ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ | ಸಚಿವ ದಿನೇಶ್ ಗುಂಡೂರಾವ್

July 7, 2025
9:25 PM

ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ ಸರ್ಕಾರಕ್ಕೆ ವರದಿ ನೀಡಿದ್ದು, ಕೋವಿಡ್ ಲಸಿಕೆಯಿಂದ ಹೃದಯಾಘಾತ ಪ್ರಕರಣಗಳು ಸಂಭವಿಸಿವೆ ಎನ್ನುವುದಕ್ಕೆ ಯಾವುದೇ ಆಧಾರ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನಲ್ಲಿ ಹೇಳಿದ್ದಾರೆ.

ಯುವಜನರೂ ಸೇರಿದಂತೆ ಹೃದಯಾಘಾತದಿಂದ ಹಠಾತ್ ಸಾವುಗಳು ಸಂಭವಿಸುತ್ತಿರುವುದರ ಕುರಿತು ಪರಿಣತರ ತಂಡ ಅಧ್ಯಯನ ನಡೆಸಿ ವರದಿ ನೀಡಿದೆ. ಹೃದಯಾಘಾತಕ್ಕೆ ಧೂಮಪಾನ, ಆಹಾರ ಹಾಗೂ ಜೀವನಶೈಲಿ, ಮಾಲಿನ್ಯ, ಆರೋಗ್ಯ ಸ್ಥಿತಿಗತಿ,  ಹೃದಯದ ಆರೋಗ್ಯ ಮೇಲೆ ಪ್ರಭಾವ ಬೀರಿವೆ ಎನ್ನುವ ಸಂಗತಿಯನ್ನು ತಿಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.  ಹಾಸನ ಜಿಲ್ಲೆಯಲ್ಲಿ ಉಳಿದ ಭಾಗಗಳಿಗಿಂತ ಹೆಚ್ಚಿನ ಹೃದಯಾಘಾತ ಪ್ರಕರಣಗಳು ದಾಖಲಾಗಿವೆ. ಈ ಬಗ್ಗೆ ಸರ್ಕಾರ ಕೆಲವು ನಿರ್ಣಯಗಳನ್ನು ಕೈಗೊಂಡಿದ್ದು, ಸಾರ್ವಜನಿಕರಿಗೆ ಹೃದಯದ ಆರೋಗ್ಯ ಸಂಬಂಧ ಅರಿವು ಮೂಡಿಸಲಾಗುವುದು. ಹಠಾತ್ ಸಾವುಗಳನ್ನು ಗುರುತಿಸಿ ಮರಣೋತ್ತರ ಪರೀಕ್ಷೆಗೆ ಕ್ರಮ ವಹಿಸಲಾಗುವುದು, 15 ವರ್ಷ ಒಳಪಟ್ಟ ಮಕ್ಕಳಿಗೆ ಹೃದಯ ತಪಾಸಣೆಗೆ ಒತ್ತು ನೀಡುವ ಜೊತೆಗೆ ಎಲ್ಲಾ ಖಾಸಗಿ ಸಂಸ್ಥೆಗಳು ವರ್ಷಕ್ಕೆ ಒಮ್ಮೆಯಾದರೂ ತಮ್ಮೆಲ್ಲ ಉದ್ಯೋಗಿಗಳಿಗೆ ಸಂಪೂರ್ಣ ಆರೋಗ್ಯ ತಪಾಸಣೆ ನಡೆಸಬೇಕು ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡಿನಲ್ಲಿ ಅಡಿಕೆ ಕಷ್ಟ…!, ಬಯಲುಸೀಮೆಯಲ್ಲಿ ಅಡಿಕೆ ಇಷ್ಟು ಸುಲಭವೇ? ಕಾರಣ ತಿಳಿದರೆ ಅಚ್ಚರಿಯಾಗುತ್ತೆ!
September 27, 2026
10:34 AM
by: ಪ್ರಬಂಧ ಅಂಬುತೀರ್ಥ
ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ – ಡಿ.ಕೆ.ಶಿವಕುಮಾರ್
September 27, 2026
8:12 AM
by: ದ ರೂರಲ್ ಮಿರರ್.ಕಾಂ
ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು
September 26, 2026
7:36 PM
by: ದ ರೂರಲ್ ಮಿರರ್.ಕಾಂ
ಕುಟುಂಬದ ಸೌಂದರ್ಯ ವೈಭವದಲ್ಲಲ್ಲ, ಸೌಹಾರ್ದತೆಯಲ್ಲಿ: ಸಂಬಂಧ ಉಳಿಸುವುದೇ ನಿಜವಾದ ಗೆಲುವು
September 26, 2026
7:21 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror