ಕರ್ನಾಟಕ ರಾಜ್ಯ ಸೇರಿದಂತೆ ದೇಶಾದ್ಯಂತ ಕೊರೊನಾ ಸೋಂಕಿನ ಹಾವಳಿ ಬೇಸಿಗೆಯಲ್ಲಿ ಮತ್ತೆ ಹೆಚ್ಚಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲೂ ಕೋವಿಡ್ ಸೋಂಕು ಹೆಚ್ಚುತ್ತಿದ್ದು,ಎರಡು ದಿನ ಅಣಕು ಪ್ರದರ್ಶನ ನಡೆಸಲು ಆರೋಗ್ಯ ಇಲಾಖೆ ಮುಂದಾಗಿದೆ.
ಸಂಭವನೀಯ ಅಪಾಯವನ್ನು ಎದುರಿಸಲು ಕರ್ನಾಟಕದಲ್ಲಿ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸೌಲಭ್ಯಗಳ ಮೂಲಕ ರಾಜ್ಯದ ಸನ್ನದ್ಧತೆಯನ್ನು ತಿಳಿಯಲು ಇಂದು ಏಪ್ರಿಲ್ 10 ಮತ್ತು ನಾಳೆ ಏಪ್ರಿಲ್ 11 ರಂದು ಆರೋಗ್ಯ ಇಲಾಖೆ ಅಣಕು ಕಾರ್ಯಾಚರಣೆ ಹಮ್ಮಿಕೊಂಡಿದೆ.
ಕೊರೊನಾ ಪಾಸಿಟಿವ್ ಪ್ರಕರಣಗಳ ಹೆಚ್ಚಳವನ್ನು ಎದುರಿಸಲು ಆರೋಗ್ಯ ಸೌಲಭ್ಯಗಳ ಕಾರ್ಯಾಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಈ ಸಂಬಂಧ ಅಣಕು ಪ್ರದರ್ಶನ ನಡೆಯಲಿದೆ ಎಂದು ಇಲಾಖೆ ತಿಳಿಸಿದೆ. ಆಸ್ಪತ್ರೆಗಳಲ್ಲಿನ ಮೂಲಸೌಕರ್ಯ ಖಚಿತತೆಗಾಗಿ ಕಾರ್ಯಕ್ರಮ ಸರ್ಕಾರಿ ಆಸ್ಪತ್ರೆಗಳಲ್ಲಿ ಅಷ್ಟೇ ಅಲ್ಲದೆ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳು, ಆರೋಗ್ಯ ಸಿಬ್ಬಂದಿ (ಮಾನವಶಕ್ತಿ), ಆಂಬ್ಯುಲೆನ್ಸ್‌ಗಳು, ಅಗತ್ಯ ಔಷಧಗಳು, ಮಾಸ್ಕ್‌ಗಳು, ಪಿಪಿಇ ಕಿಟ್‌ಗಳು, ಟೆಲಿಮೆಡಿಸಿನ್ ಸೇವೆಗಳು ಮತ್ತು ಆಮ್ಲಜನಕ ಸಿಲಿಂಡರ್‌ಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವ ಪ್ರಯತ್ನ ಇದಾಗಿದೆ.
ಏಪ್ರಿಲ್ 10 ಮತ್ತು 11 ರಂದು ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರವು ಕಡ್ಡಾಯಗೊಳಿಸಿದ ಅಣಕು ಡ್ರಿಲ್ ನ್ನು ನಮ್ಮ ರಾಜ್ಯದಲ್ಲೂ ಕೈಗೊಳ್ಳಲಾಗುತ್ತಿದೆ. ಈ ಮೂಲಕ ತುರ್ತು ಸಂದರ್ಭದಲ್ಲಿ, ಇಲ್ಲವೇ ದಿಢೀರ್ ಕೊರೊನಾ ಏರಿಕೆ ಆದರೂ ಕರ್ನಾಟಕ ಆರೋಗ್ಯ ಇಲಾಖೆ ಎದುರಿಸಲು ಸಿದ್ಧ ಎಂದು ತೋರ್ಪಡಿಸುತ್ತಿದೆ ಎಂದು ಸರ್ಕಾರದ ರಾಷ್ಟ್ರೀಯ ಆರೋಗ್ಯ ಮಿಷನ್‌ನ ನಿರ್ದೇಶಕ ನವೀನ್ ಭಟ್ ವೈ ತಿಳಿಸಿದ್ದಾರೆ.
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…