ಸಾಮಾಜಿಕ ಕಾಳಜಿ ಮೆರೆದ ಗುತ್ತಿಗಾರು ಕೃಷಿ ಸಹಕಾರಿ ಸಂಘ | ಗ್ರಾಮೀಣ ಜನರ ಅಲೆದಾಟ ತಪ್ಪಿಸುವ ಕಾರ್ಯಕ್ಕೆ ನೆರವು |

August 6, 2023
12:22 PM
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗೆ ಸಾರ್ವಜನಿಕ ಅಗತ್ಯತೆಗಳಲ್ಲಿ ಒಂದಾದ ಶವ ಸಂಸ್ಕಾರ ಪೆಟ್ಟಿಗೆಯನ್ನು ಹಸ್ತಾಂತರ ಮಾಡಲಾಯಿತು.

ಹುಟ್ಟಿದ ವ್ಯಕ್ತಿಗೆ ಸಾವು ಖಚಿತ. ಆದರೆ ಸಾವು ವಿಷಾದ ಭಾವ ಮೂಡಿಸುತ್ತದೆ. ಅಂತಹ ಸಮಯದಲ್ಲಿ ಕುಟುಂಬದ ಮಂದಿಗೆ ವ್ಯಕ್ತಿಯ ಶವಸಂಸ್ಕಾರ ಮಾಡುವುದು ಗ್ರಾಮೀಣ ಭಾಗದಲ್ಲಿ ಸವಾಲಿನ ಕೆಲಸವಾಗುತ್ತದೆ. ನಗರದಲ್ಲಿ ವಿದ್ಯುತ್‌ ಚಿತಾಗಾರಗಳು ಇರುತ್ತದೆ. ಗ್ರಾಮೀಣ ಭಾಗಗಳಲ್ಲಿ ಕಟ್ಟಿಗೆಗಳಿಗೆ ಅಲೆದಾಟ ಮಾಡಬೇಕಾದ ಸ್ಥಿತಿ ಹಲವು ಕಡೆಗಳಲ್ಲಿ ಇರುತ್ತದೆ. ಇಂತಹ ಸಂದರ್ಭದಲ್ಲಿ ಶವಸಂಸ್ಕಾರದ ಪೆಟ್ಟಿಗೆ ಬಹು ಅನುಕೂಲವಾಗುತ್ತದೆ. ಪರಿಸರ ಸ್ನೇಹಿಯೂ ಆಗಿರುವ ಇಂತಹ ಪೆಟ್ಟಿಗೆಯೊಂದನ್ನು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಗುತ್ತಿಗಾರು ಪ್ರಾಥಮಿಕ ಕೃಷಿ ಸಹಕಾರ ಸಂಘದಿಂದ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗೆ  ಹಸ್ತಾಂತರ ಮಾಡಲಾಯಿತು. 

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು ಗೆ ಸಾರ್ವಜನಿಕ ಅಗತ್ಯತೆಗಳಲ್ಲಿ ಒಂದಾದ ಶವ ಸಂಸ್ಕಾರ ಪೆಟ್ಟಿಗೆಯನ್ನು ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ. ಸಹಕಾರ ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಉಪಾಧ್ಯಕ್ಷ ಕಿಶೋರ್ ಅಂಬೆಕಲ್ಲು,ಮಾಜಿ ಅಧ್ಯಕ್ಷರಾದ ಬೆಳ್ಯಪ್ಪ ಗೌಡ ಕಡ್ತಲಕಜೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎ. ಕೆ ಶರತ್,ನಿರ್ದೇಶಕರು ಸಿಬ್ಬಂದಿಗಳು ಹಾಗೂ ಟ್ರಸ್ಟ್ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2026ರಲ್ಲಿ ಮಳೆ ಕಡಿಮೆ…? ಎಲ್‌ನಿನೊ ಪರಿಣಾಮದಿಂದ ಭಾರತಕ್ಕೆ ಸಾಮಾನ್ಯಕ್ಕಿಂತ ಕಡಿಮೆ ಮಳೆ…!
April 8, 2026
7:47 AM
by: ದ ರೂರಲ್ ಮಿರರ್.ಕಾಂ
ಭಾರತದ ಬಂದರುಗಳು ಚೇತರಿಕೆ..! 915 ಮಿಲಿಯನ್ ಟನ್ ಸರಕು ಸಾಗಣೆ – ಶೇ.7 ಹೆಚ್ಚಳ ದಾಖಲೆ
April 8, 2026
7:30 AM
by: ಮಿರರ್‌ ಡೆಸ್ಕ್
ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ
April 7, 2026
11:25 AM
by: ಮಹೇಶ್ ಪುಚ್ಚಪ್ಪಾಡಿ
ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ
April 7, 2026
7:41 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror