ಕೋವಿಡ್ ಸೋಂಕಿನಲ್ಲಿ ಏರಿಕೆ | ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕೇಂದ್ರಗಳಲ್ಲಿ ಅಣಕು ಪ್ರದರ್ಶನ | ಆರೋಗ್ಯ ಇಲಾಖೆ

April 10, 2023
2:16 PM

ಕರ್ನಾಟಕ ರಾಜ್ಯ ಸೇರಿದಂತೆ ದೇಶಾದ್ಯಂತ ಕೊರೊನಾ ಸೋಂಕಿನ ಹಾವಳಿ ಬೇಸಿಗೆಯಲ್ಲಿ ಮತ್ತೆ  ಹೆಚ್ಚಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲೂ ಕೋವಿಡ್ ಸೋಂಕು ಹೆಚ್ಚುತ್ತಿದ್ದು,ಎರಡು ದಿನ  ಅಣಕು ಪ್ರದರ್ಶನ ನಡೆಸಲು ಆರೋಗ್ಯ ಇಲಾಖೆ ಮುಂದಾಗಿದೆ.

Advertisement
Advertisement
Advertisement

ಸಂಭವನೀಯ ಅಪಾಯವನ್ನು ಎದುರಿಸಲು ಕರ್ನಾಟಕದಲ್ಲಿ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸೌಲಭ್ಯಗಳ ಮೂಲಕ ರಾಜ್ಯದ ಸನ್ನದ್ಧತೆಯನ್ನು ತಿಳಿಯಲು ಇಂದು ಏಪ್ರಿಲ್ 10 ಮತ್ತು ನಾಳೆ ಏಪ್ರಿಲ್ 11 ರಂದು ಆರೋಗ್ಯ ಇಲಾಖೆ ಅಣಕು ಕಾರ್ಯಾಚರಣೆ ಹಮ್ಮಿಕೊಂಡಿದೆ.

Advertisement

ಕೊರೊನಾ ಪಾಸಿಟಿವ್ ಪ್ರಕರಣಗಳ ಹೆಚ್ಚಳವನ್ನು ಎದುರಿಸಲು ಆರೋಗ್ಯ ಸೌಲಭ್ಯಗಳ ಕಾರ್ಯಾಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಈ ಸಂಬಂಧ ಅಣಕು ಪ್ರದರ್ಶನ ನಡೆಯಲಿದೆ ಎಂದು ಇಲಾಖೆ ತಿಳಿಸಿದೆ. ಆಸ್ಪತ್ರೆಗಳಲ್ಲಿನ ಮೂಲಸೌಕರ್ಯ ಖಚಿತತೆಗಾಗಿ ಕಾರ್ಯಕ್ರಮ ಸರ್ಕಾರಿ ಆಸ್ಪತ್ರೆಗಳಲ್ಲಿ ಅಷ್ಟೇ ಅಲ್ಲದೆ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳು, ಆರೋಗ್ಯ ಸಿಬ್ಬಂದಿ (ಮಾನವಶಕ್ತಿ), ಆಂಬ್ಯುಲೆನ್ಸ್‌ಗಳು, ಅಗತ್ಯ ಔಷಧಗಳು, ಮಾಸ್ಕ್‌ಗಳು, ಪಿಪಿಇ ಕಿಟ್‌ಗಳು, ಟೆಲಿಮೆಡಿಸಿನ್ ಸೇವೆಗಳು ಮತ್ತು ಆಮ್ಲಜನಕ ಸಿಲಿಂಡರ್‌ಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವ ಪ್ರಯತ್ನ ಇದಾಗಿದೆ.

ಏಪ್ರಿಲ್ 10 ಮತ್ತು 11 ರಂದು ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರವು ಕಡ್ಡಾಯಗೊಳಿಸಿದ ಅಣಕು ಡ್ರಿಲ್ ನ್ನು ನಮ್ಮ ರಾಜ್ಯದಲ್ಲೂ ಕೈಗೊಳ್ಳಲಾಗುತ್ತಿದೆ. ಈ ಮೂಲಕ ತುರ್ತು ಸಂದರ್ಭದಲ್ಲಿ, ಇಲ್ಲವೇ ದಿಢೀರ್ ಕೊರೊನಾ ಏರಿಕೆ ಆದರೂ ಕರ್ನಾಟಕ ಆರೋಗ್ಯ ಇಲಾಖೆ ಎದುರಿಸಲು ಸಿದ್ಧ ಎಂದು ತೋರ್ಪಡಿಸುತ್ತಿದೆ ಎಂದು ಸರ್ಕಾರದ ರಾಷ್ಟ್ರೀಯ ಆರೋಗ್ಯ ಮಿಷನ್‌ನ ನಿರ್ದೇಶಕ ನವೀನ್ ಭಟ್ ವೈ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 29.11.2024 | ರಾಜ್ಯದಲ್ಲಿ ಒಣಹವೆ | ಡಿಸೆಂಬರ್‌ ಮೊದಲ ವಾರ ಮಳೆ ಸಾಧ್ಯತೆ |
November 29, 2024
12:32 PM
by: ಸಾಯಿಶೇಖರ್ ಕರಿಕಳ
ಬೆಂಬಲ ಬೆಲೆಯಲ್ಲಿ ಭತ್ತ, ರಾಗಿ, ಜೋಳ ಮಾರಾಟಕ್ಕೆ ಶೀಘ್ರವೇ ರೈತರ ನೋಂದಣಿ ಕಾರ್ಯ 
November 28, 2024
11:11 PM
by: The Rural Mirror ಸುದ್ದಿಜಾಲ
ಡಿ.3 ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ | ರೈತರಿಗೆ ಮುನ್ನೆಚ್ಚರಿಕಾ ಸೂಚನೆ |
November 28, 2024
10:58 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ಮುಂದಿನ ಐದು ದಿನಗಳವರೆಗೆ ಶೀತಗಾಳಿ | ಹವಾಮಾನ ಇಲಾಖೆ ಮುನ್ಸೂಚನೆ
November 28, 2024
10:52 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror