ಕೋವಿಡ್ ಸುದ್ದಿ  | ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

May 26, 2025
11:21 PM
ಕೊರೋನಾಕ್ಕೆ ಸದ್ಯ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ದಪಡಿಸಿಟ್ಟುಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಕೋವಿಡ್ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ಆರೋಗ್ಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಕಾವೇರಿ ನಿವಾಸದಲ್ಲಿ ಸಭೆ ನಡೆಸಿದರು.  ಸಭೆಯಲ್ಲಿ ಅಧಿಕಾರಿಗಳು, ತಜ್ಞರು ಮತ್ತು ಸಚಿವರುಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು  ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.  ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ದಪಡಿಸಿಟ್ಟುಕೊಳ್ಳಿ ಎಂದು ಸೂಚಿಸಿದ್ದಾರೆ.

ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು  ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದ್ದಾರೆ.  ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸಬಾರದು. ಶಾಲೆಗಳೂ ಈ ಬಗ್ಗೆ ಗಮನ ಹರಿಸಿ ಶೀತ, ನೆಗಡಿ ಇರುವ ಮಕ್ಕಳನ್ನು ಪೋಷಕರ ಮೂಲಕ ಮನೆಗೆ ಕಳುಹಿಸಬೇಕು ಎಂದು ಸಲಹೆ ನೀಡಿದ್ದಾರೆ.  ಎಂತಹುದೇ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧವಾಗಿರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror