ಚರ್ಮಗಂಟು ರೋಗ | ದ ಕ ಜಿಲ್ಲೆಯಲ್ಲಿ 3,414 ಜಾನುವಾರುಗಳು ಬಲಿ | ಜಾನುವಾರುಗಳ ಸಾಗಾಟಕ್ಕೆ ನಿಷೇಧ

December 29, 2022
8:33 PM

 ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ 289 ಗ್ರಾಮಗಳಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಂಡು ಬಂದಿರುತ್ತದೆ. ಈವರೆಗೆ 3,414 ಜಾನುವಾರುಗಳು ರೋಗಕ್ಕೆ ತುತ್ತಾಗಿದ್ದು, 64 ಜಾನುವಾರುಗಳು ಮರಣ ಹೊಂದಿರುತ್ತದೆ. ಈ ರೋಗವು ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು (ಲುಂಪಿ ಸ್ಕಿನ್ ಡಿಸೀಸ್) ರೋಗ ದನ ಮತ್ತು ಎಮ್ಮೆಗಳಲ್ಲಿ ಕಂಡುಬರುವ ವೈರಸ್ ಖಾಯಿಲೆಯಾಗಿದ್ದು, ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ.

ಜಾನುವಾರುಗಳನ್ನು ಒಂದೆಡೆಯಿಂದ ಇನ್ನೊಂದೆಡೆ ಸಾಗಾಣಿಕೆ ಮಾಡುವುದರಿಂದ ರೋಗ ಹರಡುವ ಸಾಧ್ಯತೆ ಇರುವುದರಿಂದ ಈ ರೋಗದ ನಿಯಂತ್ರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ಜಿಲ್ಲೆಯೊಳಗೆ ಮತ್ತು ಹೊರ ಜಿಲ್ಲೆ ಅಥವಾ ನೆರೆ ರಾಜ್ಯದಿಂದ ಜಿಲ್ಲೆಗೆ ಜಾನುವಾರುಗಳ ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಆದೇಶಿಸಿದ್ದಾರೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹೊಸರುಚಿ | ಗುಜ್ಜೆ ಶೇಂಗಾ ಪಲ್ಯ
March 15, 2025
7:00 AM
by: ದಿವ್ಯ ಮಹೇಶ್
ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |
March 14, 2025
11:36 PM
by: ದ ರೂರಲ್ ಮಿರರ್.ಕಾಂ
ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ
March 14, 2025
11:03 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ
March 14, 2025
10:57 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror