ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿಗೆ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿ ಜಿಲ್ಲಾ ಪೊಲೀಸರು ಮತ್ತೆ ಐವರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗಿರುವ ಕೆಪಿಟಿಸಿಎಲ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಡಿವೈಸ್ ಗಳ ಮೂಲಕ ಅಕ್ರಮ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಅಥಣಿ ತಾಲೂಕಿನ ನದಿ ಇಂಗಳಗಾವ್ ನ ಕಿರಣ್ ಸಹದೇವ್ ಕೊರಬು (28), ಬೈಲಹೊಂಗಲ ತಾಲುಕಿನ ಜಕನಾಯಕನಕೊಪ್ಪ ಗ್ರಾಮದ ನಾಗಯ್ಯ ಈರಯ್ಯ ಹುಬ್ಬಳ್ಳಿ (26), ಗೋಕಾಕ್ ತಾಲೂಕಿನ ಹಡಗಿನಾಳ ಗ್ರಾಮದ ನಾಗಪ್ಪ ಉದ್ದಪ್ಪ ಹೊಸಮನಿ (29), ಗೋಕಾಕ ತಾಲೂಕಿನ ಬೆಣಚಿಮನರಡಿ ಗ್ರಾಮದ ಶಶಿಕಾಂತ ಶಿವಪ್ಪ ಮಾಗಿ (25) ಹಾಗೂ ಬಗರನಾಳ ಗ್ರಾಮದ ದೇವರಾಜ ಭೀಮಪ್ಪ ಅವಲಿ (26) ಬಂಧಿತರು.
2022 ಅ.7 ರಂದು ನಡೆದ ಕೆಪಿಟಿಸಿಎಲ್ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ಬಂಧಿತ ಆರೋಪಿಗಳು ಅತ್ಯಾಧುನಿಕ ಡಿವೈಸ್ ಬಳಸಿ ಪರೀಕ್ಷೆ ಬರೆದಿದ್ದರು.ಪ್ರಕರಣ ಬಗ್ಗೆ ಈಗಾಗಲೇ ಪೊಲೀಸರು 36 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…