ಜಾನುವಾರುಗಳಲ್ಲಿ ಬ್ರೂಸೆಲ್ಲೋಸಿಸ್ ಅಂದರೆ ಕಂದು ರೋಗವು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಈ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ 4ರಿಂದ 8 ತಿಂಗಳ ಒಳಗಿನ ಹೆಣ್ಣು ಕರುಗಳಿಗೆ ಬ್ರೂಸೆಲ್ಲಾ ವ್ಯಾಕ್ಸಿನ್ ಎಂಬ ಲಸಿಕೆ ಅಭಿಯಾನವನ್ನು ಮೇ 15ರಿಂದ 31ರ ವರೆಗೆ ಹಮ್ಮಿಕೊಳ್ಳಲಾಗಿದೆ. ದ.ಕ. ಜಿಲ್ಲೆಯಲ್ಲಿ ಬಂಟ್ವಾಳ ತಾಲೂಕಿನಲ್ಲಿ ಅತ್ಯಧಿಕ 1,480 ಕರುಗಳಿಗೆ ಲಸಿಕೆ ಹಾಕಲಾಗಿದೆ. ದ.ಕ.ದಲ್ಲಿ 5,234 ಮತ್ತು ಉಡುಪಿ ಜಿಲ್ಲೆಯಲ್ಲಿ 7,716 ಕರುಗಳಿಗೆ ಲಸಿಕೆ ಹಾಕಲಾಗಿದೆ.ಇನ್ನು ಉಳಿದಿರುವ ಹಸುಗಳಿಗೆ ಮುಂದಿನ ದಿನಗಳಲ್ಲಿ ನೀಡಲಾಗುವುದು ಎಂದು ಪಶುಸಂಗೋಪನ ಇಲಾಖೆ ಉಪನಿರ್ದೇಶಕ ಡಾ| ಅರುಣ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement