ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು ರೋಗ ದನ ಮತ್ತು ಎಮ್ಮೆಗಳಲ್ಲಿ ಕಂಡುಬರುವ ವೈರಸ್ ಖಾಯಿಲೆಯಾಗಿದ್ದು, ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಜಾನುವಾರುಗಳ ಸಾಗಾಟವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ.
ಈ ರೋಗದಿಂದ ಜಾನುವಾರು ಮಾಲೀಕರುಗಳಿಗೆ ಆರ್ಥಿಕ ನಷ್ಟವುಂಟಾಗುವುದನ್ನು ಗಮನದಲ್ಲಿರಿಸಿಕೊಂಡು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಅ.20 ರಿಂದ ನವೆಂಬರ್ 30ರವರೆಗೆ ಜಿಲ್ಲೆಯೊಳಗೆ ಮತ್ತು ಹೊರ ಜಿಲ್ಲೆ ಅಥವಾ ನೆರೆ ರಾಜ್ಯದಿಂದ ಜಿಲ್ಲೆಗೆ ಜಾನುವಾರುಗಳ ಸಾಗಾಟವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ. ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೊಣ, ಸೊಳ್ಳೆಗಳ ನಿಯಂತ್ರಣಕ್ಕಾಗಿ ಫಾಂಗಿಗ್ ಮಾಡುವಂತೆ ಅವರು ಸಂಬಂಧಿಸಿದವರಿಗೆ ಸೂಚಿಸಿರುತ್ತಾರೆ.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…