ಕೊರೋನಾ ಲಸಿಕೆಯ ಬಗ್ಗೆ ಅಮೇರಿಕಾದ ರೋಗ ನಿಯಂತ್ರಣ ತಡೆಗಟ್ಟುವಿಕೆ ಕೇಂದ್ರ (ಸಿಡಿಸಿ) ನಡೆಸಿದ ಫೆಡರಲ್ ಸ್ಟಡಿಯ ವರದಿಯ ಪ್ರಕಾರ ಕೊರೋನಾ ಲಸಿಕೆ ಹಾಕಿಸಿಕೊಂಡ ವಯಸ್ಕರಲ್ಲಿ ಆಸ್ಪತ್ರೆಗೆ ದಾಖಲಾಗುವ ಪ್ರಮಾಣವನ್ನು ತಗ್ಗಿಸಿದೆ ಎಂದು ಸಾಬೀತಾಗಿದೆ. ವಯಸ್ಕರಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದರೂ ಹಿರಿಯರನ್ನು ಆಸ್ಪತ್ರೆಗೆ ದಾಖಲಿಸುವ ಸಾಧ್ಯತೆ ಶೇ.94ರಷ್ಟು ಕಡಿಮೆ ಎನ್ನುವುದು ವರದಿಯಲ್ಲಿ ಕಂಡುಬಂದಿರುವ ಅಂಶ.
ಅಮೇರಿಕಾದ ರೋಗ ನಿಯಂತ್ರಣ ತಡೆಗಟ್ಟುವಿಕೆ ಕೇಂದ್ರ (ಸಿಡಿಸಿ) ನಡೆಸಿದ ಫೆಡರಲ್ ಸ್ಟಡಿ ಇದಾಗಿದ್ದು, ಕೊರೋನಾ ಲಸಿಕೆ ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅಲ್ಲದೇ, ಇದು ಸೋಂಕು ನಿರೋಧಕವಾಗಿಯೂ ಕಾರ್ಯನಿರ್ವಹಿಸುತ್ತದೆ. ಲಸಿಕೆಗಳ ಪರೀಕ್ಷೆಯ ವೇಳೆ ಇದು ದೃಢಪಟ್ಟಿದೆ ಎಂದು ವರದಿ ತಿಳಿಸಿದೆ.
ಸಿಡಿಸಿಯ ಅಧ್ಯಯನ ವರದಿ ಪ್ರಕಾರ, ಕೊರೋನಾ ಲಸಿಕೆಗಳು 65 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ವಯಸ್ಕರಲ್ಲಿ ಶೇಕಡಾ 94 ರಷ್ಟು ಪರಿಣಾಮಕಾರಿ, ಅವರು ಎರಡೂ ಡೋಸ್ ಪಡೆದಿದ್ದಾರೆ ಮತ್ತು ಎರಡನೇ ಡೋಸ್ ನಂತರ 14 ದಿನಗಳ ನಂತರವೂ ಪರಿಶೀಲನೆ ಮಾಡಲಾಗಿದೆ. ಜನವರಿಯಿಂದ ಮಾರ್ಚ್ ವರೆಗೆ 14 ರಾಜ್ಯಗಳಲ್ಲಿ 400 ಕ್ಕೂ ಹೆಚ್ಚು ಆಸ್ಪತ್ರೆಗೆ ದಾಖಲಾದ ವಯಸ್ಕರನ್ನು ಈ ಅಧ್ಯಯನ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ಪ್ರಕಾರ ಕೊರೋನಾದ ಎರಡು ಡೋಸ್‌ಗಳನ್ನು ಪಡೆದ 65 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯರಲ್ಲಿ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಶೇ.94ರಷ್ಟು ಕಡಿಮೆ ಕಂಡುಬಂದಿದ್ದು, ಒಂದು ಡೋಸ್ ಪಡೆದು ಕೊರೋನಾ ಸೋಂಕಿಗೆ ಒಳಗಾದವರ ಪೈಕಿ ಈ ಪ್ರಮಾಣ ಶೇ.64ರಷ್ಟು ಇರುತ್ತದೆ ಎಂದು ಉಲ್ಲೇಖಿಸಲಾಗಿದೆ.
ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…
ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…
ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…