ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುವ ಹಿನ್ನಲೆಯಿಂದ ಕೇಂದ್ರ ಸರ್ಕಾರವೂ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಅದೇ ರೀತಿಯಲ್ಲಿ ವಿದೇಶದಿಂದ ಭಾರತಕ್ಕೆ ಬರುವ ಎಲ್ಲ ಪ್ರಯಾಣಿಕರಗೂ 7 ದಿನಗಳ ಕಾಲ ಹೋಂ ಕ್ವಾರಂಟೈನ್ ಅಗತ್ಯವೆಂದು ಕೇಂದ್ರ ಸರ್ಕಾರವು ನಿಯಮವನ್ನು ಜಾರಿಗೊಳಿಸಿದೆ.
ಕೇಂದ್ರ ಸರ್ಕಾರದ ಆದೇಶದಂತೆ 7 ದಿನಗಳ ಹೋಂ ಕ್ವಾರಂಟೈನ್ ಅವಧಿ ಮುಕ್ತಾಯಗೊಂಡ ನಂತರ ಮತ್ತೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಕೋವಿಡ್ ಪರೀಕ್ಷೆಯನ್ನು ಮಾಡಿಸಬೇಕೆಂದು ಆದೇಶಿಸಲಾಗಿದೆ. ವಿದೇಶದಿಂದ ಭಾರತಕ್ಕೆ ಬಂದ ಪ್ರಯಾಣಿಕರು ಕೋವಿಡ್ ಪಾಸಿಟಿವ್ ಎಂದು ಪರೀಕ್ಷೆಯಲ್ಲಿ ದೃಢಪಟ್ಟರೆ, ಅವರ ಮಾದರಿಯನ್ನು ಜಿನೋಮಿಕ್ ಸಿಕ್ವೇನ್ಸ್ ಪರೀಕ್ಷೆಗೆ ಕಳುಹಿಸುವಂತೆ ಸೂಚಿಸಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel