದಿಸಿ” ಕಾರ್ಯಕ್ರಮದಡಿ ಸ್ಥಳೀಯ ಚಾಂಪಿಯನ್‍ಗಳನ್ನು ಗುರುತಿಸಲಾಗುತ್ತದೆ. ಕೋವಿಡ್-19 ಸಮಯದಲ್ಲಿ ಸ್ವ-ಪ್ರೇರಣೆಯಿಂದ ಉತ್ತಮ ಜನಪರ ಕಾರ್ಯ ನಿರ್ವಹಿಸಿದ ಮಹಿಳೆ ಅಥವಾ ಹೆಣ್ಣು ಮಕ್ಕಳನ್ನು ಸ್ಥಳೀಯ ಚಾಂಪಿಯನ್ ಆಗಿ ಆಯ್ಕೆ ಮಾಡಲಾಗುತ್ತದೆ.
ಕೋವಿಡ್-19 ಸಮಯದಲ್ಲಿ ಬಾಲ್ಯ ವಿವಾಹ ತಡೆಗಟ್ಟಿ ಎಫ್.ಐ.ಆರ್ ದಾಖಲಿಸಿ, ಮನೆ-ಮನೆಗೆ ಉಚಿತವಾಗಿ  ಆಹಾರ ವಿತರಣೆ, ಮಾಸ್ಕ್ ತಯಾರಿಸಿ ಉಚಿತವಾಗಿ ವಿತರಣೆ ಮತ್ತು ಕೋವಿಡ್‍ನಿಂದ ಮಹಿಳೆಯರು ಮತ್ತು ಮಕ್ಕಳ ರಕ್ಷಣೆ ಇತ್ಯಾದಿ ಕೆಲಸ-ಕಾರ್ಯವನ್ನು ನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆ, ಸ್ತ್ರೀಶಕ್ತಿ ಸದಸ್ಯರು ಸೇರಿದಂತೆ ಯಾವುದೇ ಮಹಿಳೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 25 ಕೊನೆಯ ದಿನ.
ಹೆಚ್ಚಿನ ವಿವರಗಳಿಗೆ ಹಾಗೂ ಅರ್ಜಿ ನಮೂನೆಗಾಗಿ ಸಂಬಂಧಿಸಿದ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಅಥವಾ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್, ಮಂಗಳೂರು ಈ ಕಚೇರಿ, ಹಾಗೂ  ದೂರವಾಣಿ ಸಂಖ್ಯೆ: 0824-2451254 ಸಂಪರ್ಕಿಸಲು  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!
October 8, 2026
1:15 PM
by: ಮಹೇಶ್ ಪುಚ್ಚಪ್ಪಾಡಿ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ
October 8, 2026
7:21 AM
by: ದ ರೂರಲ್ ಮಿರರ್.ಕಾಂ
ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ
October 7, 2026
11:35 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

You cannot copy content of this page - Copyright -The Rural Mirror