ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು ರೋಗ ದನ ಮತ್ತು ಎಮ್ಮೆಗಳಲ್ಲಿ ಕಂಡುಬರುವ ವೈರಸ್ ಖಾಯಿಲೆಯಾಗಿದ್ದು, ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ.
ಈ ರೋಗದಿಂದ ಜಾನುವಾರು ಮಾಲೀಕರುಗಳಿಗೆ ಆರ್ಥಿಕ ನಷ್ಟವುಂಟಾಗುವುದನ್ನು ಗಮನದಲ್ಲಿರಿಸಿಕೊಂಡು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ಜಾನುವಾರು ಸಾಗಾಟ ನಿಷೇಧವನ್ನು ಡಿಸೆಂಬರ್ 31ರವರೆಗೆ ವಿಸ್ತರಿಸಿ ಜಿಲ್ಲೆಯೊಳಗೆ ಮತ್ತು ಹೊರ ಜಿಲ್ಲೆ ಅಥವಾ ನೆರೆ ರಾಜ್ಯದಿಂದ ಜಿಲ್ಲೆಗೆ ಜಾನುವಾರುಗಳ ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಆದೇಶಿಸಿದ್ದಾರೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೊಣ, ಸೊಳ್ಳೆಗಳ ನಿಯಂತ್ರಣಕ್ಕಾಗಿ ಫಾಂಗಿಗ್ ಮಾಡುವಂತೆ ಅವರು ಸಂಬಂಧಿಸಿದವರಿಗೆ ಸೂಚಿಸಿದ್ದಾರೆ.

ಮಿರರ್ ಡೆಸ್ಕ್ – ಮಿರರ್ ನ್ಯೂಸ್ ನೆಟ್ವರ್ಕ್
Be the first to comment on "ಜಾನುವಾರುಗಳ ಸಾಗಾಟ ನಿಷೇಧ ಅವಧಿ ವಿಸ್ತರಣೆ"