ಕೋವಿಡ್ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ಆರೋಗ್ಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಅಧಿಕಾರಿಗಳು, ತಜ್ಞರು ಮತ್ತು ಸಚಿವರುಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ದಪಡಿಸಿಟ್ಟುಕೊಳ್ಳಿ ಎಂದು ಸೂಚಿಸಿದ್ದಾರೆ.
ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದ್ದಾರೆ. ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸಬಾರದು. ಶಾಲೆಗಳೂ ಈ ಬಗ್ಗೆ ಗಮನ ಹರಿಸಿ ಶೀತ, ನೆಗಡಿ ಇರುವ ಮಕ್ಕಳನ್ನು ಪೋಷಕರ ಮೂಲಕ ಮನೆಗೆ ಕಳುಹಿಸಬೇಕು ಎಂದು ಸಲಹೆ ನೀಡಿದ್ದಾರೆ. ಎಂತಹುದೇ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧವಾಗಿರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್‌ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…