ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ ಸರ್ಕಾರಕ್ಕೆ ವರದಿ ನೀಡಿದ್ದು, ಕೋವಿಡ್ ಲಸಿಕೆಯಿಂದ ಹೃದಯಾಘಾತ ಪ್ರಕರಣಗಳು ಸಂಭವಿಸಿವೆ ಎನ್ನುವುದಕ್ಕೆ ಯಾವುದೇ ಆಧಾರ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನಲ್ಲಿ ಹೇಳಿದ್ದಾರೆ.
ಯುವಜನರೂ ಸೇರಿದಂತೆ ಹೃದಯಾಘಾತದಿಂದ ಹಠಾತ್ ಸಾವುಗಳು ಸಂಭವಿಸುತ್ತಿರುವುದರ ಕುರಿತು ಪರಿಣತರ ತಂಡ ಅಧ್ಯಯನ ನಡೆಸಿ ವರದಿ ನೀಡಿದೆ. ಹೃದಯಾಘಾತಕ್ಕೆ ಧೂಮಪಾನ, ಆಹಾರ ಹಾಗೂ ಜೀವನಶೈಲಿ, ಮಾಲಿನ್ಯ, ಆರೋಗ್ಯ ಸ್ಥಿತಿಗತಿ, ಹೃದಯದ ಆರೋಗ್ಯ ಮೇಲೆ ಪ್ರಭಾವ ಬೀರಿವೆ ಎನ್ನುವ ಸಂಗತಿಯನ್ನು ತಿಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಉಳಿದ ಭಾಗಗಳಿಗಿಂತ ಹೆಚ್ಚಿನ ಹೃದಯಾಘಾತ ಪ್ರಕರಣಗಳು ದಾಖಲಾಗಿವೆ. ಈ ಬಗ್ಗೆ ಸರ್ಕಾರ ಕೆಲವು ನಿರ್ಣಯಗಳನ್ನು ಕೈಗೊಂಡಿದ್ದು, ಸಾರ್ವಜನಿಕರಿಗೆ ಹೃದಯದ ಆರೋಗ್ಯ ಸಂಬಂಧ ಅರಿವು ಮೂಡಿಸಲಾಗುವುದು. ಹಠಾತ್ ಸಾವುಗಳನ್ನು ಗುರುತಿಸಿ ಮರಣೋತ್ತರ ಪರೀಕ್ಷೆಗೆ ಕ್ರಮ ವಹಿಸಲಾಗುವುದು, 15 ವರ್ಷ ಒಳಪಟ್ಟ ಮಕ್ಕಳಿಗೆ ಹೃದಯ ತಪಾಸಣೆಗೆ ಒತ್ತು ನೀಡುವ ಜೊತೆಗೆ ಎಲ್ಲಾ ಖಾಸಗಿ ಸಂಸ್ಥೆಗಳು ವರ್ಷಕ್ಕೆ ಒಮ್ಮೆಯಾದರೂ ತಮ್ಮೆಲ್ಲ ಉದ್ಯೋಗಿಗಳಿಗೆ ಸಂಪೂರ್ಣ ಆರೋಗ್ಯ ತಪಾಸಣೆ ನಡೆಸಬೇಕು ಎಂದು ತಿಳಿಸಿದ್ದಾರೆ.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…