ಹುಟ್ಟಿದ ವ್ಯಕ್ತಿಗೆ ಸಾವು ಖಚಿತ. ಆದರೆ ಸಾವು ವಿಷಾದ ಭಾವ ಮೂಡಿಸುತ್ತದೆ. ಅಂತಹ ಸಮಯದಲ್ಲಿ ಕುಟುಂಬದ ಮಂದಿಗೆ ವ್ಯಕ್ತಿಯ ಶವಸಂಸ್ಕಾರ ಮಾಡುವುದು ಗ್ರಾಮೀಣ ಭಾಗದಲ್ಲಿ ಸವಾಲಿನ ಕೆಲಸವಾಗುತ್ತದೆ. ನಗರದಲ್ಲಿ ವಿದ್ಯುತ್ ಚಿತಾಗಾರಗಳು ಇರುತ್ತದೆ. ಗ್ರಾಮೀಣ ಭಾಗಗಳಲ್ಲಿ ಕಟ್ಟಿಗೆಗಳಿಗೆ ಅಲೆದಾಟ ಮಾಡಬೇಕಾದ ಸ್ಥಿತಿ ಹಲವು ಕಡೆಗಳಲ್ಲಿ ಇರುತ್ತದೆ. ಇಂತಹ ಸಂದರ್ಭದಲ್ಲಿ ಶವಸಂಸ್ಕಾರದ ಪೆಟ್ಟಿಗೆ ಬಹು ಅನುಕೂಲವಾಗುತ್ತದೆ. ಪರಿಸರ ಸ್ನೇಹಿಯೂ ಆಗಿರುವ ಇಂತಹ ಪೆಟ್ಟಿಗೆಯೊಂದನ್ನು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಗುತ್ತಿಗಾರು ಪ್ರಾಥಮಿಕ ಕೃಷಿ ಸಹಕಾರ ಸಂಘದಿಂದ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗೆ ಹಸ್ತಾಂತರ ಮಾಡಲಾಯಿತು.
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು ಗೆ ಸಾರ್ವಜನಿಕ ಅಗತ್ಯತೆಗಳಲ್ಲಿ ಒಂದಾದ ಶವ ಸಂಸ್ಕಾರ ಪೆಟ್ಟಿಗೆಯನ್ನು ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ. ಸಹಕಾರ ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಉಪಾಧ್ಯಕ್ಷ ಕಿಶೋರ್ ಅಂಬೆಕಲ್ಲು,ಮಾಜಿ ಅಧ್ಯಕ್ಷರಾದ ಬೆಳ್ಯಪ್ಪ ಗೌಡ ಕಡ್ತಲಕಜೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎ. ಕೆ ಶರತ್,ನಿರ್ದೇಶಕರು ಸಿಬ್ಬಂದಿಗಳು ಹಾಗೂ ಟ್ರಸ್ಟ್ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…