ದಕ ಜಿಲ್ಲೆಯಲ್ಲಿ ಸುಡು ಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆ- ಅರ್ಜಿ ಆಹ್ವಾನ

October 6, 2023
6:38 PM
ನವೆಂಬರ್ 11ರಿಂದ ನ.14ರ ವರೆಗೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮತ್ತು ನವೆಂಬರ್ 24ರಂದು ತುಳಸಿ ಪೂಜೆ ಹಬ್ಬದ ಸಂದರ್ಭದಲ್ಲಿ ಸುಡು ಮದ್ದು ಮತ್ತು ಮಾರಾಟದ ತಾತ್ಕಾಲಿಕ ಪರವಾನಿಗೆ ಪಡೆಯಲು ಅವಕಾಶವಿರುತ್ತದೆ.

ಹಬ್ಬಗಳ ನಿಮಿತ್ತ ಸುಡುಮದ್ದು ಮಾರಾಟದ ಸ್ಪೋಟಕ ಕಾಯ್ದೆ ಮತ್ತು ನಿಯಮದಡಿ ಮೈದಾನದಲ್ಲಿ, ತೆರೆದ ಪ್ರದೇಶಗಳಲ್ಲಿ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆ ನೀಡುವ ಬಗ್ಗೆ ಮಂಗಳೂರು ನಗರ  ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ಆಸಕ್ತ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಬಹುದು.

Advertisement

ನವೆಂಬರ್ 11ರಿಂದ ನ.14ರ ವರೆಗೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮತ್ತು ನವೆಂಬರ್ 24ರಂದು ತುಳಸಿ ಪೂಜೆ ಹಬ್ಬದ ಸಂದರ್ಭದಲ್ಲಿ ಸುಡು ಮದ್ದು ಮತ್ತು ಮಾರಾಟದ ತಾತ್ಕಾಲಿಕ ಪರವಾನಿಗೆ ಪಡೆಯಲು ಅವಕಾಶವಿರುತ್ತದೆ.

ನವೆಂಬರ್ 6ರೊಳಗೆ ಅರ್ಜಿ ಸಲ್ಲಿಸಬಹುದಾಗಿದ್ದು, ನಂತರ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ. ನಿಗದಿತ ನಮೂನೆ ಮುಂದೆ ನಮೂನೆ-5ರಲ್ಲಿ ಅರ್ಜಿ ಸಲ್ಲಿಸಬೇಕಾಗಿದ್ದು, ಅರ್ಜಿಯೊಂದಿಗೆ ತಾತ್ಕಾಲಿಕ ಅಂಗಡಿ ತೆರೆಯಲು ಉದ್ದೇಶಿಸಿರುವ ಸ್ಥಳದ ನೀಲಿ ನಕ್ಷೆ, ಅರ್ಜಿದಾರರ ಭಾವಚಿತ್ರ, ಪ್ರಾಸ್ತಾವಿತ ಜಮೀನಿನ ಪಹಣಿ ಸರ್ಕಾರಿ ಜಮೀನು ಅಲ್ಲದೆ ಇದ್ದಲ್ಲಿ ಜಮೀನಿನ ಮಾಲಕರ ಒಪ್ಪಿಗೆ ಪತ್ರ (20ರೂ.ಗಳ ಸ್ಟ್ಯಾಂಪ್ ಪೇಪರ್‍ನೊಂದಿಗೆ) ಹಾಗೂ ಸರ್ಕಾರಿ ಜಾಗವಿದ್ದಲ್ಲಿ ಜಮೀನು ಯಾವ ಇಲಾಖೆಯ ಸುಪರ್ದಿಯಲ್ಲಿದೆಯೋ ಆ ಇಲಾಖೆಯ ನಿರಾಕ್ಷೇಪಣಾ ಪತ್ರವನ್ನು ಸಲ್ಲಿಸಲು ತಿಳಿಸಿದೆ.

ಅರ್ಜಿ ಸಲ್ಲಿಸುವಾಗ 200 ರೂ.ಗಳ ಪರಿಶೀಲನಾ ಶುಲ್ಕ ಹಾಗೂ ಪರವಾನಿಗೆ ಮಂಜೂರು ಮಾಡುವ ಸಂದರ್ಭದಲ್ಲಿ 500 ರೂ.ಗಳ ಪರವಾನಿಗೆ ಶುಲ್ಕವನ್ನು ಪಾವತಿಸಬೇಕು. ಅರ್ಜಿದಾರರು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾ ಅಗ್ನಿಶಾಮಕ ಇಲಾಖೆಯ ನಿರಾಕ್ಷೇಪಣ ಪತ್ರ, ಪೊಲೀಸ್ ಅಧೀಕ್ಷಕರ ನಿರಾಪೇಕ್ಷಾಣಾ ಪತ್ರ, ಸಂಬಂಧಪಟ್ಟ ತಹಶೀಲ್ದಾರರ ನಿರಾಕ್ಷೇಪನ ಪತ್ರ ಹಾಗೂ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ನಿರಾಕ್ಷಾಪಣಾ ಪತ್ರ ಸಲ್ಲಿಸಬೇಕು. ಹಸಿರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶವಿರುತ್ತದೆ.

ಸಂಬಂಧಪಟ್ಟ ಇಲಾಖೆಗಳಿಂದ ನಿರಕ್ಷೇಪಣಾ ಪತ್ರ ಬಂದಲ್ಲಿ ಸ್ಪೋಟಕ ಕಾಯ್ದೆ ನಿಯಮಾವಳಿಗಳಿಗೆ ಒಳಪಟ್ಟು ಮತ್ತು ಕೋವಿಡ್-19 ಸರ್ಕಾರಿ ಮಾರ್ಗ ಸೂಚಿಗಳನ್ನು ಪಾಲಿಸುವ ಷರತ್ತುಗೆ ಒಳಪಟ್ಟು ಕಚೇರಿಯಿಂದ ಪರವಾನಿಗೆ ಮಂಜೂರು ಮಾಡಲಾಗುವುದು. ನವೆಂಬರ್ 6ರ ನಂತರ ಬಂದ ಅರ್ಜಿಗಳನ್ನು ಹಾಗೂ ಅಪೂರ್ಣವಾದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಏಪ್ರಿಲ್ 2 ಕೆಲವು ವಿಶೇಷ ರಾಶಿಚಕ್ರ ಚಿಹ್ನೆಗಳಿಗೆ ಶುಭವಾಗಲಿ
April 2, 2025
6:18 AM
by: ದ ರೂರಲ್ ಮಿರರ್.ಕಾಂ
ಭದ್ರ ಜಲಾಶಯದಿಂದ ತುಂಗಭದ್ರಾ ನದಿಗೆ 8 ಸಾವಿರ ಕ್ಯೂಸೆಕ್ ನೀರು | ನದಿಪಾತ್ರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ
April 1, 2025
9:38 PM
by: The Rural Mirror ಸುದ್ದಿಜಾಲ
ಮನ್ರೇಗಾ ಕೂಲಿ ದರ ದಿನಕ್ಕೆ 370 ರೂಪಾಯಿಗೆ ಏರಿಕೆ
April 1, 2025
9:28 PM
by: The Rural Mirror ಸುದ್ದಿಜಾಲ
ನಾಳೆಯಿಂದ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಎಚ್ಚರಿಕೆ |
April 1, 2025
8:46 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group